blank

ಈ ವರ್ಷವೂ ರಾಜ್ಯ ಕೊತಕೊತ: ವಾಡಿಕೆಗಿಂತ ಅಧಿಕ ಉಷ್ಣಾಂಶ

blank

ಬೆಂಗಳೂರು: ಕಳೆದ ವರ್ಷ ಬಿಸಿಲಿನ ಝಳಕ್ಕೆ ಬಳಲಿ ಬೆಂಡಾಗಿದ್ದ ಕರುನಾಡು, ಈ ವರ್ಷವೂ ಅಧಿಕ ತಾಪಮಾನ ಎದುರಿಸಲು ಅಣಿಯಾಗಬೇಕಿದೆ. ಜಾಗತಿಕ ತಾಪಮಾನ ಏರಿಕೆ, ತೇವಾಂಶ ಕೊರತೆ, ಶುಭ್ರ ಆಕಾಶ, ಒಣಗಾಳಿ ಬೀಸುವುದೂ ಸೇರಿ ವಿವಿಧ ಕಾರಣಗಳಿಂದ ಬಹುತೇಕ ಜಿಲ್ಲೆಗಳ ಗರಿಷ್ಠ ತಾಪಮಾನದಲ್ಲಿ ವಾಡಿಕೆಗಿಂತ 3-4 ಡಿ.ಸೆ. ಉಷ್ಣಾಂಶ ಹೆಚ್ಚಳವಾಗಲಿದ್ದು, ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ಕೊಟ್ಟಿದೆ.

ಸಾಮಾನ್ಯವಾಗಿ ಬೇಸಿಗೆ ಕಾಲ ಮಾರ್ಚ್​ನಿಂದ ಆರಂಭವಾಗಿ ಮೇ ವರೆಗೆ ಇರಲಿದೆ. ಆದರೆ, ಈ ಬಾರಿ ವಾಡಿಕೆಗೂ ಮುನ್ನವೇ ಬೇಸಿಗೆ ಶುರುವಾಗುವ ಸಾಧ್ಯತೆ ಇದೆ. ಏಪ್ರಿಲ್​ನಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್​ನಲ್ಲೇ ಅಧಿಕವಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ 3-4 ಡಿ.ಸೆ. ಹೆಚ್ಚು ಉಷ್ಣಾಂಶ ವರದಿಯಾಗಲಿದೆ. ರಾಜ್ಯದ ಶೇ.90 ಪ್ರದೇಶ ಬಿಸಿಲಿನ ತಾಪಕ್ಕೆ ನಲುಗಲಿವೆ. ಗರಿಷ್ಠ ತಾಪಮಾನದಲ್ಲಿ 40 ಡಿ.ಸೆ.ಗಿಂತ ಹೆಚ್ಚು ಉಷ್ಣಾಂಶ ದಾಖಲಾದರೆ ಶಾಖ ಅಲೆ ಎಂದು ಕರೆಯಲಾಗುತ್ತದೆ. ಆರು ವರ್ಷಗಳಿಂದ ಬಹುತೇಕ ಜಿಲ್ಲೆಗಳಲ್ಲಿ ಅಧಿಕ ತಾಪಮಾನ ದಾಖಲಾಗುತ್ತಿದೆ.

ಹೆಚ್ಚಳಕ್ಕೆ ಕಾರಣ?
ಮಣ್ಣಿನಲ್ಲಿ ತೇವಾಂಶ ಕೊರತೆ, ಕೆರೆ&ಕುಂಟೆಗಳಲ್ಲಿ ನೀರು ಬರಿದಾಗುವುದು, ತೇವಾಂಶ ಭರಿತ ಮೋಡ ಇಲ್ಲದಿರುವುದು, ಅರಣ್ಯ ನಾಶ, ಪಳೆಯುಳಿಕೆ ಇಂಧನ ಸುಡುವುದು, ತಗ್ಗದ ಎಲ್​&ನಿನೋ ಪ್ರಭಾವ, ಕರ್ನಾಟಕದ ಹೆಚ್ಚಿನ ಭಾಗಗಳು ಶುಷ್ಕ, ಅರೆ ಶುಷ್ಕ ಸ್ಥಿತಿ.

ಬಿಗಾಡಾಯಿಸಲಿದೆ ನೀರಿನ ಸಮಸ್ಯೆ?
ಈ ಬಾರಿ ವಾಡಿಗೆಗಿಂತ ಹೆಚ್ಚು ಮಳೆ ಸುರಿದ ಪರಿಣಾಮ ಜಲಾಶಯಗಳು, ನದಿಗಳು, ಕೆರೆ&ಕುಂಟೆಗಳಲ್ಲಿ ಯಥೇಚ್ಛ ನೀರು ಸಂಗ್ರಹವಾಗಿದೆ. ಈ ವರ್ಷ 4 ತಿಂಗಳು ಬೇಸಿಗೆ ಇರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗಾಡಾಯಿಸಬಹುದು. ಅಂತರ್ಜಲ ಮಟ್ಟ ಕುಸಿದು ಬೋರ್​ವೆಲ್​ಗಳು ಬತ್ತುವ ಆತಂಕ ಎದುರಾಗಿದೆ.

ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಕಾರವಾರ, ಕಲಬುರಗಿ, ಗದಗ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಈಗಾಗಲೇ ವಾಡಿಕೆಗಿಂತ 2&3 ಡಿ. ಸೆ. ಅಧಿಕ ತಾಪಮಾನ ದಾಖಲಾಗುತ್ತಿದೆ. ಪ್ರಸಕ್ತ ತಿಂಗಳ 2ನೇ ಅಥವಾ 3ನೇ ವಾರದಿಂದ ಬೇಸಿಗೆ ಶುರುವಾಗುವ ಸಾಧ್ಯತೆ ಇದೆ. ಈ ಬಾರಿ 4 ತಿಂಗಳು ಬಿಸಿಲು ಇರಲಿದೆ.
ಸಿ.ಎಸ್​.ಪಾಟೀಲ್​. ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ. 

 

ಅಬಕಾರಿ ಆದಾಯ ಖೋತಾ: ರಾಜ್ಯ ಬೊಕ್ಕಸಕ್ಕೆ ಹೊಡೆತ!

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…