More

    ವಿಶ್ವಕರ್ಮ ಸಮುದಾಯ ರಾಜಕೀಯವಾಗಿ ಉನ್ನತ ಸ್ಥಾನಕ್ಕೇರಲು ಇದು ಸಕಾಲ: ಕಂಬಾರ

    ಬೆಂಗಳೂರು: ವಿಶ್ವಕರ್ಮ ಜನಾಂಗ ದೇಶ-ವಿದೇಶಗಳಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ಇಂತಹ ಸಮುದಾಯ ರಾಜಕೀಯವಾಗಿ ಉನ್ನತ ಸ್ಥಾನಕ್ಕೇರಲು ಇದು ಸಕಾಲವಾಗಿದೆ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಹೇಳಿದ್ದಾರೆ.

    ನಾಯಂಡಹಳ್ಳಿ ಬಳಿ ವಿಶ್ವಕರ್ಮ ಸೇವಾ ಪ್ರತಿಷ್ಠಾನ ಹಾಗೂ ವಿಶ್ವಕರ್ಮ ಜಗದ್ಗುರು ಪೀಠ ಶಿವಸುಜ್ಞಾನತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ವಿಶ್ವಕರ್ಮ ಸಮಾಜದ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

    ಇದನ್ನೂ ಓದಿ: ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..

    ಜನಾಂಗದವರು ಒಟ್ಟಾಗಿ ಒಂದೇ ವೇದಿಕೆಯಲ್ಲಿ ಸೇರಿರುವುದು ಉತ್ತಮ ಬೆಳವಣಿಗೆ. ಪ್ರಪಂಚದ ಯಾವುದೇ ಭಾಗಕ್ಕೆ ಹೋದರೂ ನಮ್ಮ ಜನಾಂಗದವರು ಕೆತ್ತಿರುವ ಶಿಲೆಗಳು ಹಾಗೂ ಆಭರಣಗಳು ಕಾಣಸಿಗುತ್ತವೆ. ಭಾರತೀಯ ಆಭರಣದ ಗುಣಮಟ್ಟ ಎಲ್ಲ ದೇಶದ ಆಭರಣಗಳನ್ನು ಮೀರಿಸುತ್ತದೆ. ಆಭರಣ ಗುಣವನ್ನು ಮೀರಿ ರಾಜಕೀಯವಾಗಿ ಮೇಲುಗೈ ಸಾಧಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

    ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಮೇಲ್ಮನೆ ಸದಸ್ಯ ಟಿ.ಎ. ಶರವಣ ಮಾತನಾಡಿ, ವಿಶ್ವಕರ್ಮ ಜನಾಂಗ ರಾಜಕೀಯವಾಗಿ ಹಿಂದುಳಿದಿದ್ದು, ಸೂಕ್ತ ಪ್ರಾತಿನಿಧ್ಯದಿಂದ ವಂಚಿತವಾಗಿದೆ. ಆದರೆ ಜೆಡಿಎಸ್ ಸಮುದಾಯಕ್ಕೆ ಸೂಕ್ತ ಅವಕಾಶಗಳನ್ನು ಕಲ್ಪಿಸಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆದಲ್ಲಿ ನಮ್ಮ ಸಮಾಜದ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಶ್ರಮಿಸುತ್ತೇನೆ ಎಂದರು.

    ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೆ.ಎಸ್.ಪ್ರಭಾಕರ್, ಕಾರ್ಯಾಧ್ಯಕ್ಷ ಡಾ.ಬಿ.ಎಂ. ಉಮೇಶ್ ಕುಮಾರ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

    ಪ್ಯಾನ್-ಆಧಾರ್ ಲಿಂಕ್​, ಮಾ. 31 ಕಡೇ ದಿನ: ಸ್ಟೇಟಸ್​ ಚೆಕ್ ಮಾಡಿಕೊಳ್ಳುವುದು ಹೇಗೆ?

    ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ವಿಜಯಾನಂದ’ ಬಯೋಪಿಕ್ ಪ್ರದರ್ಶನ; ನೂರಾರು ಜನರಿಂದ ವೀಕ್ಷಣೆ, ಮೆಚ್ಚುಗೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts