ಈ 3 ರಾಶಿಯವರು ತಮ್ಮ ಸ್ವಾರ್ಥಕ್ಕಾಗಿ ಏನು ಬೇಕಾದ್ರೂ ಮಾಡ್ತಾರಂತೆ! ಅವರು ಯಾರೆಂದು ನಿಮಗೆ ಗೊತ್ತಾ? Zodiac Signs

Zodiac Signs

Zodiac Signs : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ. ಹಿಂದು ಧರ್ಮದಲ್ಲಿ ಈ ಜನ್ಮ ದಿನಾಂಕ ಮತ್ತು ಹುಟ್ಟಿದ ಗಳಿಗೆಯು ವ್ಯಕ್ತಿಯ ಜೀವನದ ಮೇಲೆ ಬಹಳ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ.

blank

ಹುಟ್ಟಿದ ದಿನ ಮತ್ತು ಗಳಿಗೆಯ ಆಧಾರದ ಮೇಲೆ ವ್ಯಕ್ತಿಯ ರಾಶಿ ಮತ್ತು ನಕ್ಷತ್ರಗಳನ್ನು ನಿರ್ಧರಿಸಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಆತನ ಭವಿಷ್ಯ ಜೀವನ ಮತ್ತು ವ್ಯಕ್ತಿತ್ವ ಹಾಗೂ ಹಣಕಾಸಿನ ಸ್ಥಿತಿಯ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ.

ಇಡೀ ಜ್ಯೋತಿಷ್ಯ ನಿಂತಿರುವುದು ಗ್ರಹಗಳ ಆಧಾರದ ಮೇಲೆ. ಏಕೆಂದರೆ, ಗ್ರಹಗಳ ಚಲನೆಯು ರಾಶಿಚಕ್ರ ಮತ್ತು ನಕ್ಷತ್ರಗಳ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿಯೇ ಏನಾದರೂ ನಡೆದರೆ ಎಲ್ಲದಕ್ಕೂ ಗ್ರಹಗತಿಗಳೇ ಕಾರಣ ಎಂದು ನಮ್ಮ ಹಿರಿಯರು ಹೇಳುವುದನ್ನು ಕೂಡ ನಾವು ನೋಡಿದ್ದೇವೆ. ಇದು ಬಹುತೇಕ ಸಂದರ್ಭಗಳಲ್ಲಿ ನಿಜವೂ ಆಗಿದೆ. ಹೀಗಾಗಿ ಜ್ಯೋತಿಷ್ಯವನ್ನು ಬಹುತೇಕ ಮಂದಿ ನಂಬುತ್ತಾರೆ. ಏನೇ ಕಹಿ ಘಟನೆ ನಡೆದರೆ ಅದಕ್ಕೆ ಜ್ಯೋತಿಷ್ಯದಲ್ಲಿ ಪರಿಹಾರ ಇದೆ ಎಂದು ಅನೇಕ ಮಂದಿ ನಂಬುತ್ತಾರೆ.

ಆಂದಹಾಗೆ, ಕೆಲವು ರಾಶಿಚಕ್ರ ಚಿಹ್ನೆಗಳ ಅಡಿಯಲ್ಲಿ ಜನಿಸಿದ ಜನರು ಸ್ವಾಭಾವಿಕವಾಗಿಯೇ ತಮ್ಮ ಯೋಗಕ್ಷೇಮಕ್ಕೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಅಂದ್ರೆ ಅವರಲ್ಲಿ ಸ್ವಾರ್ಥ ಹೆಚ್ಚಿರುತ್ತದೆ. ಹಾಗಾದರೆ, ಯಾವ ರಾಶಿಚಕ್ರ ಚಿಹ್ನೆಗಳು ತಮ್ಮ ಸ್ವಾರ್ಥಕ್ಕಾಗಿ ಯಾವುದೇ ಮಟ್ಟಕ್ಕೆ ಹೋಗುವ ಗುಣವನ್ನು ಹೊಂದಿವೆ ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.

ಕನ್ಯಾ ರಾಶಿ

ಕನ್ಯಾ ರಾಶಿಯವರು ತುಂಬಾ ಸ್ವಾರ್ಥಿಗಳು. ತಾವು ಜಗತ್ತಿನ ಶ್ರೇಷ್ಠ ಪ್ರತಿಭೆಗಳು ಅಂತ ತಮ್ಮನ್ನು ತಾವೇ ಮೆಚ್ಚಿಕೊಳ್ಳುತ್ತಾರೆ. ಅಲ್ಲದೆ, ತಮಗೆ ಬೇಕಾದುದನ್ನು ಪಡೆಯಲು ಸುಳ್ಳು ಹೇಳುವ ಗುಣವನ್ನು ಹೊಂದಿರುತ್ತಾರೆ. ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲು ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ. ಇತರರಿಗೆ ಅದರಿಂದ ಆಗುವ ಪರಿಣಾಮಗಳ ಬಗ್ಗೆ ಸ್ವಲ್ಪವೂ ಯೋಚಿಸುವುದಿಲ್ಲ. ತಮ್ಮ ಖುಷಿಯೇ ಅವರಿಗೆ ಮುಖ್ಯವಾಗಿರುತ್ತದೆ.

ಇದನ್ನೂ ಓದಿ: ಸ್ವಲ್ಪ ಯೋಚಿಸಬೇಕಿತ್ತು…KKR ಹೀನಾಯ ಸೋಲಿಗೆ ಅಂಜಿಕ್ಯಾ ರಹಾನೆ ಮಾಡಿದ ಆ ಒಂದು ಮಿಸ್ಟೇಕ್​ ಕಾರಣ! IPL 2025

ವೃಷಭ ರಾಶಿ

ವೃಷಭ ರಾಶಿಯವರು ಎಲ್ಲರಿಗಿಂತ ನಾವೇ ಉತ್ತಮರು ಮತ್ತು ಹೆಚ್ಚು ಅರ್ಹರು ಎಂಬುದನ್ನು ನಂಬುತ್ತಾರೆ. ತಮ್ಮ ಸ್ವಂತ ಲಾಭಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಅವರಿಗೆ ಇತರರ ಬಗ್ಗೆ ಸಹಾನುಭೂತಿ ಇರುವುದಿಲ್ಲ. ತಮ್ಮ ಜೀವನವೇ ಮುಖ್ಯವಾಗಿರುತ್ತದೆ. ತಮ್ಮ ನಿಲುವಿನಿಂದ ಬೇರೆಯವರೆಗೆ ತೊಂದರೆಯಾದರೂ ಅದರ ಬಗ್ಗೆ ಯೋಚನೆ ಮಾಡುವುದಿಲ್ಲ. ಈ ರಾಶಿಯವರು ಬಲವಾದ ಕೋಪವನ್ನು ಹೊಂದಿರುತ್ತಾರೆ. ಜೀವನದಲ್ಲಿ ಅವರು ಎದುರಿಸುವ ಅನೇಕ ದ್ರೋಹಗಳು ಅವರನ್ನು ತುಂಬಾ ಸ್ವಾರ್ಥಿಗಳನ್ನಾಗಿ ಮಾಡುತ್ತವೆ.

ಸಿಂಹ ರಾಶಿ

ಸಿಂಹ ರಾಶಿಯವರು ತುಂಬಾ ಅಂತರ್ಮುಖಿಯಾಗಿರುತ್ತಾರೆ, ಆದ್ದರಿಂದ ಅವರು ಸ್ವಾರ್ಥಿಗಳಾಗಿರುವುದು ಆಶ್ಚರ್ಯವೇನಿಲ್ಲ. ಪ್ರಪಂಚವು ತಮ್ಮ ಸುತ್ತ ಸುತ್ತುತ್ತದೆ ಎಂದು ಅವರು ಭಾವಿಸುತ್ತಾರೆ ಮತ್ತು ಅದನ್ನು ಹಾಗೆಯೇ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡುತ್ತಾರೆ. ಅವರು ತುಂಬಾ ಆತ್ಮವಿಶ್ವಾಸದಿಂದ ಕಾಣುತ್ತಾರೆ, ಆದರೆ ಇತರರಿಗೆ ಸ್ವಾರ್ಥಿಗಳಾಗಿ ಕಾಣಿಸಿಕೊಳ್ಳಲು ಬಯಸುವುದಿಲ್ಲ. ಆದ್ದರಿಂದ ಅವರು ಮೊದಲು ಇತರರ ಬಗ್ಗೆ ಕಾಳಜಿ ವಹಿಸುವಂತೆ ಕಾಣುತ್ತಾರೆ. ಆದರೆ, ಒಳಗಡೆ ತುಂಬಾ ಸ್ವಾರ್ಥಿಗಳಾಗಿರುತ್ತಾರೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್​ ನೆಟ್”​ ಜವಾಬ್ದಾರರಾಗಿರುವುದಿಲ್ಲ.

ಈ 3 ನಕ್ಷತ್ರಗಳಲ್ಲಿ ಜನಿಸಿದ ಮಹಿಳೆಯರು ತಮ್ಮ ಜೀವನ ಸಂಗಾತಿಯನ್ನು ಹೆಚ್ಚು ಕಂಟ್ರೋಲ್​ ಮಾಡುತ್ತಾರಂತೆ! Birth Stars

ಈ ದೇಶದಲ್ಲಿ 12 ಗಂಟೆಯ ಗಡಿಯಾರಗಳೇ ಇಲ್ಲ, ಇಲ್ಲಿರೋದು ಕೇವಲ 11 ಗಂಟೆ ಮಾತ್ರ! ಅಚ್ಚರಿಯ ಕಾರಣ ಹೀಗಿದೆ… 11 Hour Clock

Share This Article

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…