More

    ತೃತೀಯ ಲಿಂಗಿಗಳು ‘ಒಬಿಸಿ’ಗೆ ಹೈಕೋರ್ಟ್​ಗೆ ಸರ್ಕಾರದ ಮಾಹಿತಿ

    ಬೆಂಗಳೂರು: ಸರ್ಕಾರಿ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳನ್ನು ಇತರ ಹಿಂದುಳಿದ ವರ್ಗಗಳು (ಒಬಿಸಿ) ಕೆಟಗರಿ ಅಡಿಯಲ್ಲಿ ಪರಿಗಣಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೈಕೋರ್ಟ್​ಗೆ ಸರ್ಕಾರ ಮಾಹಿತಿ ನೀಡಿದೆ.

    ರಾಜ್ಯ ವಿಶೇಷ ಮೀಸಲು ಕಾನ್​ಸ್ಟೇಬಲ್ ಪಡೆ ಹಾಗೂ ಬ್ಯಾಂಡ್ಸ್​ಮೆನ್ ಹುದ್ದೆಗಳ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ಕಲ್ಪಿಸದಿರುವುದನ್ನು ಪ್ರಶ್ನಿಸಿ ‘ಸಂಗಮ’ ಸ್ವಯಂಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ಮಾಹಿತಿ ನೀಡಲಾಗಿದೆ.

    ಇದನ್ನೂ ಓದಿ: ಪರಸ್ಪರರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೆ.ಕಲ್ಯಾಣ್​ ದಂಪತಿ; ಶೀಘ್ರದಲ್ಲೇ ವಿಡಿಯೋ ಬಿಡುಗಡೆ ಮಾಡ್ತಾರಂತೆ…!

    ಸರ್ಕಾರದ ಪರ ವಕೀಲರು, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಅವರ ಪ್ರಮಾಣಪತ್ರ ಸಲ್ಲಿಸಿ, ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ ಪ್ರಕಾರ ಒಬಿಸಿ ಪಟ್ಟಿ ಪರಿಷ್ಕರಿಸಲು ಸರ್ಕಾರ ಆಯೋಗದೊಂದಿಗೆ ಸಮಲೋಚನೆ ನಡೆಸುವುದು ಕಡ್ಡಾಯ. ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಅವಧಿ 2019ರ ಸೆ.21ರಂದೇ ಪೂರ್ಣಗೊಂಡಿದ್ದು, ಹೊಸ ಪದಾಧಿಕಾರಿಗಳು ನೇಮಕಗೊಂಡಿಲ್ಲ. ಆಯೋಗ ರಚನೆಯಾದ ಬಳಿಕವೇ ನಿರ್ಧಾರ ಕೈಗೊಳ್ಳಲು ಸಾಧ್ಯ. ಮೇಲಾಗಿ ಸಂಪುಟದ ಅನುಮೋದನೆ ಪಡೆಯಬೇಕಿದೆ. ಅದಕ್ಕಾಗಿ ಮತ್ತಷ್ಟು ಕಾಲಾವಕಾಶದ ಅಗತ್ಯವಿದೆ ಎಂದು ವಿವರಿಸಿದರು. ಇದನ್ನು ದಾಖಲಿಸಿಕೊಂಡ ಪೀಠ, ಅ.19ಕ್ಕೆ ವಿಚಾರಣೆ ಮುಂದೂಡಿತು.

    ಗೋಕರ್ಣ ಮಹಾಬಲೇಶ್ವರ ಮಂದಿರದಲ್ಲಿ ಸೋಮವಾರದಿಂದ ಎಂದಿನಂತೆ ಎಲ್ಲ ಸೇವೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts