More

    ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ

    ಚನ್ನರಾಯಪಟ್ಟಣ: ಕನ್ನಡ ನಾಡು-ನುಡಿ ಹಾಗೂ ನೆಲ-ಜಲದ ಗೌರವ ಹೆಚ್ಚಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

    ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣ ಪೊಲೀಸ್ ಠಾಣೆ ಎದುರಿನ ಮಾಧ್ಯಮಿಕ ಶಾಲಾ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲ ಮಕ್ಕಳಿಗೂ ಬೆಳಗಿನ ಫಲಹಾರ, ಶುದ್ಧ ಕುಡಿಯುವ ನೀರು ಹಾಗೂ ಸಿಹಿ ಹಂಚಿಕೆ ಮಾಡಲಾಗುವುದು. ಕನ್ನಡ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ಸ್ತಬ್ಧಚಿತ್ರ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಇರಲಿದೆ. 50 ಸಾವಿರ ರೂ. ವೆಚ್ಚದಲ್ಲಿ ಮೆರವಣಿಗೆಗೆ ಅವಶ್ಯವಿರುವ ಕಲಾ ತಂಡಗಳನ್ನು ಸಿದ್ಧಪಡಿಸುವಂತೆ ಕೆಲ ಸಂಘ-ಸಂಸ್ಥೆಗಳನ್ನು ಗುರುತು ಮಾಡಿ ಸಂಪೂರ್ಣ ಜವಾಬ್ದಾರಿ ವಹಿಸಲಾಗಿದೆ ಎಂದರು.

    ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡ ಭಾಷೆಯಲ್ಲಿ 125ಕ್ಕೆ 125 ಅಂಕ ಪಡೆದ 100 ವಿದ್ಯಾರ್ಥಿಗಳಿಗೆ ಪ್ರೇರಣಾತ್ಮಕ ಪುಸ್ತಕ ಹಾಗೂ ಹೂ ನೀಡಿ ಅಭಿನಂದಿಸಲಾಗುವುದು. ಸಂಗೀತ, ಸಾಹಿತ್ಯ, ಕೃಷಿ, ಕಲೆ, ಕ್ರೀಡೆ, ರಕ್ಷಣೆ, ಮಾಧ್ಯಮ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 20 ಜನ ಸಾಧಕರನ್ನು ಸನ್ಮಾನಿಸಲಾಗುವುದು. ಎಲ್ಲ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಸಮಾರಂಭದಲ್ಲಿ ಭಾಗವಹಿಸಬೇಕು. ಪಟ್ಟಣದೆಲ್ಲೆಡೆ ಕನ್ನಡಧ್ವಜ ರಾರಾಜಿಸಬೇಕು. ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು ಎಂದು ಸೂಚಿಸಿದರು.

    ತಹಸೀಲ್ದಾರ್ ಬಿ.ಎಂ.ಗೋವಿಂದರಾಜು ಅವರು ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಸಿದ್ಧಪಡಿಸಲಾಗಿರುವ ರೂಪುರೇಷೆಯನ್ನು ಸಭೆ ಗಮನಕ್ಕೆ ತಂದರು. ತಾಪಂ ಇಒ ಜಿ.ಆರ್.ಹರೀಶ್, ಬಿಇಒ ಎಚ್.ಎಂ.ದೀಪಾ, ಡಿವೈಎಸ್‌ಪಿ ಪಿ.ರವಿಪ್ರಸಾದ್, ಸಿಪಿಐ ವಸಂತ್‌ಕುಮಾರ್, ಕಸಾಪ ತಾಲೂಕು ಅಧ್ಯಕ್ಷ ಎಚ್.ಎನ್.ಲೋಕೇಶ್, ಕೆಂಪೇಗೌಡ ವೇದಿಕೆ ಅಧ್ಯಕ್ಷ ಆನಂದ್ ಕಾಳೇನಹಳ್ಳಿ, ತಾಲೂಕು ರೈತ ಸಂಘದ ಅಧ್ಯಕ್ಷ ಅರಳಾಪುರ ಮಂಜೇಗೌಡ, ಮಹಿಳಾ ಅಧ್ಯಕ್ಷೆ ನಾಗರತ್ನ, ದಲಿತ ಮುಖಂಡ ಸಿ.ಎನ್.ಮಂಜುನಾಥ್, ಜ್ಞಾನದರ್ಶಿನಿ ಮಹಾದೇವ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts