More

    ನಟಿ ಕೀರ್ತಿ ಸುರೇಶ್​ ಬೋಲ್ಡ್​ ಅವತಾರ ವೈರಲ್!​ ಎಲ್ಲ ಬಾಲಿವುಡ್ ಮಹಿಮೆ ಅಂದ್ರು ಫ್ಯಾನ್ಸ್​

    ಚೆನ್ನೈ: ನಟಿ ಕೀರ್ತಿ ಸುರೇಶ್ ತಮಿಳು ಚಿತ್ರರಂಗದ ಸ್ಟಾರ್​ ನಟಿಯರಲ್ಲಿ ಒಬ್ಬರು. ತೆಲುಗಿನಲ್ಲೂ ನಟಿಸಿದ್ದಾರೆ. ನಟ ವಿಜಯ್​, ಸೂರ್ಯ, ವಿಕ್ರಮ್​, ಶಿವಕಾರ್ತಿಕೇಯನ್​,​ ನಾನಿ, ಮಹೇಶ್​ ಬಾಬು ಸೇರಿದಂತೆ ಸ್ಟಾರ್​ ನಟರ ಜತೆ ತೆರೆ ಹಂಚಿಕೊಂಡಿದ್ದಾರೆ.

    ಕನ್ನಡದಲ್ಲಿ ಒಂದೇ ಒಂದು ಸಿನಿಮಾದಲ್ಲಿ ನಟಿಸದಿದ್ದರೂ ಪ್ಯಾನ್​ ಇಂಡಿಯಾ ಪರಿಕಲ್ಪನೆ ಬಳಿಕ ಕೀರ್ತಿ ಸುರೇಶ್​ ನಟನೆಯ ಡಬ್ಬಿಂಗ್​ ಚಿತ್ರಗಳೂ ಕನ್ನಡದಲ್ಲೂ ಸದ್ದು ಮಾಡಿದ್ದು, ಆಕೆಯ ನಟನೆ ಮತ್ತು ಸೌಂದರ್ಯಕ್ಕೆ ಕನ್ನಡ ಪ್ರೇಕ್ಷಕರು ಸಹ ಫಿದಾ ಆಗಿದ್ದಾರೆ.

    ಸದ್ಯ ಬಾಲಿವುಡ್​ಗೂ ಕೀರ್ತಿ ಸುರೇಶ್​ ಕಾಲಿಟ್ಟಿದ್ದಾರೆ. ನಟ ವರುಣ್ ಧವನ್​ ನಟನೆಯ ಬಾಬಿ ಜಾನ್​ ಸಿನಿಮಾಗೆ ಕೀರ್ತಿ ನಾಯಕಿಯಾಗಿದ್ದಾರೆ. ಈ ಸಿನಿಮಾವನ್ನು ಖ್ಯಾತ ತಮಿಳು ನಿರ್ದೇಶಕ ಆಟ್ಲೀ ನಿರ್ದೇಶನ ಮಾಡುತ್ತಿದ್ದಾರೆ. ಇದು ಇಳಯದಳಪತಿ ವಿಜಯ್​ ನಟನೆಯ ಸೂಪರ್​ ಹಿಟ್​ ತಮಿಳು ಸಿನಿಮಾ ಥೇರಿ ರಿಮೇಕ್​.​

    ವರುಣ್ ಧವನ್ ನಿನ್ನೆಯಷ್ಟೇ ತಮ್ಮ 37 ನೇ ಹುಟ್ಟುಹಬ್ಬವನ್ನು ಚಿತ್ರತಂಡದೊಂದಿಗೆ ಆಚರಿಸಿಕೊಂಡರು. ಈ ವೇಳೆ ಕೀರ್ತಿ ಸುರೇಶ್ ಧರಿಸಿದ್ದ ಉಡುಗೆ ಎಲ್ಲರ ಕಣ್ಣು ಕುಕ್ಕಿದೆ. ಕೆಂಪು ಬಣ್ಣದ ಧಿರಿಸಿನಲ್ಲಿ ತುಂಬಾ ಬೋಲ್ಡ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈವರೆಗೂ ಕೀರ್ತಿ ಅವರನ್ನು ಆ ಅವತಾರದಲ್ಲಿ ನೋಡಿರಲಿಲ್ಲ. ಇದಕ್ಕೆ ಸಂಬಂಧಿಸಿದ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ವೈರಲ್​ ವಿಡಿಯೋದಲ್ಲಿ ಕೀರ್ತಿ ಅವತಾರ ಕಂಡು ಫ್ಯಾನ್ಸ್ ಶಾಕ್​ ಆಗಿದ್ದಾರೆ. ಎಲ್ಲವು ಬಾಲಿವುಡ್​ ಮಹಿಮೆ! ಬಾಲಿವುಡ್​ಗೆ ಕಾಲಿಟ್ಟ ಬೆನ್ನಲ್ಲೇ ಕೀರ್ತಿ ಎಷ್ಟೊಂದು ಬದಲಾಗಿದ್ದಾರೆ ನೋಡಿ. ಕೀರ್ತಿ ಅವರಿಂದ ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಅಭಿಮಾನಿಗಳು ಅಸಮಾಧಾನ ಹೊರಹಾಕುತ್ತಿದ್ದಾರೆ. (ಏಜೆನ್ಸೀಸ್​)

    ಒಮ್ಮೆ ಪೊದೆಯಲ್ಲಿ ಬಟ್ಟೆ ಬದಲಾಯಿಸುವಾಗ… ಯುದ್ಧಕಾಂಡ ನಟಿಯ ಬದುಕಿಗೆ ತಿರುವು ನೀಡಿತು ಆ ಒಂದು ಘಟನೆ

    ನಾನು ಮೂರು ಮದ್ವೆಯಾಗಿದ್ರೂ ಈತನೊಂದಿಗೆ ಮಾತ್ರ ತುಂಬಾ ಖುಷಿಯಾಗಿದ್ದೀನಿ! ನಟಿ ಲಕ್ಷ್ಮೀ ಓಪನ್ ಟಾಕ್

    ನಟಿ ತ್ರಿಷಾ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಉದ್ಯಮಿಯನ್ನು ವರಿಸಲಿದ್ದಾರೆ 37 ವರ್ಷದ ಸ್ಟಾರ್​ ನಟಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts