

ನೀರು ನಮ್ಮ ದೇಹಕ್ಕೆ ಬೇಕಾಗಿರುವ ಅಗತ್ಯ ವಸ್ತು. ದೇಹದಲ್ಲಿ ನೀರಿನ ಕೊರತೆ ಉಂಟಾದರೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ. ಕಡಿಮೆ ನೀರು ಕುಡಿಯುವ ಅಭ್ಯಾಸವು ನಿಮ್ಮ ದೇಹದ ಮೇಲೆ ಅನೇಕ ಋಣಾತ್ಮಕ ಪರಿಣಾಮಕ್ಕೆ ಕಾರಣವಾಗವುದು. ಡಿಹೈಡ್ರೇಟ್ ಆಗುವುದರಿಂದ ಚರ್ಮಕ್ಕೆ ಮಾತ್ರವಲ್ಲ ದೇಹದ ಅಂಗಾಂಗಳಿಗೂ ಅಪಾಯ ತಪ್ಪಿದ್ದಲ್ಲ. ಅದರಲ್ಲೂ ದೇಹದಲ್ಲಿ ನೀರು ಕಡಿಮೆಯಾದರೆ ಹೃದಯ ಸಂಬಂಧಿ ಸಮಸ್ಯೆಗೆ ಕಾರಣವಾಗಬಹುದು ಎಂಬುದು ನಿಮಗೆ ತಿಳಿದಿದೆಯೇ? ಹಾಗಾದ್ರೆ ಡಿಹೈಡ್ರೇಟ್ ಆಗುವುದರಿಂದ ಆಗುವ ತೊಂದರೆ ಏನು.. ನಮಗೆ ಡಿಹೈಡ್ರೇಟ್ ಆಗಿದೆ ಎಂದು ತಿಳಿದುಕೊಳ್ಳುವುದು ಹೇಗೆ..ಎಂಬುದರ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇದನ್ನು ಓದಿ: ದೀರ್ಘಾಯುಷ್ಯ ನಿಮ್ಮದಾಗ್ಬೇಕಾ..? ಹಾಗಾದರೆ ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ.. ನೀರಿನ ಕೊರತೆಯಿದೆ ಈ ಮೂಲಕ ದೇಹವು ನಮಗೆ ಸೂಚಿಸುತ್ತದೆ:
ಡಿಹೈಡ್ರೇಟ್ ಆಗುವುದರಿಂದ ಬರುವ ಸಮಸ್ಯೆ: ಅನಿಯಮಿತ ಹೃದಯ ಬಡಿತ: ದೇಹದಲ್ಲಿನ ಎಲೆಕ್ಟ್ರೋಲೈಟ್ಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಕಷ್ಟು ನೀರು ಕುಡಿಯುವುದು ಮುಖ್ಯ. ದೇಹದಲ್ಲಿನ ನೀರಿನ ಕೊರತೆಯು ಎಲೆಕ್ಟ್ರೋಲೈಟ್ ಮಟ್ಟದಲ್ಲಿ ಬದಲಾವಣೆಗಳಿಗೆ ಕಾರಣವಾಗುತ್ತದೆ. ಅಲ್ಲದೆ ಪ್ಲಾಸ್ಮಾದ ಪರಿಮಾಣವನ್ನು ಕಡಿಮೆ ಮಾಡುತ್ತದೆ. ಇದು ಹೃದಯ ಬಡಿತದ ಮೇಲೆ ಪರಿಣಾಮ ಬೀರುತ್ತದೆ.
ರಕ್ತದ ಹರಿವು ಕಡಿಮೆಯಾಗುತ್ತದೆ: ನೀರಿನ ಕೊರತೆಯು ರಕ್ತದ ಗಾತ್ರದಲ್ಲಿ ಬದಲಾವಣೆ ಮಾಡುತ್ತದೆ. ಇದು ದೇಹದಲ್ಲಿ ರಕ್ತದ ಹರಿವನ್ನು ನಿಧಾನಗೊಳಿಸುತ್ತದೆ. ಆ ಸಮಯದಲ್ಲಿ ರಕ್ತವನ್ನು ಪಂಪ್ ಮಾಡಲು ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತದೆ. ಇದು ಅಧಿಕ ರಕ್ತದೊತ್ತಡ ಮತ್ತು ಇತರ ಹೃದಯ ಸಮಸ್ಯೆಗಳನ್ನು ಉಂಟುಮಾಡಬಹುದು.
ಮೂತ್ರಪಿಂಡದ ಮೇಲೆ ನಕಾರತ್ಮಾಕ ಪರಿಣಾಮ: ನೀರಿನ ಕೊರತೆಯು ಮೂತ್ರಪಿಂಡಗಳ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಮೂತ್ರಪಿಂಡದ ತೊಂದರೆಗಳು ಹೃದಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಏಕೆಂದರೆ ಎರಡೂ ಅಂಗಗಳು ಪರಸ್ಪರ ಸಂಬಂಧ ಹೊಂದಿವೆ.
ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ: ನೀರಿನ ಕೊರತೆಯಿಂದಾಗಿ ಚಯಾಪಚಯವು ನಿಧಾನಗೊಳ್ಳುತ್ತದೆ. ಇದು ದೇಹದಲ್ಲಿ ಕೊಬ್ಬು ಮತ್ತು ವಿಷವನ್ನು ಹೆಚ್ಚಿಸುವ ಅಪಾಯವನ್ನು ಹೆಚ್ಚಿಸುತ್ತದೆ. ಇದು ಹೃದಯದ ಅಪಧಮನಿಗಳಲ್ಲಿ ಕೆಡುಕನ್ನುಂಟು ಮಾಡುವ ಸಾಧ್ಯತೆಯನ್ನು ಹೆಚ್ಚಿಸಬಹುದು.
ದುರ್ವಾಸನೆ: ದೇಹದಲ್ಲಿ ನೀರಿನ ಕೊರತೆಯಾದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿರುವ ಲಾಲಾರಸದ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಬ್ಯಾಕ್ಟೀರಿಯಾಗಳು ವೃದ್ಧಿಯಾಗುತ್ತವೆ. ಇದು ಬಾಯಿಯಿಂದ ದುರ್ವಾಸನೆ ಉಂಟಾಗಲು ಕಾರಣವಾಗುತ್ತದೆ. ಜತೆಗೆ ಬಾಯಿ ಒಣಗಲು ಆರಂಭವಾಗುತ್ತದೆ.