VIDEO: ನಮ್ಮ ಮಿಗ್​ ಯುದ್ಧವಿಮಾನ ಪಾಕ್​ನ ಎಫ್​ 16 ಯುದ್ಧವಿಮಾನ ಹೊಡೆದುರುಳಿಸಿದ್ದನ್ನು ಕಂಡು ತೃಪ್ತಿಯಾಯಿತು: ಮಿಂಟಿ ಅಗರ್​ವಾಲ್​

Latest News

ಬೆಂಗಳೂರಿಗೆ ಇನ್ನೊಂದು ರೈಲು

ಶ್ರವಣ್‌ಕುಮಾರ್ ನಾಳ ಪುತ್ತೂರು ಅಗತ್ಯವಿರುವ 2ಪ್ರದೇಶಗಳಿಗೆ ಅಥವಾ ಬೃಹತ್ ನಗರದಿಂದ ಸಣ್ಣ ಪಟ್ಟಣಗಳಿಗೆ ವೇಗವಾಗಿ ಸಂಪರ್ಕಿಸಲು ನೆರವಾಗುವ ಉದ್ದೇಶದಿಂದ ತುಮಕೂರು-ಯಶವಂತಪುರ ಸೇರಿ ದೇಶದಲ್ಲಿ 10 ಸೇವಾ ಸರ್ವೀಸ್...

ಕ್ರಿಕೆಟಲ್ಲೂ ಹನಿಟ್ರ್ಯಾಪ್!

ಬೆಂಗಳೂರು: ‘ಸಭ್ಯರ ಕ್ರೀಡೆ’ ಕ್ರಿಕೆಟ್​ಗೆ ಬೆಟ್ಟಿಂಗ್ ದಂಧೆಯ ಕಳಂಕ ಮೆತ್ತಿದ ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಹಿಂದೆ ಹನಿಟ್ರಾ್ಯಪ್ ಅಪಸವ್ಯವೂ ಕಾಣಿಸಿಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ನಲ್ಲಿ ಸಿಕ್ಕಿಬಿದ್ದ ಆಟಗಾರರನ್ನು...

ಜೋಡಿ ಕೊಲೆ ಆರೋಪಿ ಸೆರೆ

ಈಶ್ವರಮಂಗಲ: ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಅಜಲಾಡಿ ಸಮೀಪದ ಹೊಸಮಾರು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್...

ಕೆಪಿಎಸ್​ಸಿ ​ಸಂದರ್ಶನದ ವೇಳೆ ನಡೆಯುವ ಅವ್ಯವಹಾರ ತಪ್ಪಿಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್​ಸಿ) ಸಂದರ್ಶನ ವೇಳೆ ಆಗಬಹುದಾದ ಅವ್ಯವಹಾರ ನಿಯಂತ್ರಿಸಿ ನೇಮಕಾತಿಯಲ್ಲಿ ಬಿಗಿ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಬುಧವಾರ...

ಖಂಡಿಗೆ ಕಿಂಡಿ ಅಣೆಕಟ್ಟು ದುರಸ್ತಿಗಿಲ್ಲ ಕ್ರಮ

ಲೋಕೇಶ್ ಸುರತ್ಕಲ್ ಪಾವಂಜೆ ಖಂಡಿಗೆ ಬಳಿ ಇರುವ ನಂದಿನಿ ನದಿ ಕಿಂಡಿ ಅಣೆಕಟ್ಟಿನ ದುರಸ್ತಿಗೆ ಅಧಿಕಾರಿಗಳು ಖಚಿತ ಯೋಜನೆ ರೂಪಿಸಿಲ್ಲ. ಅಣೆಕಟ್ಟು ನಿರ್ವಹಣೆಗೆ ಸಮಿತಿಯೇ ರಚನೆಯಾಗಿಲ್ಲ. ಹಾಗಾಗಿ...

ನವದೆಹಲಿ: ಪುಲ್ವಾಮಾ ಉಗ್ರ ದಾಳಿಯ ನಂತರದಲ್ಲಿ ಪಾಕಿಸ್ತಾನದ ಬಾಲಾಕೋಟ್​ನಲ್ಲಿದ್ದ ಉಗ್ರರ ನೆಲೆಗಳ ಮೇಲಿನ ದಾಳಿ ಹಾಗೂ ಮರುದಿನ ಭಾರತದ ಗಡಿಯೊಳಗೆ ನುಗ್ಗಲು ಯತ್ನಿಸಿದ ಪಾಕ್​ ಯುದ್ಧವಿಮಾನಗಳನ್ನು ಹಿಮ್ಮೆಟ್ಟಿಸುವ ಕಾರ್ಯಾಚರಣೆಗಳಲ್ಲಿ ನಾನು ಪಾಲ್ಗೊಂಡಿದ್ದೆ. ನಮ್ಮ ಯುದ್ಧವಿಮಾನ ಪಾಕ್​ನ ಎಫ್​ 16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದನ್ನು ಕಂಡು ತೃಪ್ತಿಯಾಯಿತು ಎಂದು ಭಾರತೀಯ ವಾಯುಪಡೆಯ ಯುದ್ಧ ಸೇವಾ ಪದಕ ಗೌರವಕ್ಕೆ ಭಾಜನರಾಗಿರುವ ಸ್ಕ್ವಾಡ್ರನ್​ ಲೀಡರ್​ ಮಿಂಟಿ ಅಗರ್​ವಾಲ್​ ಹೇಳಿದ್ದಾರೆ.

ಎಎನ್​ಐ ಸಂಸ್ಥೆಗೆ ಗುರುವಾರ ಸಂದರ್ಶನ ನೀಡಿರುವ ಅವರು, ಫೆ.26ರಂದು ಪಾಕಿಸ್ತಾನದ ಬಾಲಾಕೋಟ್​ನಲ್ಲಿದ್ದ ಮಿಲಿಟರಿಯೇತರ ನೆಲೆಗಳ ಮೇಲಿನ ದಾಳಿಯ ವೇಳೆ ನಾನು ಫ್ಲೈಟ್​ ಕಂಟ್ರೋಲರ್​ ಆಗಿ ಕಾರ್ಯನಿರ್ವಹಿಸಿದ್ದೆ. ಇದಕ್ಕೆ ಪಾಕಿಸ್ತಾನ ಪ್ರತೀಕಾರ ತೀರಿಸಿಕೊಳ್ಳುತ್ತದೆ ಎಂಬುದನ್ನು ಮೊದಲೇ ಊಹಿಸಿದ್ದೆವು. ಹಾಗಾಗಿ, ನಾವು ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದೆವು. ಆದರೆ ಅವರು ಈ ಘಟನೆಯಾದ 24 ಗಂಟೆಗಳ ಬಳಿಕ ತಿರುಗಿಬಿದ್ದರು ಎಂದು ಮಹಿಳಾ ಸ್ಕ್ವಾಡ್ರನ್​ ಲೀಡರ್​ ಮಿಂಟಿ ಅಗರ್​ವಾಲ್​ ವಿವರಿಸಿದ್ದಾರೆ.

ವೈಮಾನಿಕ ರಕ್ಷಣಾ ವ್ಯವಸ್ಥೆಯ ಭಾಗವಾಗಿ ನಾನು ಒಂದಷ್ಟು ಯುದ್ಧವಿಮಾನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿದ್ದೆವು. ಪಾಕ್​ನ ಯುದ್ಧವಿಮಾನಗಳು ಭಾರತದ ಗಡಿಯತ್ತ ಧಾವಿಸಿ ಬರುತ್ತಿರುವಂತೆ ಅವುಗಳನ್ನು ಹಿಮ್ಮೆಟ್ಟಿಸಲು ಈಗಾಗಲೆ ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದ್ದ ಯುದ್ಧವಿಮಾನಗಳ ಜತೆಗೆ ಹೆಚ್ಚುವರಿ ಯುದ್ಧವಿಮಾನಗಳನ್ನು ಬಳಸಿಕೊಂಡೆವು. ಅವರು ನಮ್ಮ ಗಡಿ ಭಾಗದಲ್ಲಿ ಹಾನಿಯುಂಟು ಮಾಡುವ ಉದ್ದೇಶವನ್ನು ಹೊಂದಿದ್ದರು. ಆದರೆ, ಭಾರತೀಯ ವಾಯುಪಡೆ ಪೈಲಟ್​ಗಳು, ಫ್ಲೈಟ್​ ಕಂಟ್ರೋಲರ್​ಗಳು ಮತ್ತು ತಂಡದವರ ಸಾಮರ್ಥ್ಯ ಮತ್ತು ದಿಟ್ಟತನದ ಎದುರು ಅವರ ಆಟ ಯಾವುದೂ ನಡೆಯಲಿಲ್ಲ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಹಾಗೆ ಭಾರತದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದ ಪಾಕ್​ನ ಎಫ್​ 16 ಯುದ್ಧವಿಮಾನವನ್ನು ಹಿಮ್ಮೆಟ್ಟಿಸಲು ವಿಂಗ್​ ಕಮಾಂಡರ್​ ಅಭಿನಂದನ್​ ವರ್ಧಮಾನ್​ ತಮ್ಮ ಮಿಗ್​ 21 ಬೈಸನ್​ ಯುದ್ಧವಿಮಾನದಲ್ಲಿ ಮುಂದಾದರು. ಒಂದು ರೀತಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಶತ್ರು ರಾಷ್ಟ್ರದ ಹಲವು ಯುದ್ಧವಿಮಾನಗಳು ಏಕಕಾಲಕ್ಕೆ ದಂಡೆತ್ತಿ ಬಂದಿದ್ದವು. ಆ ಎಲ್ಲ ಯುದ್ಧವಿಮಾನಗಳ ಮೇಲೆ ನಮ್ಮ ಯುದ್ಧವಿಮಾನಗಳು ಎಲ್ಲ ದಿಕ್ಕುಗಳಿಂದ ದಾಳಿ ಮಾಡುತ್ತಿದ್ದವು. ವಿಂಗ್​ ಕಮಾಂಡರ್​ ಅಭಿನಂದನ್​ ತಮ್ಮ ವಿಮಾನದಲ್ಲಿ ಹಾರಾಟ ಆರಂಭಿಸಿದಾಗಿನಿಂದಲೂ ನನ್ನೊಂದಿಗೆ ದ್ವಿಮುಖ ಸಂವಹನದಲ್ಲಿದ್ದರು. ಶತ್ರುಗಳ ಯುದ್ಧವಿಮಾನದ ಚಲನೆಯ ಕುರಿತು ಪ್ರತಿಕ್ಷಣದ ಮಾಹಿತಿಯನ್ನು ಅವರಿಗೆ ಕೊಡುತ್ತಿದ್ದೆ. ಅವರು ಎಫ್​ 16 ಯುದ್ಧವಿಮಾನವನ್ನು ಹೊಡೆದುರುಳಿಸಿದ ನಂತರದಲ್ಲಿ ಅವರಿದ್ದ ಯುದ್ಧವಿಮಾನದ ಸಂವಹನ ವ್ಯವಸ್ಥೆಯನ್ನು ಪಾಕಿಸ್ತಾನ ಜಾಮ್​ ಮಾಡಿದ್ದರಿಂದ ಕೊನೆಯ ಕ್ಷಣದಲ್ಲಿ ದಾಳಿಯಿಂದ ತಪ್ಪಿಸಿಕೊಳ್ಳುವ ಕುರಿತು ನಾನು ನೀಡಿದ ಸೂಚನೆ ಅವರನ್ನು ತಲುಪಲಿಲ್ಲ. ಹಾಗಾಗಿ ಅವರ ವಿಮಾನವೂ ಪತನಗೊಂಡು, ಪಾಕ್​ ಯೋಧರಿಗೆ ಸೆರೆ ಸಿಗಬೇಕಾಯಿತು ಎಂದು ಅಂದಿನ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...