More

    ಪಂಚಮಸಾಲಿ ಮೀಸಲಾತಿ: ಯತ್ನಾಳ್ ಗಡುವಿನ ಬಗ್ಗೆ ಸಿಎಂ ಹೇಳಿದ್ದೇನು?

    ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು 24 ಗಂಟೆಗಳ ಗಡುವನ್ನು ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆಯ ಪ್ರತಿಕ್ರಿಯೆ ನೀಡಿದ್ದಾರೆ.

    ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ನಡೆಸಿದ‌ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರ ಜತೆ ಬೊಮ್ಮಾಯಿ ಮಾತನಾಡಿದರು.

    “ಮೀಸಲಾತಿ ವಿಷಯದ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ನಾವು ತೆಗೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರಿಯಾದ ದಿಕ್ಕಿನಲ್ಲಿ ಹೆಜ್ಜೆಯನ್ನು ಇಡಲಾಗಿದೆ. ಮುಂದೆ ಬರುವ ಅಂತಿಮ ವರದಿಯಲ್ಲಿ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವಂತಹ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದರು.

    ಆರ್ಥಿಕ ಹಿಂದುಳಿದ ವರ್ಗದಿಂದ (ಇಡಬ್ಲ್ಯೂಎಸ್) ತೆಗೆದು ಬೇರೆಯವರಿಗೆ ಮೀಸಲಾತಿ ಕೊಟ್ಟರೆ ಬ್ರಾಹ್ಮಣರಿಗೆ ತೊಂದರೆಯಾಗುತ್ತದೆ ಎಂಬುದಾಗಿ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಹಾರನಹಳ್ಳಿ ಅಶೋಕ್ ಅವರು ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಿ, “ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು” ಎಂದರು.

    ಮನೆ ಬಾಗಿಲಲ್ಲಿ ಕಸ, ಬೆಡ್​ರೂಮ್​ನಲ್ಲಿದ್ದ ಚಿನ್ನಾಭರಣ ನಾಪತ್ತೆ; ಎಚ್ಚರಿಕೆ ಸಾರ್ವಜನಿಕರೇ.. ಈ ಬಗ್ಗೆ ಇರಲಿ ಗಮನ

    ಸಂಸಾರ ನಿಭಾಯಿಸಲಿಕ್ಕೂ ಇಲ್ಲಿದೆ ಒಂದು ಕೋರ್ಸ್​; ಮದುವೆ ಆಗುವವರಿಗೂ-ಆದವರಿಗೂ ನೀಡ್ತಾರೆ ತರಬೇತಿ!

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts