More

    ಇದೊಂದು ಧರ್ಮಯುದ್ಧ; ಶಂಕಿತ ಉಗ್ರ

    ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಬಂಧನಕ್ಕೆ ಒಳಗಾಗಿದ್ದ ಶಂಕಿತ ಉಗ್ರ ಮುಜಾಮೀಲ್ ಷರೀಫ್‌ನ ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಮಾ.28ರಂದು ಮುಜಾಮೀಲ್ ಷರೀಫ್‌ನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿ, ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಏಪ್ರಿಲ್ 3ರ ವರೆಗೂ ಕಸ್ಟಡಿಗೆ ಪಡೆದಿದ್ದರು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಶಂಕಿತನನ್ನು ಹಾಜರುಪಡಿಸಿದ್ದರು. ನ್ಯಾಯಾಲಯ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.

    ಬಂಧಿತ ಮುಜಾಮೀಲ್  ಸ್ಫೋಟದ ಪ್ರಮುಖ ಆರೋಪಿ ಮುಸಾವೀರ್ ಹುಸೇನ್ ಶಬೀಬ್ ಮತ್ತು ಸೂತ್ರದಾರ ಅಬ್ದುಲ್ ಮತೀನ್ ತಾಹಾನ ಸೂಚನೆ ಮೇರೆಗೆ ಸ್ಫೋಟಕ್ಕೆ ಕಚ್ಚಾ ವಸ್ತುಗಳನ್ನು ಪೂರೈಕೆ ಮಾಡಿದ್ದ. ಅಬ್ದುಲ್ ಮತೀನ್ ತಾಹಾನ ಸೂಚನೆ ಮೇರೆಗೆ ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಸ್ಫೋಟದ ಸಂಚು ರೂಪಿಸಿದ್ದ ಎಂಬುದು ಗೊತ್ತಾಗಿದೆ. ಈ ಹಿಂದೆ ನಡೆದ ಶಿವಮೊಗ್ಗ ಪ್ರಾಯೋಗಿಕ ಸ್ಫೋಟ ಮತ್ತು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೂ ಶಂಕಿತ ಸಹಾಯ ಮಾಡಿದ್ದ ಎಂಬುದು ಬೆಳಕಿಗೆ ಬಂದಿದೆ.

    ಅದಕ್ಕಾಗಿ ತಲೆಮರೆಸಿಕೊಂಡಿರುವ ಇಬ್ಬರು ಶಂಕಿತರಿಂದ ಆರ್ಥಿಕ ಸಹಾಯ ಪಡೆದುಕೊಂಡಿದ್ದ. ಪೂರಕ ಸಾಕ್ಷ್ಯಾಗಳು ದೊರೆತಿವೆ. ಆದರೆ, ಮತೀನ್ ತಾಹಾ ಹಾಗೂ ಮುಸಾವೀರ್ ಹುಸೇನ್ ಎಲ್ಲಿದ್ದಾರೆ ಎಂಬ ಮಾಹಿತಿ ನೀಡುತ್ತಿಲ್ಲ. ವಿಚಾರಣೆಯಲ್ಲಿ ಇದೊಂದು ಧರ್ಮಯುದ್ಧ ಎಂದಷ್ಟೇ ಹೇಳುತ್ತಿದ್ದಾನೆ. ಹೀಗಾಗಿ ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts