ರಾಜ್ಯ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲವಾಗಲಿದೆ: ಬಿ.ವೈ.ವಿಜಯೇಂದ್ರ ಭವಿಷ್ಯ | Prediction

Untitled design - 2025-10-05T185839.793
Published on

Prediction: ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ನಡೆ ಡಿಸಿಎಂ ಕಡೆ, ಡಿಸಿಎಂ ಡಿ.ಕೆ.ಶಿವಕುಮಾರ್​ ನಡೆ ಸಿಎಂ ಕಡೆ ಇದೆ. ಆದರೆ, ರಾಜ್ಯದ ಶಾಸಕರ ನಡೆ ಬೆರೆಯದ್ದೇ ಇದೆ ಎಂದರು.

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲವಾದಾಗ ವಿರೋಧ ಪಕ್ಷವಾದ ಬಿಜೆಪಿ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡಲಿದೆ. ಅಲ್ಲದೆ, ರಾಜಕೀಯ ಅವಕಾಶ ಒಂದೊಮ್ಮೆ ಬಂದಾಗ ಹಾಗ ನೋಡೋಣ ಎಂದು ವಿಜಯೇಂದ್ರ ಹೇಳಿದರು.

ಪಕ್ಷದ ವರಿಷ್ಠರು ಎಲ್ಲಿಯೂ ಹೇಳಿಲ್ಲ!

ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡಬೇಡಿ ಅದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತೆ ಎಂದು ಈಗಾಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ. ಅಂದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಪಕ್ಷದ ವರಿಷ್ಠರು ಎಲ್ಲಿಯೂ ಹೇಳಿಲ್ಲ. ಹೀಗಾಗಿ, ಬಿಹಾರ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗುವುದಿಲ್ಲ, ಅಲ್ಲೋಲ ಕಲ್ಲೋಲವಾಗುವುದು ಸ್ಪಷ್ಟ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net