blank

ತೆರಿಗೆ ಹಂಚಿಕೆ ವಿಚಾರ; ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರೇ ದೆಹಲಿ ಗುಲಾಮರಾಗಿದ್ದಾರೆ: ಸಿಎಂ ಕಿಡಿ | Tax

blank

ಬೆಂಗಳೂರು: ತೆರಿಗೆ (Tax) ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ. ಭಾರತೀಯ ಜನತಾ ಪಕ್ಷದ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಇವರೇ ಹೇಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಡಿಕೆಶಿ ಸೇರಿ 7 ಸಚಿವರಿಗೆ ಪತ್ರ ಬರೆದ ರಾಜ್ಯ ಗುತ್ತಿಗೆದಾರರ ಸಂಘ

“ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಿದ್ದ ರಾಜ್ಯದ ಬಿಜೆಪಿ ನಾಯಕರು ಮತ್ತು ಸಂಸದರು ಅನ್ಯಾಯಕೋರ ಕೇಂದ್ರ ಬಿಜೆಪಿ ಸರ್ಕಾರವನ್ನು ಸಮರ್ಥಿಸುತ್ತಿರುವುದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಮತ್ತು ಅವಮಾನವಾಗಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ರಾಜ್ಯಗಳಿಗೆ ತೆರಿಗೆ ಮತ್ತು ಸುಂಕದ ಪಾಲಿನ ರೂಪದಲ್ಲಿ ಒಟ್ಟು 1,73,030 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ನೀಡಿರುವ ಪಾಲು ಕೇವಲ 6,310 ಕೋಟಿ ರೂಪಾಯಿ” ಎಂದರು.

“ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ ಐದರಷ್ಟು ಕನ್ನಡಿಗರಿದ್ದರೂ ದೇಶದ ಜಿಡಿಪಿಯಲ್ಲಿ ಕನ್ನಡಿಗರ ಪಾಲಿನ ಪ್ರಮಾಣ ಶೇಕಡಾ 8.4 ಆಗಿದೆ. ಅತೀ ಹೆಚ್ಚು ಜಿಎಸ್‌ಟಿ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ‍್ಥಾನದಲ್ಲಿದೆ. ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 17ರಷ್ಟು ಹೆಚ್ಚಾಗುತ್ತಿದೆ. ಹೀಗಿದ್ದರೂ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡುತ್ತಾ ಬರಲಾಗುತ್ತಿದೆ. ಈ ಅನ್ಯಾಯ ಯಾಕೆ? 2018-19ರಲ್ಲಿ 24.42 ಲಕ್ಷ ಕೋಟಿ ರೂ.ಗಳಷ್ಟಿದ್ದ ಕೇಂದ್ರದ ಬಜೆಟ್ ಗಾತ್ರ, 2024-25ರಲ್ಲಿ 46.28 ಲಕ್ಷ ಕೋಟಿ ರೂ.ನಷ್ಟಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಗುಡಿಸಲಕೊಪ್ಪದಲ್ಲಿ ಕೈಗಾರಿಕೆ ಸ್ಥಾಪಿಸಿ, ಉದ್ಯೋಗ ಸೃಷ್ಟಿಸಿ; ನೀರಲಗಿ ಉತ್ಸವದಲ್ಲಿ ಎಂ.ಎಸ್.ಕೋರಿಶೆಟ್ಟರ್ ಮನವಿ

“2018-19ರಲ್ಲಿ ಕರ್ನಾಟಕಕ್ಕೆ ನೀಡಿರುವ ತೆರಿಗೆ ಪಾಲು ರೂ.46,288 ಕೋಟಿಗಳಾಗಿದ್ದರೆ, 2024-25ರಲ್ಲಿ ಇದು ರೂ.44,485 ಕೋಟಿ ಮಾತ್ರ. ಅಂದರೆ ಆರು ವರ್ಷಗಳ ಅವಧಿಯಲ್ಲಿ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ಕರ್ನಾಟಕದ ತೆರಿಗೆ ಪಾಲು 15,299 ರೂಪಾಯಿಗಳಷ್ಟು ಮಾತ್ರ ಹೆಚ್ಚಾಗಿದೆ. ಈ ತೆರಿಗೆ ಪಾಲು ಕನಿಷ್ಠ ಒಂದು ಲಕ್ಷ ಕೋಟಿ ರೂಪಾಯಿಗಳಷ್ಟಾದರೂ ಆಗಬೇಕಿತ್ತಲ್ಲವೇ? ರಾಜ್ಯದ ಜನತೆ ತೆರಿಗೆ ಮತ್ತು ಸುಂಕದ ಮೂಲಕ ಪ್ರತಿವರ್ಷ ನಾಲ್ಕುವರೆ ಲಕ್ಷ ಕೋಟಿ ರೂಪಾಯಿಗಳನ್ನು ಕೇಂದ್ರದ ಬೊಕ್ಕಸಕ್ಕೆ ನೀಡುತ್ತಿದೆ” ಎಂದರು.

“ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ತೆರಿಗೆ ಪಾಲಿನ ರೂಪದಲ್ಲಿ ರೂ.45,000 ಕೋಟಿ ಮತ್ತು ಅನುದಾನವಾಗಿ ರೂ.15,000 ಕೋಟಿ ನೀಡುತ್ತಿದೆ. ಅಂದರೆ ನಾವು ನೀಡುತ್ತಿರುವ ಒಂದು ರೂಪಾಯಿಗೆ ಕೇವಲ 13 ಪೈಸೆಯಷ್ಟು ಮಾತ್ರ ಬಿಜೆಪಿ ಸರ್ಕಾರ ವಾಪಸ್​ ನೀಡುತ್ತಿದೆ. ತೆರಿಗೆ ಹಂಚಿಕೆ ಮಾಡುವಾಗಲೂ ‘’ಬಿಮಾರು’’ ರಾಜ್ಯಗಳೆಂಬ ಅಪಖ್ಯಾತಿಗೀಡಾಗಿರುವ ಬಿಹಾರ (ರೂ.17,403 ಕೋಟಿ), ಮಧ್ಯಪ್ರದೇಶ (ರೂ.13,582 ಕೋಟಿ), ರಾಜಸ್ತಾನ (ರೂ.10,426 ಕೋಟಿ) ಮತ್ತು ಉತ್ತರಪ್ರದೇಶಕ್ಕೆ (ರೂ.31,099 ಕೋಟಿ) ತೆರಿಗೆ ಪಾಲನ್ನು ನೀಡಿರುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೇವಲ ರೂ.6,310 ಕೋಟಿ ನೀಡಿದೆ. ಇದು ಉತ್ತಮ ಆಡಳಿತ, ಸುಸ್ಥಿರ ಅಭಿವೃದ್ದಿ ಮತ್ತು ಜಿಎಸ್‌ಟಿ ಸಂಗ್ರಹದಲ್ಲಿ ಮಾಡಿರುವ ಸಾಧನೆಗಾಗಿ ಕರ್ನಾಟಕಕ್ಕೆ ನೀಡಿರುವ ಶಿಕ್ಷೆಯೇ? ಕನ್ನಡಿಗರ ಬೆವರ ಗಳಿಕೆಯ ತೆರಿಗೆ ಹಣ ಭ್ರಷ್ಟ ರಾಜ್ಯಗಳ ಬೊಕ್ಕಸ ತುಂಬಲು ಯಾಕೆ ಬಳಕೆಯಾಗಬೇಕು?” ಎಂದಿದ್ದಾರೆ.

ಇದನ್ನೂ ಓದಿ: ಗುಡಿಸಲಕೊಪ್ಪದಲ್ಲಿ ಕೈಗಾರಿಕೆ ಸ್ಥಾಪಿಸಿ, ಉದ್ಯೋಗ ಸೃಷ್ಟಿಸಿ; ನೀರಲಗಿ ಉತ್ಸವದಲ್ಲಿ ಎಂ.ಎಸ್.ಕೋರಿಶೆಟ್ಟರ್ ಮನವಿ

“ಹದಿನೈದನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲನ್ನು ಶೇ.4.73ರಿಂದ ಶೇಕಡಾ 3.64ಕ್ಕೆ ಇಳಿಸಿದೆ. ಇದರಿಂದ ಕಳೆದ ಐದು ವರ್ಷಗಳಲ್ಲಿ 79,770 ಕೋಟಿ ರೂಪಾಯಿಯನ್ನು ಕರ್ನಾಟಕ ಕಳೆದುಕೊಂಡಿದೆ. ಈ ಅನ್ಯಾಯಕ್ಕೆ ಪರಿಹಾರವಾಗಿ ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂಬ ಹಣಕಾಸು ಆಯೋಗದ ಶಿಫಾರಸನ್ನು ಕೂಡಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಿರಸ್ಕರಿಸಿ ಕರ್ನಾಟಕಕ್ಕೆ ಅನ್ಯಾಯ ಎಸಗಿದ್ದಾರೆ” ಎಂದರು.

“ಇದು ಕರ್ನಾಟಕದ ಪ್ರಾಮಾಣಿಕ ತೆರಿಗೆದಾರರಿಗೆ ಮಾಡಿರುವ ಘೋರ ಅನ್ಯಾಯವಲ್ಲವೇ? ಈ ಅನ್ಯಾಯವನ್ನು ಖಂಡಿಸಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ನಿರ್ಲಜ್ಜರಾಗಿ ಸಮರ್ಥಿಸುತ್ತಿರುವುದು ಕನ್ನಡಿಗರಿಗೆ ಬಗೆಯುತ್ತಿರುವ ದ್ರೋಹವಾಗಿದೆ. ಇವರ ಆರ್ಭಟವೇನಿದ್ದರೂ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಲು ಮತ್ತು ಬೀದಿಗಳಲ್ಲಿ ಪರಸ್ಪರ ಕಚ್ಚಾಡಲು ಸೀಮಿತವಾಗಿದೆ. ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ನಿಂತು ನ್ಯಾಯ ಕೇಳುವ ಕನಿಷ್ಠ ಧೈರ್ಯವೂ ಇಲ್ಲದೆ ದೆಹಲಿ ಸರ್ಕಾರದ ಗುಲಾಮರಾಗಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಉನ್ನತ ಶಿಕ್ಷಣ ಕರಡು ವರದಿ ತಿರಸ್ಕರಿಸುವಂತೆ ಒತ್ತಾಯ

“ಜನಪ್ರತಿನಿಧಿಗಳು ಜನದ್ರೋಹಿಗಳಾದಾಗ ಅವರನ್ನು ಜನರೇ ವಿಚಾರಿಸಿಕೊಳ್ಳಬೇಕಾಗುತ್ತದೆ. ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಕನ್ನಡಿಗರೆಲ್ಲರೂ ಜಾತಿ, ಧರ್ಮ, ಪಕ್ಷ ಪಂಥಗಳನ್ನು ಮೀರಿ ದನಿ ಎತ್ತಬೇಕಾಗಿದೆ. ಇಂತಹದ್ದೊಂದು ಸಂಕಲ್ಪವನ್ನು ಸಂಕ್ರಮಣದ ಶುಭದಿನದಂದು ಪ್ರತಿಯೊಬ್ಬ ಕನ್ನಡಿಗರು ಕೈಗೊಂಡು ಕರ್ನಾಟಕವನ್ನು ಅನ್ಯಾಯ ಮತ್ತು ಅವಮಾನದಿಂದ ರಕ್ಷಿಸಬೇಕಾಗಿ” ಎಂದು ಕಿಡಿಕಾರಿದರು.

ಮಳೆ ಬಿದ್ದರೆ ಮಾತ್ರ ಪಾರದರ್ಶಕ! ಉಳಿದ ಸಮಯದಲ್ಲಿ ಬಿಳಿ ಬಣ್ಣ; ಅಚ್ಚರಿ ಮೂಡಿಸುತ್ತೆ ‘ಅಸ್ಥಿಪಂಜರ​ ಹೂ’ ವಿಶೇಷತೆ​ | Skeleton Flower

Share This Article

ಏಳನೇ ತಿಂಗಳಲ್ಲಿ ಹೆರಿಗೆಯಾದರೆ ಏನಾಗುತ್ತದೆ?; ಮಗುವಿನ ಆರೋಗ್ಯದ ಮೇಲಾಗುವ ಪರಿಣಾಮವೇನು.. ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಗರ್ಭಾವಸ್ಥೆಯಲ್ಲಿ ಮಗುವನ್ನು 9 ತಿಂಗಳುಗಳ ಕಾಲ ಇಟ್ಟುಕೊಳ್ಳುವುದು ಮುಖ್ಯ ಎಂದು ವೈದ್ಯರು ಸೇರಿದಂತೆ ಎಲ್ಲಾ ತಜ್ಞರು…

ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಬೇಕೇ?; ಅಡುಗೆಮನೆಯಲ್ಲಿನ ಈ 2 ವಸ್ತುಗಳನ್ನು ತಪ್ಪದೆ ಬಳಸಿ | Health Tips

ಇತ್ತೀಚಿನ ದಿನಗಳಲ್ಲಿ ಕಳಪೆ ಜೀವನಶೈಲಿ ಮತ್ತು ಅನಿಯಮಿತ ಆಹಾರ ಪದ್ಧತಿಯಿಂದಾಗಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ ಸಮಸ್ಯೆ…

ಚಳಿಗಾಲದಲ್ಲಿ ಹುಣಸೆಹಣ್ಣು ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? health benefits of tamarind

health benefits of tamarind : ನಮ್ಮ ದಿನನಿತ್ಯದ ಅಡುಗೆಯಲ್ಲಿ ಹುಣಸೆಹಣ್ಣನ್ನು ಬಳಸುವುದರಿಂದ ನಮಗೆ ಅರಿವಿಲ್ಲದೆಯೇ…