More

    ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮಳೆ; ಎಷ್ಟು ದಿನ?

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳಲಿರುವ ಅಸನಿ ಚಂಡಮಾರುತ ಪರಿಣಾಮ ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ. ಈ ಕುರಿತು ಹವಾಮಾನ ತಜ್ಞರು ಮಾಹಿತಿ ನೀಡಿದ್ದು, ಮುನ್ಸೂಚನೆಯನ್ನು ಕೊಟ್ಟಿದ್ದಾರೆ.

    ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆಯಾಗುವುದಿಲ್ಲ. ಆದರೂ, ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

    ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ಮಾತನಾಡಿ, ಚಂಡಮಾರುತ ಪರಿಣಾಮ ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಮಳೆ ಬೀಳಲಿದೆ. ಅಂಡಮಾನ್ ನಿಕೋಬಾರ್‌ನ ಪೂರ್ವಭಾಗದಿಂದ ಆರಂಭವಾಗುವ ಚಂಡಮಾರುತ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನ ಉತ್ತರ ಕರಾವಳಿಯತ್ತ ಚಲಿಸಲಿವೆ. ಮಾ.22ರಂದು ಈ ಎರಡು ದೇಶಗಳ ತೀರಕ್ಕೆ ಅಪ್ಪಳಿಸಲಿದೆ ಎಂದರು.

    ಹಲವೆಡೆ ಮಳೆ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಈ ವರ್ಷದಲ್ಲಿ ಮೊದಲ ಬಾರಿಗೆ ಪೂರ್ವ ಮುಂಗಾರಿನ ಮಳೆಯಾಗಿದೆ. ಬೆಳಗ್ಗೆಯಿಂದ ಬಿಸಿಲು ಜತೆಗೆ ಮೋಡ ಕವಿದ ವಾತಾವರಣವಿತ್ತು. ಸಂಜೆ 4.30ಕ್ಕೆ ಆರಂಭವಾದ ಮಳೆ ಅರ್ಧಗಂಟೆ ಕಾಲ ಸುರಿಯಿತು. ಕೆಲವೆಡೆ ರಸ್ತೆಗಳ ಮೇಲೆ ನೀರು ನಿಂತಿದ ಪರಿಣಾಮ ವಾಹನ ಸವಾರರು ಪರದಾಡಿದರು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಹೆಚ್ಚಳವಾಗಿದ್ದು, ಶನಿವಾರ ಇತರೆ ಜಿಲ್ಲೆಗಳಕ್ಕಿಂತ ರಾಯಚೂರಿನಲ್ಲಿ ಅಧಿಕ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

    ಅಮ್ಮನೆದುರೇ ಮಗಳ ಕುತ್ತಿಗೆ ಮೇಲೆ ಸಾಗಿದ ಆಟೋ; ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts