Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ ಜನಿಸುತ್ತಾನೆ ಎಂಬುದು ಆತನ ಭವಿಷ್ಯದ ಜೀವನ, ನಿರ್ದಿಷ್ಟ ಅಭ್ಯಾಸಗಳು ಮತ್ತು ಆತನ ಸಕಾರಾತ್ಮಕ ಮತ್ತು ನಕಾರಾತ್ಮಕ ಗುಣಗಳ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ.
ಇಡೀ ಜ್ಯೋತಿಷ್ಯ ನಿಂತಿರುವುದು ಗ್ರಹಗಳ ಆಧಾರದ ಮೇಲೆ. ಏಕೆಂದರೆ, ಗ್ರಹಗಳ ಚಲನೆಯು ರಾಶಿಚಕ್ರ ಮತ್ತು ನಕ್ಷತ್ರಗಳ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿಯೇ ಏನಾದರೂ ನಡೆದರೆ ಎಲ್ಲದಕ್ಕೂ ಗ್ರಹಗತಿಗಳೇ ಕಾರಣ ಎಂದು ನಮ್ಮ ಹಿರಿಯರು ಹೇಳುವುದನ್ನು ಕೂಡ ನಾವು ನೋಡಿದ್ದೇವೆ. ಇದು ಬಹುತೇಕ ಸಂದರ್ಭಗಳಲ್ಲಿ ನಿಜವೂ ಆಗಿದೆ. ಹೀಗಾಗಿ ಜ್ಯೋತಿಷ್ಯವನ್ನು ಬಹುತೇಕ ಮಂದಿ ನಂಬುತ್ತಾರೆ. ಏನೇ ಕಹಿ ಘಟನೆ ನಡೆದರೆ ಅದಕ್ಕೆ ಜ್ಯೋತಿಷ್ಯದಲ್ಲಿ ಪರಿಹಾರ ಇದೆ ಎಂದು ಅನೇಕ ಮಂದಿ ನಂಬುತ್ತಾರೆ.
ಕೆಲವು ರಾಶಿಚಕ್ರ ಚಿಹ್ನೆಗಳಲ್ಲಿ ಜನಿಸಿದ ಮಹಿಳೆಯರು ಹೆಚ್ಚಿನ ಬುದ್ಧಿವಂತಿಕೆಯೊಂದಿಗೆ ಜನಿಸುತ್ತಾರೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ನಂಬಲಾಗಿದೆ. ಇತರರು ಅರ್ಥಮಾಡಿಕೊಳ್ಳಲು ಒಂದು ಗಂಟೆ ತೆಗೆದುಕೊಳ್ಳುವುದನ್ನು ಕೇವಲ ಹತ್ತು ನಿಮಿಷಗಳಲ್ಲಿ ಸ್ಪಷ್ಟವಾಗಿ ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ಈ ರಾಶಿಯವರು ಹೊಂದಿದ್ದಾರಂತೆ. ಅಂತಹ ತೀಕ್ಷ್ಣ ಬುದ್ಧಿಶಕ್ತಿಯನ್ನು ಹೊಂದಿರುವ ಮಹಿಳೆಯರು ಯಾವ ರಾಶಿಗಳಲ್ಲಿ ಜನಿಸುತ್ತಾರೆ ಎಂಬುದನ್ನು ನಾವೀಗ ತಿಳಿಯೋಣ.
ಕುಂಭ ರಾಶಿ
ಕುಂಭ ರಾಶಿಯ ಮಹಿಳೆಯರು ಸ್ವಾಭಾವಿಕವಾಗಿಯೇ ಬಹಳ ಬುದ್ಧಿವಂತರು. ಪುಸ್ತಕದ ಜ್ಞಾನವನ್ನು ಮೀರಿ, ಅವರು ಅತ್ಯುತ್ತಮ ವಿಶ್ಲೇಷಣಾತ್ಮಕ ಕೌಶಲ್ಯ ಮತ್ತು ಇತರರು ಅರ್ಥಮಾಡಿಕೊಳ್ಳಲು ಕಷ್ಟಪಡುವ ವಿಷಯಗಳನ್ನು ಸಹ ಸುಲಭವಾಗಿ ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಈ ರಾಶಿಯವರು ಯಾರ ಒತ್ತಡವಿಲ್ಲದೆ, ಪ್ರಪಂಚದ ಸಾಮಾನ್ಯ ವಿಷಯಗಳನ್ನು ಸ್ವತಃ ಕಲಿಯುವ ನೈಸರ್ಗಿಕ ಬಯಕೆಯೊಂದಿಗೆ ಜನಿಸುತ್ತಾರೆ. ಅವರ ಈ ಗುಣವು ಜೀವನದಲ್ಲಿ ವಿವಿಧ ಸಾಧನೆಗಳು ಮತ್ತು ಯಶಸ್ಸಿಗೆ ಕಾರಣವಾಗುತ್ತದೆ.
ಕನ್ಯಾ ರಾಶಿ
ಕನ್ಯಾ ರಾಶಿಯ ಚಿಹ್ನೆಯಡಿಯಲ್ಲಿ ಜನಿಸಿದ ಮಹಿಳೆಯರು ತಮ್ಮ ವಾಸ್ತವಿಕ ಬುದ್ಧಿವಂತಿಕೆಗೆ ಹೆಸರುವಾಸಿಯಾಗಿರುತ್ತಾರೆ. ಅವರು ಪರಿಸ್ಥಿತಿಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ನಿಪುಣರು. ಒಗಟುಗಳಿಗೆ ಉತ್ತರಗಳನ್ನು ಹುಡುಕುವಲ್ಲಿ ಅವರು ಬಹಳ ಆಸಕ್ತಿ ಹೊಂದಿರುತ್ತಾರೆ. ಅವರ ಬುದ್ಧಿವಂತಿಕೆಯು ಇತರರಿಗಿಂತ ಹಲವು ಪಟ್ಟು ಹೆಚ್ಚು. ಈ ರಾಶಿಚಕ್ರ ಚಿಹ್ನೆಯ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸ್ವಲ್ಪ ಮಟ್ಟಿಗೆ ಜ್ಞಾನವನ್ನು ಹೊಂದಿರುತ್ತಾರೆ ಮತ್ತು ಹೊಸ ಆವಿಷ್ಕಾರಗಳ ಬಗ್ಗೆ ಕಲಿಯುವ ಸಾಮರ್ಥ್ಯವನ್ನು ಸಹ ತೋರಿಸುತ್ತಾರೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯಲ್ಲಿ ಜನಿಸಿದ ಮಹಿಳೆಯರು ಹೆಚ್ಚು ಭಾವನಾತ್ಮಕವಾಗಿರುತ್ತಾರೆ. ಆದರೆ ಅವರು ಹುಟ್ಟಿನಿಂದಲೇ ಬುದ್ಧಿವಂತರಾಗಿರುವುದರಿಂದ, ಅವರು ಎಷ್ಟೇ ಕಠಿಣ ಭಾವನಾತ್ಮಕ ಹೋರಾಟಗಳಿಗೆ ಸಿಲುಕಿದರೂ, ಅಂತಿಮವಾಗಿ ಅವುಗಳಿಂದ ಹೊರಬರುತ್ತಾರೆ. ಈ ರಾಶಿಚಕ್ರ ಚಿಹ್ನೆಯ ಮಹಿಳೆಯರು ಖಂಡಿತವಾಗಿಯೂ ತಮ್ಮನ್ನು ತಾವು ಉದ್ಧಾರ ಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಅವರು ಜನರನ್ನು ಓದುವಲ್ಲಿ ಮತ್ತು ಬೂಟಾಟಿಕೆಯನ್ನು ಗುರುತಿಸುವಲ್ಲಿ ಪರಿಣಿತರು.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್ ನೆಟ್” ಜವಾಬ್ದಾರರಾಗಿರುವುದಿಲ್ಲ.
ಸುನೀಲ್ ನಾರಾಯಣ್ ಬ್ಯಾಟ್ ವಿಕೆಟ್ಗೆ ಬಡಿದರೂ ಅಂಪೈರ್ ಔಟ್ ಕೊಡಲಿಲ್ಲ ಏಕೆ? ಇಲ್ಲಿದೆ ನೋಡಿ ಕಾರಣ…KKR vs RCB