ನನ್ನನ್ನ ಕರಿ ಬೆಕ್ಕು ಎನ್ನುತ್ತಿದ್ದರು! ಬಾಡಿ ಶೇಮಿಂಗ್​ ನೆನೆದು ಭಾವುಕರಾದ ಪ್ರಿಯಾಂಕಾ ಚೋಪ್ರಾ

priyanka chopra
Published on

ಮುಂಬೈ: ಬಾಲಿವುಡ್​​ ನಟಿ ಪ್ರಿಯಾಂಕಾ ಚೋಪ್ರಾ, ಆರಂಭಿಕ ದಿನಗಳಲ್ಲಿ ಅನುಭವಿಸಿರುವ ಬಾಡಿ ಶೇಮಿಂಗ್​ ಕುರಿತು ಮಾತನಾಡಿದ್ದಾರೆ. ಸಿನಿಮಾ ರಂಗಕ್ಕೆ ಬಂದಾಗ ತಮ್ಮನ್ನು ಯಾರಿಗೆ ಹೋಲಿಸಿ ಮಾತನಾಡುತ್ತಿದ್ದರು ಎನ್ನುವುದರ ಬಗ್ಗೆ ಮೊದಲ ಬಾರಿಗೆ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ದಕ್ಷಿಣ ಏಷ್ಯಾಗೆ ಸಂಬಂಧಿಸಿ ನಡೆದ ಸಭೆಯಲ್ಲಿ ಪ್ರಿಯಾಂಕಾ ಭಾಗಿಯಾಗಿದ್ದರು. ಸಿನಿಮಾದಲ್ಲಿ ಮಹಿಳೆಯರ ವಿಚಾರದ ಕುರಿತು ಚರ್ಚೆ ನಡೆದಿದೆ. ಈ ವೇಳೆ ಪ್ರಿಯಾಂಕಾ ಚೋಪ್ರಾ ಅವರು ಮಾತನಾಡಿ, ನನ್ನನ್ನು ಅನೇಕರು ಬ್ಲ್ಯಾಕ್ ಕ್ಯಾಟ್ (ಕರಿ ಬೆಕ್ಕು) ಎಂದು ಕರೆಯುತ್ತಿದ್ದರು. ನನ್ನ ಚರ್ಮದ ಬಣ್ಣವನ್ನು ಟೀಕಿಸುತ್ತಿದ್ದರು. ಬಣ್ಣದ ಬಗೆಗಿನ ಗೀಳು ಭಾರತಕ್ಕೆ ಬಂದಿದ್ದು ಬ್ರಿಟಿಷರಿಂದ. ಅವರು ಬಿಟ್ಟು ಹೋದರೂ ಬಣ್ಣದ ಗೀಳು ಕಡಿಮೆ ಆಗಿಲ್ಲ ಎಂದಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಸದ್ಯ ಹಾಲಿವುಡ್​​ನಲ್ಲಿ ಬ್ಯುಸಿಯಾಗಿದ್ದಾರೆ. ಗಾಯಕ ನಿಕ್ ಜೋನಸ್ ಮದುವೆ ಆದ ಬಳಿಕ ಅವರು ಅಮೆರಿಕದಲ್ಲಿಯೇ ನೆಲೆಸಿದ್ದಾರೆ.

ಸಿನಿಮಾ ರಂಗಕ್ಕೆ ಬಂದಾಗ ತುಸು ದಪ್ಪ ಇದ್ದೆ. ನನ್ನ ಮೈಬಣ್ಣ ಕೂಡ ಕಪ್ಪು. ಅವೆರಡನ್ನೂ ಅಸ್ತ್ರವಾಗಿ ಬಳಸಿಕೊಂಡು ನನ್ನನ್ನು ಹೀಯಾಳಿಸುತ್ತಿದ್ದರು. ಪ್ರಾಣಿಗಳಿಗೆ ಹೋಲಿಸಿ ತಮಾಷೆ ಮಾಡುತ್ತಿದ್ದರು. ನನಗೆ ತುಂಬಾ ನೋವಾಗುತ್ತಿತ್ತು. ಎಷ್ಟೋ ಬಾರಿ ಅತ್ತಿದ್ದೇನೆ ಎಂದು ಹೇಳಿ ಬೇಸರ ಹೊರಹಾಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net