26.8 C
Bangalore
Friday, December 13, 2019

ಬಾಕ್ಸಿಂಗ್​ ಡೇ ಟೆಸ್ಟ್​ನಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮೆಲ್ಬೋರ್ನ್: ಮೆಲ್ಬೋರ್ನ್: ಮೊಟ್ಟಮೊದಲ ಬಾರಿಗೆ ಆಸ್ಟ್ರೇಲಿಯಾ ನೆಲದಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಗೆಲ್ಲುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮೆರೆದಿದೆ.

ಗೆಲುವಿಗೆ 399 ರನ್​ಗಳ ಸವಾಲಿನ ಮೊತ್ತ ಬೆನ್ನು ಹತ್ತಿದ್ದ ಆಸ್ಟ್ರೇಲಿಯಾ ತಂಡ 89.3 ಓವರ್​ಗಳಲ್ಲಿ 261ರನ್​ಗಳಿಗೆ ಸರ್ವ ಪತನ ಕಂಡಿತು. ಈ ಮೂಲಕ ಆಸಿಸ್​ ವಿರುದ್ಧ ಭಾರತ 137 ರನ್​ಗಳ ಭಾರಿ ಅಂತರದ ಗೆಲುವು ದಾಖಲಿಸಿದೆ. ನಾಲ್ಕು ಟೆಸ್ಟ್​ ಪಂದ್ಯಗಳ ಸರಣಿಯಲ್ಲಿ ಭಾರತ 1-2ರ ಅಂತರದ ಮುನ್ನಡೆ ಸಾಧಿಸಿದೆ.

ಗೆಲುವಿನ ಗುರಿಯೊಂದಿಗೆ ಶನಿವಾರ ನಾಲ್ಕನೇ ದಿನದಾಟ ಆರಂಭಿಸಿದ್ದ ಆಸ್ಟ್ರೇಲಿಯಾ ಪರ ಅರ್ಧ ಶತಕ ಭಾರಿಸಿದ್ದ ಪ್ಯಾಟ್ ಕಮ್ಮಿನ್ಸ್, 61ರನ್​ಗಳ ಮೂಲಕ ಸ್ಕ್ರೀಸ್​ನಲ್ಲೇ ಉಳಿದುಕೊಂಡಿದ್ದರು. ಆದರೆ, ಐದನೇ ದಿನದಾಟವಾದ ಭಾನುವಾರ ಅವರು ಗಳಿಸಿದ್ದು ಕೇವಲ ಎರಡು ರನ್​ಗಳನ್ನು ಮಾತ್ರ. ಬೂಮ್ರಾ ಎಸೆತವನ್ನು ರಕ್ಷಣಾತ್ಮಕವಾಗಿ ಆಡಲು ಮುಂದಾದ ಕಮ್ಮಿನ್ಸ್​ ಪೂಜಾರಾಗೆ ಕ್ಯಾಚಿತ್ತು ಪೆವಿಲಿಯನ್​ ಸೇರಿದರು. ಅದರೊಂದಿಗೆ 63ರನ್​ಗಳಿಗೆ ಔಟಾದರು. ನಂತರದ ಎರಡು ವಿಕೆಟ್​ಗಳನ್ನು ಭಾರತ ಅನಾಯಾಸವಾಗಿ ಕಸಿದು ಬಾಕ್ಸಿಂಗ್​ ಡೇ ಪಿಚ್​ನಲ್ಲಿ ಪರಾಕ್ರಮ ಮೆರೆಯಿತು.

ಮೆಲ್ಬೋರ್ನ್​ನಲ್ಲಿ ಭಾರತ ಈವರೆಗೂ ಎರಡು ಟೆಸ್ಟ್ ಗೆದ್ದಿದ್ದರೂ, ಅದು ಬಾಕ್ಸಿಂಗ್ ಡೇ ಪಂದ್ಯವಾಗಿರಲಿಲ್ಲ. 1981ರಲ್ಲಿ ಕೊನೆಯ ಬಾರಿಗೆ ಸುನೀಲ್ ಗಾವಸ್ಕರ್ ನೇತೃತ್ವದಲ್ಲಿ ತಂಡ ಜಯ ಸಾಧಿಸಿತ್ತು. ನಂತರ 2018ರ ಈ ದಿನ ಭಾರತ ಅಂಥದ್ದೊಂದು ಸಾಧನೆ ಭಾರತಕ್ಕೆ ದಕ್ಕಿದೆ.

ಎರಡನೇ ಇನ್ನಿಂಗ್ಸ್​ನ ಬೌಲಿಂಗ್​ ವಿಭಾಗದಲ್ಲಿ ಭಾರತದ ಪರ ಬೂಮ್ರಾ ಮತ್ತು ಜಡೇಜ ತಲಾ ಮೂರು ವಿಕೆಟ್​ ಕಿತ್ತು ಸಂಭ್ರಮಿಸಿದರು. ಇನ್ನುಳಿದಂತೆ ಇಶಾಂತ್​ ಶರ್ಮಾ ಮತ್ತು ಮೊಹಮದ್​ ಶಮಿ ತಲಾ ಎರಡು ವಿಕೆಟ್​ ಗಳಿಸಿದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....