21 C
Bengaluru
Thursday, January 23, 2020

ಹೆಚ್ಚು ಜಂಕ್​ಫುಡ್​ ತಿನ್ನುವವರೇ ಎಚ್ಚರವಹಿಸಿ; ಇಲ್ಲದಿದ್ದರೆ ಈ ಬಾಲಕನಂತೆ ಕಣ್ಣು, ಕಿವಿ ಕಳೆದುಕೊಳ್ಳಬಹುದು

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಬ್ರಿಸ್ಟೋಲ್​: ಇತ್ತೀಚಿನ ದಿನಗಳಲ್ಲಿ ಯುವಜನರು ಜಂಕ್​ಫುಡ್​ಗಳನ್ನು ತಿನ್ನಲು ಬಯಸುತ್ತಾರೆ. ಕೆಲವರಿಗಂತೂ ದಿನಕ್ಕೆ ಒಮ್ಮೆಯಾದರೂ ಜಂಕ್​ಫುಡ್​ ತಿನ್ನದೆ ಇರಲು ಸಾಧ್ಯವೇ ಇಲ್ಲ ಎಂಬಂತಹ ಪರಿಸ್ಥಿತಿ ತಲುಪಿದ್ದಾರೆ. ಆದರೆ ಜಂಕ್​ಫುಡ್​ಗಳನ್ನು ಹೆಚ್ಚಾಗಿ ತಿನ್ನುವುದರಿಂದ ಬೊಜ್ಜು ಸೇರಿದಂತೆ ಹಲವು ರೋಗಗಳು ಬರುತ್ತಿರುವುದನ್ನು ನಾವು ನೋಡಿದ್ದೇವೆ. ಆದರೆ ಬ್ರಿಟನ್​ನ ಬಾಲಕನೊಬ್ಬ ಜಂಕ್​ಫುಡ್​ಗಳನ್ನು ಮಾತ್ರ ತಿಂದು ತನ್ನ ಕಣ್ಣು ಮತ್ತು ಕಿವಿಯನ್ನು ಕಳೆದುಕೊಂಡಿದ್ದಾನೆ.

ಬ್ರಿಸ್ಟೋಲ್​ನ 19 ವರ್ಷದ ಯುವಕ ಕಳೆದ 10 ವರ್ಷಗಳಿಂದ ಚಿಪ್ಸ್​, ವೈಟ್​ ಬ್ರೆಡ್​, ಸಂಸ್ಕರಿತ ಸ್ನ್ಯಾಕ್ಸ್​ ಮತ್ತು ಮಾಂಸವನ್ನು ಸೇವಿಸುತ್ತಿದ್ದ. ಈತನಿಗೆ 7 ವರ್ಷದವನಿದ್ದಾಗಿನಿಂದ ARFID ಎಂದು ಆಹಾರ ಸಂಬಂಧಿ ರೋಗವಿದೆ. ಹಾಗಾಗಿ ಈತನಿಗೆ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತ ಕೇವಲ ಜಂಕ್​ಫುಟ್​ ಮತ್ತು ಸಂಸ್ಕರಿತ ಆಹಾರವನ್ನು ಮಾತ್ರ ಸೇವಿಸುತ್ತಿದ್ದ.

ಈ ಹಿನ್ನೆಲೆಯಲ್ಲಿ ಆತನ ದೇಹಕ್ಕೆ ಅಗತ್ಯವಾಗಿ ಬೇಕಿದ್ದ ಹಲವು ಪೋಷಕಾಂಶಗಳು ಸಿಗುತ್ತಿರಲಿಲ್ಲ. ಪೋಷಕಾಂಶಗಳ ಕೊರತೆಯಿಂದಾಗಿ ಈತನ ನರಮಂಡಲಕ್ಕೆ ತೀವ್ರ ಹಾನಿಯಾಗಿದ್ದು, ದೃಷ್ಟಿ ಮತ್ತು ಕೇಳುವ ಸಾಮರ್ಥ್ಯವನ್ನು ಈತ ದಿನೇ ದಿನೇ ಕಳೆದುಕೊಳ್ಳುತ್ತಿದ್ದಾನೆ. ಈಗ ಈತನಿಗೆ ಬಹುತೇಕ ಅಂಧತ್ವ ಮತ್ತು ಕಿವುಡು ಉಂಟಾಗಿದೆ ಎಂದು ಆತನ ತಾಯಿ ತಿಳಿಸಿದ್ದಾರೆ.

ಈತನ ಸಹೋದರ ಮತ್ತು ಸಹೋದರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಈತನಿಗೆ ಮಾತ್ರ ಇಂತಹ ಸಮಸ್ಯೆ ಕಾಣಿಸಿಕೊಂಡಿದೆ. ಕೇವಲ ಜಂಕ್​ಫುಡ್​ ಮಾತ್ರ ತಿನ್ನುತ್ತಿರುವುದರಿಂದ ಈತನಿಗೆ ಬೊಜ್ಜೂ ಬಂದಿಲ್ಲ, ಸಣ್ಣಗಿದ್ದಾನೆ. ಈತನ ದೇಹದಲ್ಲಿ ವಿಟಮಿನ್​ ಬಿ12ರ ಸಾಕಷ್ಟು ಕಡಿಮೆ ಇದೆ. ಜತೆಗೆ ಹಲವು ಖನಿಜಾಂಶಗಳು ಮತ್ತು ವಿಟಮಿನ್​ಗಳು ಸಾಕಷ್ಟು ಕಡಿಮೆ ಇವೆ. ಈತ ತೀವ್ರವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಸಾಮಾನ್ಯವಾಗಿ ಜಂಕ್​ಫುಡ್​ಗಳನ್ನು ಹೆಚ್ಚಾಗಿ ತಿನ್ನುವುದರಿಂದ ಬೊಜ್ಜು, ಹೃದಯಸಂಬಂಧಿ ಕಾಯಿಲೆ ಹಾಗೂ ಕ್ಯಾನ್ಸರ್​ ಬರುತ್ತದೆ. ಅದರ ಜತೆಯಲ್ಲೇ ವಿಟಮಿನ್​ಗಳು ಮತ್ತು ಖನಿಜಾಂಶಗಳ ಕೊರತೆಯಿಂದಾಗಿ ಅಪೌಷ್ಟಿಕತೆಯೂ ಕಾಡಿ ಹಲವು ರೋಗಗಳು ಬರುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. (ಏಜನ್ಸೀಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...