

Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು ಕೂಡ ಇದ್ದಾರೆ. ಪ್ರತಿಯೊಂದು ಕೆಲಸ, ಕಾರ್ಯಗಳನ್ನು ಮಾಡಬೇಕಾದರೂ ಕೆಲವರು ಜೋತಿಷ್ಯದ ಮೊರೆ ಹೋಗುತ್ತಾರೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆಯು ಎಲ್ಲ 12 ರಾಶಿಚಕ್ರದ ಚಿಹ್ನೆಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ.
ಮನುಷ್ಯನ ಒಳಿತು-ಕೆಡುಕು, ನಡೆ-ನುಡಿ ಎಲ್ಲದರ ಮೇಲೂ ಗ್ರಹಗಳು ಪ್ರಭಾವ ಬೀರುತ್ತವೆ. ಒಬ್ಬ ವ್ಯಕ್ತಿಯ ಭವಿಷ್ಯದ ಜೀವನ ಹೇಗಿರುತ್ತದೆ? ಆತನ ವಿಶಿಷ್ಟ ಗುಣಗಳು ಏನೆಂಬುದನ್ನು ಗ್ರಹಗತಿಗಳ ಆಧಾರದ ಮೇಲೆ ಸುಲಭ ಊಹಿಸಬಹುದಾಗಿದೆ. ಇದು ಬಹುತೇಕ ಸಂದರ್ಭಗಳಲ್ಲಿ ನಿಜವೂ ಆಗಿದೆ. ಹೀಗಾಗಿ ಜ್ಯೋತಿಷ್ಯವನ್ನು ಬಹುತೇಕ ಮಂದಿ ನಂಬುತ್ತಾರೆ.
ಅಂದಹಾಗೆ ಪ್ರೀತಿಯಲ್ಲಿ ಮೋಸ ಹೋಗುವುದು ಇಂದಿನ ಕಾಲದ ಸಾಮಾನ್ಯ ಸಂಗತಿಯಾಗಿದೆ. ಕೆಲವರಂತೂ ದುರದೃಷ್ಟವಶಾತ್ ಮದುವೆಯ ನಂತರವೂ ಮೋಸ ಹೋಗುತ್ತಾರೆ. ಪ್ರೀತಿಯಲ್ಲಿ ಪ್ರಾಮಾಣಿಕತೆ ಮತ್ತು ವಿಶ್ವಾಸಾರ್ಹತೆ ಇರಬೇಕೆಂದು ಅನೇಕರು ಭಾವಿಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಗುಣ ಹೆಚ್ಚಿನ ಜನರಲ್ಲಿ ಇಲ್ಲ. ಹೀಗಾಗಿ ನಂಬಿಕೆಯ ವಿಚಾರದಲ್ಲಿ ಜ್ಯೋತಿಷ್ಯವು ಕೂಡ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೆಲವು ರಾಶಿಚಕ್ರ ಚಿಹ್ನೆಗಳಲ್ಲಿ ಜನಿಸಿದ ಮಹಿಳೆಯರು ಪ್ರಾಮಾಣಿಕರು ಎಂದು ಹೇಳಲಾಗುತ್ತದೆ. ಅವರು ತಮ್ಮ ಸಂಗಾತಿಗೆ ಎಂದಿಗೂ ಮೋಸ ಮಾಡುವುದಿಲ್ಲವಂತೆ. ಹಾಗಾದರೆ, ಆ ರಾಶಿಗಳು ಯಾವುವು ಎಂಬುದನ್ನು ನಾವೀಗ ತಿಳಿಯೋಣ.
ಮಕರ ರಾಶಿಯ ಅಡಿಯಲ್ಲಿ ಜನಿಸಿದ ಮಹಿಳೆಯರು ಹಠಮಾರಿಗಳಾಗಿರುತ್ತಾರೆ. ಇವರು ತಾವು ಪ್ರೀತಿಸುವ ವ್ಯಕ್ತಿಯೊಂದಿಗೆ ಎಲ್ಲ ಸಮಯದಲ್ಲೂ ಪ್ರಾಮಾಣಿಕರಾಗಿರುತ್ತಾರೆ. ಅವರು ಸಂಬಂಧಗಳು ಮತ್ತು ಸ್ನೇಹದಲ್ಲಿ ತುಂಬಾ ನಿಷ್ಠರಾಗಿರುತ್ತಾರೆ. ಒಮ್ಮೆ ಪ್ರಣಯ ಸಂಬಂಧವನ್ನು ಪ್ರವೇಶಿಸಿದ ನಂತರ, ಯಾವುದೇ ಕಾರಣಕ್ಕೂ ಅದನ್ನು ಬದಲಾಯಿಸುವುದಿಲ್ಲ. ಅವರು ಸಂತೋಷದ ಜೀವನವನ್ನು ನಡೆಸಲು ಏನು ಬೇಕಾದರೂ ಮಾಡುತ್ತಾರೆ ಮತ್ತು ಮೋಸ ಮಾಡುವ ಬಗ್ಗೆ ಎಂದಿಗೂ ಯೋಚಿಸುವುದಿಲ್ಲ.
ಮೀನ ರಾಶಿಯವರು ಚಂದ್ರನಿಂದ ಆಳಲ್ಪಡುತ್ತಾರೆ. ಅವರು ಶಾಂತ ಮತ್ತು ಘನತೆಯಿಂದ ಕೂಡಿರುತ್ತಾರೆ. ತಾವು ಪ್ರೀತಿಸುವ ಪುರುಷರಿಗೆ ಎಂದಿಗೂ ಮೋಸ ಮಾಡುವುದಿಲ್ಲ. ಈ ರಾಶಿಯ ಅಡಿಯಲ್ಲಿ ಜನಿಸಿದ ಮಹಿಳೆಯರು ಯಾವಾಗಲೂ ತಮ್ಮ ಸಂಗಾತಿಯನ್ನು ಬೆಂಬಲಿಸುತ್ತಾರೆ.
ಕರ್ಕಾಟಕ ರಾಶಿಯಲ್ಲಿ ಜನಿಸಿದವರು ಪರಿಸ್ಥಿತಿ ಎಷ್ಟೇ ಕೆಟ್ಟದಾದರೂ ತಮ್ಮ ಸಂಗಾತಿಯ ಪರವಾಗಿ ನಿಲ್ಲುವ ಗುಣವನ್ನು ಹೊಂದಿರುತ್ತಾರೆ. ಪ್ರಾಮಾಣಿಕತೆಯ ಸಾಕಾರ ರೂಪವಾಗಿರುವ ಈ ಮಹಿಳೆಯರನ್ನು ಮದುವೆಯಾಗುವ ಪುರುಷರು ಗೌರವವನ್ನು ಪಡೆಯುತ್ತಾರೆ. ನಿಮ್ಮ ಗೆಳತಿ ಕರ್ಕಾಟಕ ರಾಶಿಯವರಾಗಿದ್ದರೆ ನೀವು ತುಂಬಾ ಅದೃಷ್ಟಶಾಲಿಗಳು.
ಜ್ಯೋತಿಷಿಗಳ ಪ್ರಕಾರ, ಕುಂಭ ರಾಶಿಯು ಶನಿಯು ಆಳುವ ರಾಶಿ ಎಂದು ಪರಿಗಣಿಸಲಾಗುತ್ತದೆ. ಈ ರಾಶಿಯಲ್ಲಿ ಜನಿಸಿದವರು ಸದಾ ಪ್ರಾಮಾಣಿಕರು. ತಮ್ಮ ಸಂಗಾತಿಯ ನಂಬಿಕೆಯನ್ನು ಮುರಿಯುವ ಬಗ್ಗೆ ಎಂದಿಗೂ ಯೋಚಿಸುವುದಿಲ್ಲ. ಅಲ್ಲದೆ, ತಮ್ಮ ಸಂಗಾತಿಯ ಅಗತ್ಯಗಳನ್ನು ಅರ್ಥಮಾಡಿಕೊಳ್ಳುತ್ತಾರೆ ಮತ್ತು ಅದಕ್ಕೆ ಅನುಗುಣವಾಗಿ ವರ್ತಿಸುತ್ತಾರೆ. ಕುಂಭ ರಾಶಿಯ ಮಹಿಳೆಯರನ್ನು ಪ್ರೀತಿಸುವವರು ಯಾವಾಗಲೂ ಸಂತೋಷವಾಗಿರುತ್ತಾರೆ. ಕರ್ಕಾಟಕ ರಾಶಿಯ ಮಹಿಳೆಯರಂತೆ, ಈ ರಾಶಿಯ ಮಹಿಳೆಯರು ಯಾವಾಗಲೂ ತಮ್ಮ ಪ್ರೇಮಿಗಳಿಗೆ ಬೆಂಬಲ ನೀಡುತ್ತಾರೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್ ನೆಟ್” ಜವಾಬ್ದಾರರಾಗಿರುವುದಿಲ್ಲ.