

ಕಾರ್ಕಳ: ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಹೇಗೆ ಬಾಚಿಕೊಳ್ಳಬೇಕು ಎಂಬುದನ್ನು ವಿದ್ಯಾರ್ಥಿಗಳು ಅಭ್ಯಸಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ವಿದ್ಯಾಲಯಕ್ಕೆ ಹಾಗೂ ವಿವಿಧ ಕಂಪನಿಗಳಿಗೆ ಪ್ರಯೋಜನಕಾರಿ ಯೋಜನೆ ರೂಪಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಥಾಟ್ ಗ್ರೈನ್ಸ್ ಸೊಲ್ಯೂಶನ್ಸ್ ಉಡುಪಿ ಸಂಸ್ಥೆ ಸಹಸ್ಥಾಪಕ ಹಾಗೂ ಸಿಇಒ ಅರುಣಾಚಲ ಶೆಟ್ಟಿ ಹೇಳಿದರು.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ಎಂಸಿಎ ವಿಭಾಗ ಉಡುಪಿಯ ಥಾಟ್ ಗ್ರೈನ್ಸ್ ಸೊಲ್ಯೂಶನ್ಸ್ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಇಂಟರ್ ಕಾಲೇಜು ಟೆಕ್ನಿಕಲ್ ಸ್ಪರ್ಧಾ ಕಾರ್ಯಕ್ರಮ ‘ಟೆಕ್-ನೊ-25’ ಉದ್ಘಾಟಿಸಿ ಮಾತನಾಡಿದರು.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲೂಣ್ಕರ್ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಾಂತ್ರಿಕ ಪ್ರಗತಿಗಾಗಿ ನೀಡುತ್ತಿರುವ ಅನೇಕ ಅವಕಾಶಗಳ ಬಗ್ಗೆ ವಿವರಿಸಿದರು. ಎಂಸಿಎ ವಿಭಾಗ ಮುಖ್ಯಸ್ಥೆ ಡಾ.ಮಮತಾ ಬಾಲಿಪ ಸ್ವಾಗತಿಸಿದರು. ಸಂಯೋಜಕಿ ಡಾ.ಸ್ಫೂರ್ತಿ ಬಿ.ಶೆಟ್ಟಿ ಪರಿಚಯಿಸಿದರು. ಸಂಯೋಜಕಿ ಡಾ.ಮಂಗಳಾ ಶೆಟ್ಟಿ ವಂದಿಸಿದರು.