

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಮೊದಲ ದಿನ ಯಶಸ್ವಿಯಾಗಿ ನಡೆದಿದೆ. ಕಳೆದ ವಾರ್ಷಿಕ ಪರೀಕ್ಷೆಗಿಂತಲೂ ಹೆಚ್ಚಿನ ಹಾಜರಾತಿ ಈ ಸಲ ಕಂಡುಬಂದಿದ್ದು, ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನಡೆದಿರುವ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಮೊದಲ ದಿನದ ಪರೀಕ್ಷೆ ವೇಳೆ ರಾಜ್ಯದಲ್ಲಿ ಕಂಡುಬಂದಿರುವ ಕೆಲವು ವಿಶೇಷಗಳನ್ನೂ ಸುದ್ದಿಗಾರರ ಮುಂದೆ ಹಂಚಿಕೊಂಡಿದ್ದಾರೆ.
ಒಟ್ಟಾರೆಯಾಗಿ ಪರೀಕ್ಷೆ ಯಾವುದೇ ವಿಘ್ನಗಳಿಲ್ಲದೇ ಯಶಸ್ವಿಯಾಗಿ ನಡೆದಿದ್ದು ಇದಕ್ಕೆ ಕಾರಣೀಭೂತರಾದ ನಮ್ಮ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ವೃಂದಕ್ಕೆ ಸಚಿವರು ಕೃತಜ್ಞತೆ ಸಲ್ಲಿಸಿದರು.