ಹೃದಯದ ಆರೋಗ್ಯ ಕಾಪಾಡಲು ಪ್ರತಿನಿತ್ಯ ಈ ಹಣ್ಣುಗಳನ್ನು ಸೇವಿಸಿ!| Health tips

Fruits
Published on

Health tips: ಪ್ರತಿನಿತ್ಯ ಎದುರಿಸುವಂತಹ ಒತ್ತಡ, ತಪ್ಪು ಆಹಾರ ಪದ್ಧತಿಗಳು ಇತ್ತೀಚೆಗೆ ಹೃದಯಘಾತ ಸಮಸ್ಯೆಗಳನ್ನು ಹೆಚ್ಚುಸುತ್ತವೆ. ಈ ಅಭ್ಯಾಸಗಳು ದೇಹದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುವಂತೆ ಮಾಡುತ್ತವೆ. ಹಾಗಾಗಿ ನಮ್ಮ ಹೃದಯವನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿರುವುದರಿಂದ ದಿನನಿತ್ಯ ಉತ್ತಮ ಆಹಾರ ಸೇವಿಸುವುದು ನಮ್ಮ ಕರ್ತವ್ಯವಾಗಿರುತ್ತದೆ.

ನಾವು ಸೇವಿಸುವಂತಹ ಕೆಲವೊಂದು ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಪಾಲಿಫಿನಾಲ್​ಗಳು ರಕ್ತವನ್ನು ಪೂರೈಸುವ ಅಪಧಮನಿಗಳಲ್ಲಿ ಸಂಗ್ರಹವಾಗುವ ಕೆಟ್ಟ ಕೊಲೆಸ್ಟ್ರಾಲ್, ಕೊಬ್ಬು ಮತ್ತು ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಹೃದಯಾಘಾತದ ಅಪಾಯವನ್ನು ತಡೆಯಲು ಸಹಾಯ ಮಾಡುತ್ತದೆ. ಹಾಗಾಗಿ ನೀವು ಪ್ರತಿನಿತ್ಯ ಈ 5 ಹಣ್ಣುಗಳನ್ನು ತಿನ್ನಿ ಹೃದಯಘಾತವನ್ನು ದೂರ ಕಳುಹಿಸಿ...

1. ಸೇಬು

ದಿನಕ್ಕೆ ಒಂದು ಸೇಬು ವೈದ್ಯರಿಂದ ದೂರ ಇರಿ ಎಂಬ ಹೇಳಿಕೆಯನ್ನು ನಾವು ಕೇಳಿರಬಹುದು. ಹಾಗೆಯೇ, ಈ ಹಣ್ಣು ಹೃದಯದ ಆರೋಗ್ಯಕ್ಕೆ ಉತ್ತಮ ಹಣ್ಣು ಎಂದು ಪರಿಗಣಿಸಲಾಗುತ್ತದೆ. ಇವು ಪೆಕ್ಟಿನ್ ಎಂಬ ಕರಗುವ ಫೈಬರ್ ಅನ್ನು ಹೊಂದಿದ್ದು, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೇಬಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಅಪಧಮನಿಗಳಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ದಿನಕ್ಕೆ ಒಂದು ಸೇಬು ಹಣ್ಣನ್ನು ತಿನ್ನುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

2. ಕಿತ್ತಳೆ

ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಫ್ಲೇವನಾಯ್ಡ್‌ಗಳು ಸಮೃದ್ಧವಾಗಿದ್ದು , ಇದು ಹೃದಯದ ಆರೋಗ್ಯಕ್ಕೆ ಉತ್ತಮವಾದ ಆಹಾರವಾಗಿದೆ. ಇವು ರಕ್ತದೊತ್ತಡವನ್ನು ಕಡಿಮೆ ಮಾಡಿ, ಅಪಧಮನಿಗಳ ಸ್ಥಿತಿಸ್ಥಾಪಕತ್ವವನ್ನು ಕಾಪಾಡಿಕೊಳ್ಳುತ್ತದೆ. ಪ್ರತಿದಿನ ಕಿತ್ತಳೆ ಸೇವಿಸುವುದರಿಂದ ರಕ್ತ ಪರಿಚಲನೆಯನ್ನು ಸುಧಾರಿಸಿ, ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ.

3. ದ್ರಾಕ್ಷಿ

ದ್ರಾಕ್ಷಿಯಲ್ಲಿರುವ ಪಾಲಿಫಿನಾಲ್‌ಗಳು ಹೃದಯದ ಆರೋಗ್ಯಕ್ಕೆ ಉತ್ತಮವಾದ ಆಹಾರವಾಗಿದೆ. ಇವು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹಾಗೆಯೇ, ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ಮೆದುಳು ಮತ್ತು ಮೂಳೆಗಳಿಗೂ ಪ್ರಯೋಜನವಿದೆ.

4. ಪಪ್ಪಾಯಿ

ಪಪ್ಪಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಅಗತ್ಯವಾದ ಜೀವಸತ್ವಗಳಿವೆ. ಇವುಗಳು ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತವೆ. ಇದು ರಕ್ತದಲ್ಲಿರುವ ಕೊಲೆಸ್ಟ್ರಾಲ್​ನ್ನು ಕಡಿಮೆ ಮಾಡಿ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

5. ದಾಳಿಂಬೆ

ದಾಳಿಂಬೆಯನ್ನು ಹೃದಯಕ್ಕೆ ಅಮೃತವೆಂದು ಪರಿಗಣಿಸಲಾಗುತ್ತದೆ. ಇದರಲ್ಲಿರುವ ಪಾಲಿಫಿನಾಲ್‌ಗಳು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಇದು ರಕ್ತನಾಳಗಳನ್ನು ಸ್ವಚ್ಛವಾಗಿರುವಂತೆ ಮಾಡುತ್ತದೆ. ಪ್ರತಿದಿನ ದಾಳಿಂಬೆ ಹಣ್ಣು ಹಾಗೂ ಅದರ ಜ್ಯೂಸ್​ನ್ನು ಕುಡಿಯುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. (ಏಜೆನ್ಸೀಸ್​)

ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್" ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net