More

    VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ ರೆಸಿಪಿಯನ್ನೊಮ್ಮೆ ಟ್ರೈ ಮಾಡಿ ನೋಡಿ!

    ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ.

    ಯೂಟ್ಯೂಬ್​ನಲ್ಲಿ ಆಲಿಯಾ ಭಟ್ ಹೆಸರಿನ ಚಾನೆಲ್​ ಮೂಲಕ ಫಿಟ್​ನೆಸ್​ ಹಾಗೂ ಸಿನಿಮಾ ಸಂಬಂಧ ಮಾಹಿತಿ ನೀಡುತ್ತಿರುವ ಆಲಿಯಾ, ಹೊಸ ಪ್ರಯತ್ನ ಎಂಬಂತೆ ಅಡುಗೆ ಮಾಡುವುದಕ್ಕೂ ಕೈಹಾಕಿದ್ದಾರೆ. ಅದರ ಭಾಗವಾಗಿ ಇದೀಗ ಎರಡನೇ ವಿಡಿಯೋವನ್ನು ಅಪ್​ಲೋಡ್​ ಮಾಡಿದ್ದಾರೆ.

    ಈ ಬಗ್ಗೆ ಟ್ವೀಟ್​ ಮಾಡಿರುವ ಆಲಿಯಾ, ಮತ್ತೊಮ್ಮೆ ಶೆಫ್​ ಆಗಿ ಬಂದಿದ್ದೇನೆ. ನನ್ನ ಯೂಟ್ಯೂಬ್​ ಚಾನೆಲ್​​ನಲ್ಲಿ ಹೊಸ ವಿಡಿಯೋ ಅಪ್​ಲೋಡ್​ ಮಾಡಿದ್ದೇನೆ. ಈ ಬಾರಿ ದಿಲೀಪ್​ ಮತ್ತು ಕರೋಲ್​ ತುಂಬಾ ಕಷ್ಟವಾದ ರೆಸಿಪಿಯೊಂದನ್ನು ನನಗೆ ಹೇಳಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

    ಈಗಾಗಲೇ ಆಲಿಯಾ ಕಿಚನ್​ ವಿಡಿಯೋವನ್ನು 1.70 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆ ಮಾಡಿದ್ದಾರೆ. ಸಾಕಷ್ಟು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಆಲಿಯಾ ಯೂಟ್ಯೂಬ್​ನಲ್ಲಿ 10 ಲಕ್ಷ ಕ್ಕೂ ಹೆಚ್ಚು​ ಚಂದಾದಾರರನ್ನು ಹೊಂದಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts