More

  ದೇಶದಲ್ಲಿ ಈ ಬಾರಿ ಗೆಲುವು ನಮ್ಮದೇ

  ರಿಪ್ಪನ್‌ಪೇಟೆ: ಈ ಬಾರಿ ಲೋಕಸಭಾ ಚುನಾವಣೆ ವಿಶೇಷತೆಗಳನ್ನು ಹೊಂದಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗೂ ದೇಶದಲ್ಲಿ ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗಳೇ ಅಧಿಕ ಸಂಖ್ಯೆಯಲ್ಲಿ ಗೆಲ್ಲುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗದಿಂದ ಕೊಲ್ಲೂರಿಗೆ ಹೋಗುವ ಮಾರ್ಗಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರದ ಜನಪರ ಆಡಳಿತವನ್ನು ಜನ ಮೆಚ್ಚಿಕೊಂಡಿದ್ದಾರೆ. ರಾಜ್ಯಾದ್ಯಂತ ನಮ್ಮ ಪಕ್ಷದೆಡೆ ಮತದಾರರ ಒಲವಿದೆ. ಅದರಂತೆಯೇ ಶಿವಮೊಗ್ಗ ಕ್ಷೇತ್ರವನ್ನು ಈ ಬಾರಿ ನಾವು ಗೆಲ್ಲುತ್ತೇವೆ. ಮಹಾರಾಷ್ಟ್ರ, ಉತ್ತರಪ್ರದೇಶ, ಬಿಹಾರಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದ್ದರೂ ಅವರ ಅನೈತಿಕ ಮೈತ್ರಿ ಮತ್ತು ನಡವಳಿಕೆಯನ್ನು ಜನರು ವಿರೋಧಿಸುತ್ತಿದ್ದಾರೆ. ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತ ವಿರುದ್ಧದ ಅಲೆಯಿದ್ದು ಕಾಂಗ್ರೆಸ್ ನೇತೃತ್ವದ ಮೈತ್ರಿ ಪಕ್ಷಗಳ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುತ್ತಾರೆ. ಬಿಜೆಪಿ ಮೈತ್ರಿ ಪಕ್ಷಗಳು 200 ಸಂಖ್ಯೆಯ ಗಡಿ ದಾಟುವುದಿಲ್ಲ ಎಂದರು. ಶಾಸಕ ಗೋಪಾಲಕೃಷ್ಣ ಬೇಳೂರು, ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ, ಶಿವರಾಜ್‌ಕುಮಾರ್, ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮೀ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts