More

    ಇದು ನನ್ನ ಕೊನೆಯ ಅಧಿವೇಶನ ಎನ್ನುತ್ತಲೇ ವಿದಾಯದ ಭಾಷಣ ಮಾಡಿದ ಬಿಎಸ್​ವೈ

    ಬೆಂಗಳೂರು: ಇದು ನನ್ನ ಕೊನೆಯ ಅಧಿವೇಶನ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಮಾತೇ ಇಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆಂದು ಮಾಜಿ ಮುಖ್ಯಮಂತ್ರಿ ಬಿಸ್​ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

    ವಿಧಾನಸಭೆಯಲ್ಲಿ ತಮ್ಮ ಕೊನೆಯ ಭಾಷಣ ಮಾಡಿದ ಯಡಿಯೂರಪ್ಪ, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸದನಕ್ಕೆ ಆಯ್ಕೆಯಾಗಿ ಬರಬೇಕು. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಮಾತೇ ಇಲ್ಲ. ಶಿಕಾರಿಪುರ ತಾಲೂಕಿನ ಜನರ ಪ್ರೀತಿಗೆ ನಾನು ಚಿರಋಣಿಯಾಗಿದ್ದೇನೆ. ಫೆಬ್ರವರಿ 27ಕ್ಕೆ ನನಗೆ 80 ವರ್ಷ ತುಂಬುತ್ತದೆ. ಅಂದೇ ಏರ್​ಪೋರ್ಟ್​ ಉದ್ಘಾಟನೆಗೆ ಬರುತ್ತೇನೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನನಗೆ ಅತ್ಯಂತ ಸಮಾಧಾನ ಮತ್ತು ತೃಪ್ತಿ ತಂದಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಮೋದಿ ನಮ್ಮ ಪ್ರಧಾನಿಯಾಗಿರಬೇಕಿತ್ತು; ಪಾಕ್ ಯುವಕ ಹೀಗೆ ಹೇಳಿದ್ಯಾಕೆ?

    ಪಕ್ಷ ಕಟ್ಟುವಾಗ ನಾನು ಸಭೆಗೆ ಹೋಗಿ ಭಾಷಣ ಶುರು ಮಾಡಿದ ಮೇಲೆಯೇ ಅಟಲ್​ ಬಿಹಾರಿ ವಾಜಪೇಯಿ, ಮುರಳಿ ಮನೋಹರ್ ಜೋಷಿ ಬರುತ್ತಿದ್ದರು. ನಾನು ಇಂದು ಇಷ್ಟು ಎತ್ತರಕ್ಕೆ ಬೆಳೆಯಲು ಆರ್​ಎಸ್​​ಎಸ್ ಕಾರಣ. RSSನಲ್ಲಿ ಸಿಕ್ಕಿದ ತರಬೇತಿಯಿಂದ ನನಗೆ ಇಷ್ಟೆಲ್ಲಾ ಸ್ಥಾನಮಾನ ಸಿಕ್ಕಿದೆ ಎಂದು ನೆನಪು ಮಾಡಿಕೊಂಡಿದ್ದಾರೆ.

    ಸದನದಿಂದ ಕಾಲ್ನಡಿಗೆ ಮೂಲಕ ಹೊರ ಬಂದ ಯಡಿಯೂರಪ್ಪ ಅವರು, ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ, ‌ಎಸ್ ಟಿ ಸೋಮಶೇಖರ್ ಸೇರಿದಂತೆ ಹಲವು ಸಚಿವರು ಶಾಸಕರು ಸಾಥ್ ನೀಡಿದ್ದಾರೆ.

    ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts