More

    ರಾತ್ರಿ ವೇಳೆ ಹೀಗಾದರೆ ಅದು ರೂಪಾಂತರಿ ವೈರಸ್​ ಒಮಿಕ್ರಾನ್​ನ ರೋಗಲಕ್ಷಣ!

    ನವದೆಹಲಿ: ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿರುವ ಜತೆಗೆ ದಿನೇದಿನೆ ಮತ್ತಷ್ಟು ದೇಶಗಳಿಗೆ ಪ್ರವೇಶಿಸುತ್ತ ತನ್ನ ಕಬಂಧ ಬಾಹುಗಳನ್ನು ಆವರಿಸಿಕೊಳ್ಳುತ್ತಿರುವ ರೂಪಾಂತರಿ ವೈರಸ್ ಒಮಿಕ್ರಾನ್ ದಿನದಿಂದ ದಿನಕ್ಕೂ ಮತ್ತಷ್ಟು ಭೀತಿಯನ್ನು ಹುಟ್ಟಿಸುತ್ತಲೇ ಇದೆ.

    ಹೊಸ ರೂಪಾಂತರಿ ವೈರಸ್ ಒಮಿಕ್ರಾನ್​ ಸೌಮ್ಯವಾದ ರೋಗಲಕ್ಷಣಗಳನ್ನು ಹೊಂದಿದ್ದರೂ ಅದು ತೀವ್ರವಾಗಿ ಹರಡಬಲ್ಲುದಾದ್ದರಿಂದ ವೇಗವಾಗಿ ವ್ಯಾಪಿಸುತ್ತಿದೆ. ಎಷ್ಟರಮಟ್ಟಿಗೆ ಎಂದರೆ ಈ ಹಿಂದೆ ಕಾಣಿಸಿಕೊಂಡಿರುವ ಡೆಲ್ಟಾ ವೇರಿಯಂಟ್​ಗಿಂತಲೂ ಒಮಿಕ್ರಾನ್​ ಹರಡುವಿಕೆ ಮೂರು ಪಟ್ಟು ಅಧಿಕ.

    ಇದನ್ನೂ ಓದಿ: ಒಮಿಕ್ರಾನ್​ ಸೋಂಕು ಹರಡುವಿಕೆ ಡೆಲ್ಟಾಗಿಂತ 3 ಪಟ್ಟು ಅಧಿಕ; ಜಿಲ್ಲಾಮಟ್ಟದಲ್ಲೇ ಜಾಗ್ರತೆ ವಹಿಸುವಂತೆ ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ

    ಈ ಮಧ್ಯೆ ಒಮಿಕ್ರಾನ್​ನ ಪ್ರಮುಖ ರೋಗಲಕ್ಷಣ ಏನು ಎಂಬ ಬಗ್ಗೆ ದಕ್ಷಿಣ ಆಫ್ರಿಕದ ವೈದ್ಯಕೀಯ ಪರಿಣತರು ಮತ್ತಷ್ಟು ಮಾಹಿತಿ ಹೊರಹಾಕಿದ್ದಾರೆ. ದಕ್ಷಿಣ ಆಫ್ರಿಕದಲ್ಲಿನ ಒಮಿಕ್ರಾನ್​ ಅಸ್ತಿತ್ವವನ್ನು ಮೊದಲು ಗುರುತಿಸಿದವರಲ್ಲಿ ಒಬ್ಬರಾದ ಡಾ.ಆ್ಯಂಜೆಲಿಕ್​ ಕೊಯೆಟ್ಜೆ ಅದರ ಪ್ರಮುಖ ರೋಗಲಕ್ಷಣಗಳನ್ನು ತಿಳಿಸಿದ್ದಾರೆ.

    ಇದನ್ನೂ ಓದಿ: ಒಮಿಕ್ರಾನ್​ ಮಾರಕವಲ್ಲ ಎಂಬ ಅಭಿಪ್ರಾಯದ ಬೆನ್ನಿಗೇ ಹೊರಬಿತ್ತು ಅದು ಜಾಗತಿಕವಾಗಿ ಅಪಾಯಕಾರಿ ಎನ್ನುವ ವಿಷಯ!

    ಒಮಿಕ್ರಾನ್ ತೀರಾ ವಿಶಿಷ್ಟವಾದ ರೋಗಲಕ್ಷಣಗಳನ್ನು ಹೊಂದಿದ್ದು, ಅದು​ ಫ್ಲೂ ಥರದ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ಈ ಸೋಂಕಿನಿಂದಾಗಿ ವಾಸನಾ ಶಕ್ತಿ ಕೂಡ ಕಳೆದುಹೋಗಿರುವುದಿಲ್ಲ. ಉಳಿದಂತೆ ಸಣ್ಣಜ್ವರ, ಸುಸ್ತು, ಗಂಟಲು ಕೆರೆತವೂ ಇರಬಹುದು. ಆದರೆ ಒಮಿಕ್ರಾನ್​​ಗೆ ಸಂಬಂಧಿಸಿದಂತೆ ಎಲ್ಲಕ್ಕಿಂತಲೂ ಮುಖ್ಯವಾದ ರೋಗಲಕ್ಷಣವೆಂದರೆ ರಾತ್ರಿಯ ಹೊತ್ತಿನಲ್ಲಿ ವಿಪರೀತ ಮೈಕೈನೋವು ಬಂದು ಬೆವರುವುದು. ಇದರ ಜೊತೆಗೆ ಉಸಿರಾಟದ ಸಮಸ್ಯೆ, ಎದೆನೋವು, ರಕ್ತದಲ್ಲಿನ ಆಮ್ಲಜನಕದ ಪ್ರಮಾಣ ಕುಸಿತ ಕಂಡುಬಂದರೆ ತಕ್ಷಣ ಮುಂಜಾಗ್ರತೆ ವಹಿಸಿ ವೈದ್ಯರನ್ನು ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ. –ಏಜೆನ್ಸೀಸ್

    ಪ್ರೇಮಿಗಳ ದಿನದ ಜೋಶ್​ನಲ್ಲಿರುವವರ ಕಿಕ್ಕೇರಿಸಲು ‘ಓಲ್ಡ್​ ಮಾಂಕ್’ ಕೊಡಲು ಸಜ್ಜಾದ ಶ್ರೀನಿ!

    ಸಾರ್ವಜನಿಕರು ಎರಡೂ ಡೋಸ್ ಲಸಿಕೆ ಪಡೆದಿದ್ದರಷ್ಟೇ ಹೋಟೆಲ್​ಗೆ ಪ್ರವೇಶ!; ಕ್ರಿಸ್​ಮಸ್​​-ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಹೊಸ ಆದೇಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts