ಈ ಮೂರು ರಾಶಿಯ ಜನರಲ್ಲಿರುವಷ್ಟು ತಾಳ್ಮೆ ಬೇರೆ ಯಾರಲ್ಲೂ ಇರುವುದಿಲ್ಲವಂತೆ! ನಿಮ್ಮ ರಾಶಿಯೂ ಇದೇನಾ? Zodiac Signs

Zodiac Signs
Published on

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿಯ ಜನ್ಮ ರಾಶಿಯು ಆತನ ಭವಿಷ್ಯದ ಜೀವನ, ವಿಶಿಷ್ಟ ವ್ಯಕ್ತಿತ್ವ ಮತ್ತು ಸಕಾರಾತ್ಮಕ ಹಾಗೂ ನಕಾರಾತ್ಮಕ ಗುಣಗಳ ಮೇಲೆ ಪ್ರಮುಖ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ. ಜನ್ಮ ರಾಶಿಯನ್ನು ವ್ಯಕ್ತಿಯ ಹುಟ್ಟಿದ ಗಳಿಗೆಯ ಆಧಾರದ ಮೇಲೆ ನಿರ್ಧರಿಸಲಾಗುತ್ತಿದೆ.

ಇಡೀ ಜ್ಯೋತಿಷ್ಯ ನಿಂತಿರುವುದು ಗ್ರಹಗಳ ಆಧಾರದ ಮೇಲೆ. ಏಕೆಂದರೆ, ಗ್ರಹಗಳ ಚಲನೆಯು ರಾಶಿಚಕ್ರ ಮತ್ತು ನಕ್ಷತ್ರಗಳ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿಯೇ ಏನಾದರೂ ನಡೆದರೆ ಎಲ್ಲದಕ್ಕೂ ಗ್ರಹಗತಿಗಳೇ ಕಾರಣ ಎಂದು ನಮ್ಮ ಹಿರಿಯರು ಹೇಳುವುದನ್ನು ಕೂಡ ನಾವು ನೋಡಿದ್ದೇವೆ. ಇದು ಬಹುತೇಕ ಸಂದರ್ಭಗಳಲ್ಲಿ ನಿಜವೂ ಆಗಿದೆ. ಹೀಗಾಗಿ ಜ್ಯೋತಿಷ್ಯವನ್ನು ಬಹುತೇಕ ಮಂದಿ ನಂಬುತ್ತಾರೆ. ಏನೇ ಕಹಿ ಘಟನೆ ನಡೆದರೆ ಅದಕ್ಕೆ ಜ್ಯೋತಿಷ್ಯದಲ್ಲಿ ಪರಿಹಾರ ಇದೆ ಎಂದು ಅನೇಕ ಮಂದಿ ನಂಬುತ್ತಾರೆ.

ಅದೇ ರೀತಿಯಾಗಿ ಕೆಲವು ರಾಶಿಚಕ್ರ ಚಿಹ್ನೆಗಳಲ್ಲಿ ಜನಿಸಿದ ಜನರು ಯಾವುದೇ ಪರಿಸ್ಥಿತಿಯಲ್ಲಿ ತಾಳ್ಮೆಯಿಂದಿರುವುದಕ್ಕೆ ಹೆಸರುವಾಸಿಯಾಗಿದ್ದಾರೆ. ಹಾಗಾದರೆ, ಆ ರಾಶಿಯವರು ಯಾರೆಂಬುದನ್ನು ನಾವೀಗ ತಿಳಿದುಕೊಳ್ಳೋಣ.

ವೃಷಭ ರಾಶಿ

ಪ್ರೀತಿ ಮತ್ತು ಪ್ರಣಯದ ಗ್ರಹವಾದ ಶುಕ್ರನಿಂದ ಆಳಲ್ಪಡುವ ವೃಷಭ ರಾಶಿಯವರು ಇತರರ ಬಗ್ಗೆ ದಯೆ ಮತ್ತು ತಾಳ್ಮೆಯಿಂದ ವರ್ತಿಸುವ ಸಾಮರ್ಥ್ಯದೊಂದಿಗೆ ಜನಿಸುತ್ತಾರೆ. ಇವರು ತಮ್ಮ ಜೀವನ ಸಂಗಾತಿ ಮತ್ತು ಸಂಬಂಧಗಳೊಂದಿಗೆ ಅಪಾರ ತಾಳ್ಮೆಯನ್ನು ಹೊಂದಿರುತ್ತಾರೆ. ಕಠಿಣ ಸಂದರ್ಭಗಳಲ್ಲಿಯೂ ಸಹ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದೆ ವಿಷಯಗಳನ್ನು ಚೆನ್ನಾಗಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಗುಣವನ್ನು ಇವರು ಖಂಡಿತವಾಗಿಯೂ ಹೊಂದಿರುತ್ತಾರೆ.

ಮೀನ ರಾಶಿ

ಮೀನ ರಾಶಿಯವರು ಸಾಮಾನ್ಯವಾಗಿ ತಮ್ಮ ಜೀವನದಲ್ಲಿ ಆಗಬೇಕಾದ ಅನೇಕ ವಿಷಯಗಳ ಬಗ್ಗೆ ಆಗಾಗ್ಗೆ ಕನಸು ಕಾಣುವ ಅಭ್ಯಾಸವನ್ನು ಹೊಂದಿರುತ್ತಾರೆ. ಅವರು ಸ್ವಾಭಾವಿಕವಾಗಿ ತುಂಬಾ ಕರುಣಾಮಯಿ ಮತ್ತು ದಯಾಳುಗಳು ಮತ್ತು ಇತರರೊಂದಿಗೆ ತಾಳ್ಮೆಯಿಂದ ಮಾತನಾಡುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಅವರು ಏನನ್ನೂ ಹೇಳದೆಯೇ ಇತರರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತಾರೆ.

ಮಕರ ರಾಶಿ

ಶಿಸ್ತಿನಿಂದ ನಡೆಸಲ್ಪಡುವ ಮಕರ ರಾಶಿಯವರು ಮದುವೆ ಮತ್ತು ಸಂಬಂಧಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ ಮತ್ತು ಅವುಗಳನ್ನು ಗೌರವಿಸುತ್ತಾರೆ. ಅವರು ಸಂಬಂಧಗಳನ್ನು ಕಳೆದುಕೊಂಡಾಗಲೂ, ಅವರ ಅಪಾರ ತಾಳ್ಮೆಯಿಂದಾಗಿ ಸಂಬಂಧವನ್ನು ಉಳಿಸಿಕೊಳ್ಳುತ್ತಾರೆ. ಅವರ ಈ ಗುಣವು ಅವರಿಗೆ ಅನೇಕ ಕ್ಷೇತ್ರಗಳಲ್ಲಿ ಯಶಸ್ಸು ಮತ್ತು ಗೌರವವನ್ನು ತರುತ್ತದೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್​ ನೆಟ್”​ ಜವಾಬ್ದಾರರಾಗಿರುವುದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net