More

    ಇಂಡಿಯಾ ಮೈತ್ರಿಕೂಟ ಗೆದ್ದರೆ ಖಂಡಿತ ಸಿಎಎ, ಯುಸಿಸಿ ಇರುವುದಿಲ್ಲ: ಸಿಎಂ ಮಮತಾ ಬ್ಯಾನರ್ಜಿ

    ಪಶ್ಚಿಮ ಬಂಗಾಳ: ಬುಧವಾರ (ಏ.17) ಅಸ್ಸಾಂನ ಸಿಲ್ಚಾರ್‌ನಲ್ಲಿ ತಮ್ಮ ಸಾರ್ವತ್ರಿಕ ಚುನಾವಣಾ ಪ್ರಚಾರದ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಎನ್‌ಆರ್‌ಸಿ, ಸಿಎಎ ಮತ್ತು ಏಕರೂಪ ನಾಗರಿಕ ಸಂಹಿತೆ ಇರುವುದಿಲ್ಲ” ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ.. ಕೋಳಿಗಳನ್ನು ಕೊಲ್ಲಲು ಸರ್ಕಾರ ಆದೇಶ!

    ಸಿಲ್ಚಾರ್​ನಲ್ಲಿ ಟಿಎಂಸಿ ಪಕ್ಷದ ಅಭ್ಯರ್ಥಿಯಾದ ರಾಧೇಶ್ಯಾಮ್ ಬಿಸ್ವಾಸ್ ಪರ ಬಿರುಸಿನ ಪ್ರಚಾರದ ವೇಳೆ ಮಾತನಾಡಿದ ಸಿಎಂ, “ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಚುನಾವಣೆ ಮತ್ತು ಪ್ರಜಾಪ್ರಭುತ್ವ ಇರುವುದಿಲ್ಲ. ಬಿಜೆಪಿ ಇಡೀ ದೇಶವನ್ನೇ ಬಂಧನ ಶಿಬಿರವನ್ನಾಗಿ ಮಾಡಿಟ್ಟಿದೆ. ವಿರೋಧ ಪಕ್ಷ ಅಧಿಕಾರಕ್ಕೆ ಬಂದರೆ ತಾರತಮ್ಯದ ಎಲ್ಲ ಕಾನೂನುಗಳನ್ನು ರದ್ದುಪಡಿಸುತ್ತೇವೆ” ಎಂದು ಗುಡುಗಿದರು.

    “ವಿರೋಧ ಪಕ್ಷವು ಅಧಿಕಾರಕ್ಕೆ ಬಂದರೆ ಈಶಾನ್ಯ ರಾಜ್ಯದ ಅಭಿವೃದ್ಧಿಗೆ ಮಾತ್ರ ಶ್ರಮಿಸುವುದಾಗಿ ಹೇಳಿದ ಸಿಎಂ, “ಯಾರೂ ನನಗೆ ಏನೂ ಹೇಳದೆ ನಾನು ಅಸ್ಸಾಂನ ಸುಶ್ಮಿತಾ ದೇವ್ ಅವರನ್ನು ಟಿಎಂಸಿಯ ರಾಜ್ಯಸಭಾ ಸಂಸದರನ್ನಾಗಿ ಮಾಡಿದ್ದೇನೆ. ಅವಕಾಶ ಸಿಕ್ಕರೆ ಇನ್ನಷ್ಟು ಕೆಲಸ ಮಾಡುತ್ತೇನೆ” ಎಂದು ಹೇಳಿದರು,(ಏಜೆನ್ಸೀಸ್).

    4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts