ಎಟಿಎಂ ಖದೀಮರನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ಶಿವಮೊಗ್ಗ: ಎಟಿಎಂ ಕಳ್ಳತನ ಮಾಡಲು ಯತ್ನಿಸುತ್ತಿದ್ದ ಖದೀಮರ ತಂಡವೊಂದನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಶಿವಮೊಗ್ಗ ಸಮೀಪದ ಸಂತೇಕಡೂರಿನಲ್ಲಿ ಮಂಗಳವಾರ ನಡೆದಿದೆ.

ಇಂದು ಮುಂಜಾನೆ ಸುಮಾರು 3 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಹೊರಭಾಗದಲ್ಲಿರುವ ಕೆನರಾ ಬ್ಯಾಂಕಿನ ಎಟಿಎಂ ಕಳ್ಳತನ ಮಾಡಲು 6 ಮಂದಿ ಖದೀಮರು ವ್ಯಾನ್ ನಲ್ಲಿ ಬಂದಿದ್ದರು.

ಎಟಿಎಂ ಯಂತ್ರವನ್ನು ಒಡೆಯುವಾಗ ಜಾಗರೂಕರಾದ ಗ್ರಾಮಸ್ಥರು ಮೊದಲು ಪೊಲೀಸರಿಗೆ ಮಾಹಿತಿ ನೀಡಿ ಸುತ್ತುವರಿದು ಕಳ್ಳರನ್ನು ಹಿಡಿದಿದ್ದಾರೆ. ಈ ವೇಳೆ ಆರು ಮಂದಿ ಖದೀಮರಲ್ಲಿ ಇಬ್ಬರು ಪರಾರಿಯಾಗಿದ್ದು, ಸಿಕ್ಕಿಹಾಕಿಕೊಂಡ ನಾಲ್ವರಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *