ಒಂದೇ ರಸ್ತೆಯಲ್ಲಿ ಮೂರು ಕಡೆಗಳಲ್ಲಿ ಕೈಚಳಕ ತೋರಿದ ಕಳ್ಳರು

blank

ಬೆಂಗಳೂರು: ಒಂದೇ ರಸ್ತೆಯಲ್ಲಿನ ಮೂರು ಅಂಗಡಿಗಳಲ್ಲಿ ಕಳ್ಳರು ಕೈ ಚಳಕ ತೋರಿಸಿ ಹಣ ಕಳ್ಳತನ ಮಾಡಿದ್ದಾರೆ.
ಕೆ.ಪಿ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚೋಳೂರು ಪಾಳ್ಯದ ಮುಖ್ಯ ರಸ್ತೆಯಲ್ಲಿರುವ ಮೆಡಿಕಲ್ ಸ್ಟೋರ್‌ನಲ್ಲಿ ಸುಮಾರು ೧ ಲಕ್ಷ ರೂ., ಬೇಕರಿಯಲ್ಲಿ ಮೂರ್ನಾಲ್ಕು ಸಾವಿರ ಹಣ ಹಾಗೂ ನಂದಿನಿ ಪಾರ್ಲರ್‌ನಲ್ಲಿ ೩ ರಿಂದ ೪ ಸಾವಿರ ಹಣವನ್ನು ಕಳ್ಳರು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಕಳ್ಳರು ರಾತ್ರಿ ೧೧ ಗಂಟೆಯ ಸುಮಾರಿಗೆ ಈ ಮೂರು ಅಂಗಡಿಗಳ ರೋಲಿಂಗ್ ಶೆಟರ್‌ಗಳನ್ನು ಮೀಟಿ ಒಳ ನುಗ್ಗಿ ಹಣವನ್ನು ಮಾತ್ರ ಕಳ್ಳತನ ಮಾಡಿದ್ದು ಬೇರೆ ವಸ್ತುಗಳನ್ನು ಮುಟ್ಟಿಲ್ಲ. ಸುದ್ದಿ ತಿಳಿದು ಕೆಪಿ ಅಗ್ರಹಾರ ಠಾಣೆ ಪೊಲೀಸರು, ಶ್ವಾನ ದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ರಸ್ತೆಗಳಲ್ಲಿರುವ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದಾರೆ.

 

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…