

ಕ್ಯಾನ್ಸರ್ ಎಂಬುದು ಗಂಭೀರ ಮತ್ತು ಅಪಾಯಕಾರಿ ಕಾಯಿಲೆಯಾಗಿದೆ. ಈ ಕಾಯಿಲೆಯನ್ನು ತಡೆಗಟ್ಟುವುದು ಅಥವಾ ನಿರ್ನಾಮ ಮಾಡುವುದು ಅಸಾಧ್ಯ. ಆದರೆ ಉತ್ತಮ ಜೀವನಶೈಲಿ ಮತ್ತು ಆಹಾರಕ್ರಮದ ಮೂಲಕ ಅಪಾಯದ ಮಟ್ಟವನ್ನು ಕಡಿಮೆ ಮಾಡಬಹುದು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ಸ್ವತಂತ್ರ ರಾಡಿಕಲ್ಗಳಿಂದ ಉಂಟಾಗುವ ಹಾನಿಯಿಂದ ನಿಮ್ಮನ್ನು ರಕ್ಷಿಸುವಂತ ಆಹಾರಕ್ರಮವನ್ನು ಅಳವಡಿಸಿಕೊಳ್ಳಬೇಕು.
ಹಣ್ಣುಗಳು ರುಚಿಕರ ಹಾಗೂ ಆರೋಗ್ಯಕರ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಕೆಲವು ಹಣ್ಣುಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವ ಶಕ್ತಿ ಹೊಂದಿದೆ ಎಂಬುದು ಎಷ್ಟು ಮಂದಿಗೆ ತಿಳಿದಿದೆ... ಹೇಗೆ ಎಂದರೆ ಹಣ್ಣುಗಳು ಆಂಟಿಆಕ್ಸಿಡೆಂಟ್‌ಗಳು, ಫೈಬರ್ ಮತ್ತು ವಿಟಮಿನ್‌ಗಳನ್ನು ಒಳಗೊಂಡಿರುತ್ತವೆ. ಇದು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಹಾಗಾದ್ರೆ ಯಾವೆಲ್ಲಾ ಹಣ್ಣನ್ನು ತಿನ್ನುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಿಕೊಳ್ಳಬಹುದು.. ಇಲ್ಲಿದೆ ಅದರ ಮಾಹಿತಿ