More

    ಈ ಕಳ್ಳನದ್ದು ‘ಮಿಂಚಿನ ಓಟ’; ಕದ್ದ ತಕ್ಷಣ ಶರವೇಗದಲ್ಲಿ ಓಡಿ ಪರಾರಿ, ಕೊನೆಗೂ ಸಿಕ್ಕಿಬಿದ್ದ ಆನಂದ್ ಗಿರಿ..

    ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆ ರಾಯರದೊಡ್ಡಿ ನಿವಾಸಿ ಆನಂದ್ ಗಿರಿ ಬಂಧಿತ. ಮೂರು ಪ್ರಕರಣಗಳು ಬೆಳಕಿಗೆ ಬಂದಿದ್ದು, 16 ಲಕ್ಷ ರೂ.ಬೆಲೆ ಬಾಳುವ 306 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಒಂಟಿಯಾಗಿ ಅಪರಾಧ ಕೃತ್ಯ ಎಸಗುತ್ತಿದ್ದ ಆನಂದ್, ವೇಗವಾಗಿ ಓಡುತ್ತಿದ್ದ. ಇದನ್ನೇ ಲಾಭ ಮಾಡಿಕೊಂಡ ಆರೋಪಿ ಬಸ್ ನಿಲ್ದಾಣ ಮತ್ತು ಬಸ್‌ಗಳಲ್ಲಿ ಓಡಾಡುತ್ತಿದ್ದ. ಯಾವ ಪ್ರಯಾಣಿಕರ ಬಳಿ ಚಿನ್ನಾಭರಣ ಇದೆ, ಬ್ಯಾಗ್ ಇದೆ ಎಂದು ಗಮನಿಸಿ ಅವರ ಗಮನ ಬೇರೆಡೆ ಇದ್ದಾಗ ಬ್ಯಾಗ್ ಕದ್ದು ವೇಗವಾಗಿ ಓಡುತ್ತಿದ್ದ. ಇದರಿಂದ ಸಾರ್ವಜನಿಕರು ಎಚ್ಚೆತ್ತುಕೊಂಡರೂ ಸಿಗುತ್ತಿರಲಿಲ್ಲ.

    ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಕೃತ್ಯ ಎಸಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಇನ್‌ಸ್ಪೆಕ್ಟರ್ ಜಿ.ಕೆ. ಶಂಕರ್ ನಾಯಕ್ ನೇತೃತ್ವದ ತಂಡ ಆರೋಪಿ ಬಂಧನಕ್ಕೆ ಬಲೆಬೀಸಿತ್ತು. ಖಚಿತ ಮಾಹಿತಿ ಮೇರೆಗೆ ರಾಮನಗರದಲ್ಲಿ ಬಂಧಿಸಿ ವಿಚಾರಣೆ ನಡೆಸಿದಾಗ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ. ಕದ್ದ ಆಭರಣ ರಾಮನಗರದಲ್ಲಿ ಅಡವಿಟ್ಟು ಬಂದ ಹಣದಲ್ಲಿ ಶೋಕಿ ಜೀವನ ನಡೆಸುತ್ತಿದ್ದ. ಆರೋಪಿ ಕೊಟ್ಟ ಮಾಹಿತಿ ಮೇರೆಗೆ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶಾಲಾ-ಕಾಲೇಜುಗಳಿಗೆ ರಜೆ ವಿಚಾರ; ಕರೊನಾ ನಿಯಂತ್ರಣ ನಿಟ್ಟಿನಲ್ಲಿ ಸಿಎಂ ಮಹತ್ವದ ನಿರ್ಧಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts