

ಪ್ರತಿದಿನ ಹಾಲು ಕುಡಿಯುವುದರಿಂದ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳು ಲಭಿಸುತ್ತವೆ. ಹಾಲಿನಲ್ಲಿ ಪ್ರೋಟೀನ್, ಕ್ಯಾಲ್ಸಿಯಂ, ಜೀವಸತ್ವಗಳು ಮತ್ತು ಖನಿಜಗಳಂತಹ ಅನೇಕ ಪೋಷಕಾಂಶಗಳಿವೆ. ದೇಹವನ್ನು ಆರೋಗ್ಯಕರವಾಗಿಡಲು ಇದು ಅವಶ್ಯಕವಾಗಿದೆ ಎಂಬುದು ಗೊತ್ತೆ ಇದೆ. ಹಾಲು ಕುಡಿಯುವುದರಿಂದ ಮೂಳೆಗಳು ಮತ್ತು ಸ್ನಾಯುಗಳನ್ನು ಬಲಗೊಳ್ಳುತ್ತವೆ. ಮಕ್ಕಳಾಗಲಿ, ದೊಡ್ಡವರಾಗಲಿ ಎಲ್ಲರೂ ಹಾಲಿನ ಜತೆಗೆ ಡ್ರೈ ಫ್ರೂಟ್ಸ್ ಸೇವಿಸಿದರೆ ಒಳ್ಳೆಯದು. ಆದರೆ ಬೆಳಗ್ಗೆ ಕುಡಿಯುವ ಬದಲು ರಾತ್ರಿ ಮಲಗುವ ಮುನ್ನ ಹಾಲು ಕುಡಿದರೆ ಏನೆಲ್ಲಾ ಪ್ರಯೋಜನವಾಗಲಿದೆ ಗೊತ್ತಾ.
ಹಾಲಿನೊಂದಿಗೆ ನೆನೆಸಿದ ಒಣದ್ರಾಕ್ಷಿ ಮತ್ತು ಬಾದಾಮಿಯನ್ನು ಸೇವಿಸಿದರೆ ಹಲವಾರು ಅದ್ಭುತ ಪ್ರಯೋಜನ ನಮ್ಮದಾಗಲಿದೆ. ಕ್ಯಾಲ್ಸಿಯಂ, ಪ್ರೋಟೀನ್, ವಿಟಮಿನ್ ಡಿ ಮತ್ತು ಆರೋಗ್ಯಕರ ಕೊಬ್ಬಿನಂತಹ ಅನೇಕ ಪೋಷಕಾಂಶಗಳು ಹಾಲಿನಲ್ಲಿ ಕಂಡುಬರುತ್ತವೆ. ಒಣದ್ರಾಕ್ಷಿಯಲ್ಲಿ ವಿಟಮಿನ್ ಮತ್ತು ಫೈಬರ್ ಇದ್ದರೆ, ಬಾದಾಮಿ ಪ್ರೋಟೀನ್, ಫೈಬರ್, ವಿಟಮಿನ್ ಇ ಮತ್ತು ಕಬ್ಬಿಣಾಂಶವನ್ನು ಹೊಂದಿರುತ್ತದೆ. ಇವೆಲ್ಲವೂ ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಆದ್ದರಿಂದ ನೀವು ಅವುಗಳನ್ನು ಪ್ರತಿದಿನ ಹಾಲಿನೊಂದಿಗೆ ನೆನೆಸಿದ ಒಣದ್ರಾಕ್ಷಿ ಮತ್ತು ಬಾದಾಮಿ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.