CJI ಮೇಲೆ ಶೂ ಎಸೆಯುವ ಯತ್ನ; ಇದು ಮನುವಾದಿಗಳ ಕೈವಾಡ: CM ಸಿದ್ದರಾಮಯ್ಯ

Untitled design - 2025-10-07T133907.875
Published on

ಸರ್ವೋಚ್ಛ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿಗಳ ಮೇಲೆ ಶೂ ಎಸೆಯುವ ಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿಯವರೇ ಈ ಘಟನೆಯನ್ನು ಕ್ಷಮಿಸಿದ್ದು, ಅವರ ದೊಡ್ಡಗುಣವನ್ನು ಬಿಂಬಿಸುತ್ತದೆ. ಆದರೆ ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಮನುವಾದಿಗಳ ಕೈವಾಡವಾಗಿದೆ ಎಂದು ಸಿಎಂ(CM) ಸಿದ್ದರಾಮಯ್ಯ ಹೇಳಿದರು.

ಸಚಿವಸಂಪುಟ ಪುನರ್ ರಚನೆ

ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಸಚಿವಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದು ಬೆಂಗಳೂರಿನಲ್ಲಿ ಮಂಗಳವಾರ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದರು.

ಸಮೀಕ್ಷೆ ಅವಧಿ ವಿಸ್ತರಣೆ!

ಸಮೀಕ್ಷೆಗೆ ಕಾಲಾವಕಾಶ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸಮೀಕ್ಷೆಯ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಂತರ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ

ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದರು. ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನುಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣ ದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಶೂದ್ರ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದರು. ವಾಲ್ಮೀಕಿಯವರ ಪ್ರತಿಮೆಯನ್ನು 2017 ರಲ್ಲಿ ಸ್ಥಾಪಿಸಲಾಯಿತು. ವಾಲ್ಮೀಕಿ ಹಾಗೂ ಕನಕದಾಸರಂತಹ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ಮಾನವೀಯ ಮೌಲ್ಯಗಳನ್ನು ಅನುಸರಿದವರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net