ಬೆಂಗಳೂರು: ವಿಧಾನಪರಿಷತ್ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಸೋಮವಾರ ಸಂಜೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿರುವ ಕಾಂಗ್ರೆಸ್, ತಮ್ಮ ಪಕ್ಷದ ಇಬ್ಬರಿಗೆ ಟಿಕೆಟ್ ಖಾತ್ರಿ ಪಡಿಸಿದೆ. ಇನ್ನೊಂದೆಡೆ ಬಿಜೆಪಿ ಹಾಗೂ ಜೆಡಿಎಸ್ನಲ್ಲಿ ಇನ್ನೂ ಕಸರತ್ತು ಮುಂದುವರಿದಿದೆ.
ವಿಧಾನಸಭೆಯ ಬಲಾಬಲದ ಆಧಾರದಲ್ಲಿ ಕಾಂಗ್ರೆಸ್ ಎರಡು ಸ್ಥಾನ ಗೆಲ್ಲಲಷ್ಟೇ ಸಾಧ್ಯ. ಹೀಗಾಗಿ ಇಬ್ಬರ ಹೆಸರನ್ನು ಮಾತ್ರ ಅಂತಿಮಗೊಳಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿಕೊಂಡ ಪಕ್ಷದ ವರಿಷ್ಠರು ಆಕಾಂಕ್ಷಿಗಳ ಬಗ್ಗೆ ಚರ್ಚೆ ನಡೆಸಿ, ತಾವು ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದರು.
ಅದರಂತೆ ಸೋಮವಾರ ಸಂಜೆ ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ್ ಯಾದವ್ ಅವರ ಹೆಸರನ್ನು ಅಂತಿಮಗೊಳಿಸಿದ ಎಐಸಿಸಿಯು, ಪರಿಷತ್ ಸದಸ್ಯರಾಗಲು ಅವರಿಬ್ಬರಿಗೆ ಅವಕಾಶ ಮಾಡಿಕೊಟ್ಟಿದೆ.
ಮಲಗಿಕೊಂಡೇ ಓದಿ 580 ಅಂಕ ಪಡೆದ ಶ್ರಾವ್ಯಾ!; ಕರುಳು ಕಾಯಿಲೆ ನಡುವೆಯೂ ಎಸ್ಸೆಸ್ಸೆಲ್ಸಿಯಲ್ಲಿ ಸಾಧನೆ..
ಒಂದೂವರೆ ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿದ ತಾಯಿ; ಕಾರಣ ಇದೇನಾ?