

ಬಂಟ್ವಾಳ: ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅ.5ರಿಂದ 7ರ ವರೆಗೆ ನಡೆದ ಭಾರತದ ಪ್ರಾಚೀನ ಸಾಂಪ್ರದಾಯಿಕ ಯುದ್ಧ ಕಲೆ ಥಾಂಗ್-ತಾ ರಾಷ್ಟ್ರೀಯ ಮಟ್ಟದ ಜೂನಿಯರ್ ಚಾಂಪಿಯನ್‌ಷಿಪ್‌ನಲ್ಲಿ ಸುಂಕದಕಟ್ಟೆ ನಿರಂಜನಾನಂದ ಸ್ವಾಮಿ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್ ವಿಭಾಗದ ಪ್ರಥಮ ವರ್ಷದ ಡಿಪ್ಲೋಮ ವಿದ್ಯಾರ್ಥಿ ಸತೀಶ್ ಎಸ್.ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಕಳೆದ ಸೆ.21ಮತ್ತು 22ರಂದು ವಿಜಯಪುರದಲ್ಲಿ ನಡೆದ 5ನೇ ರಾಜ್ಯಮಟ್ಟದ ಥಾಂಗ್ ತಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು. ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಪೊಳಲಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ಹಾಗೂ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಸತೀಶ್ ಅವರ ಸಾಧನೆಗೆ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕಾಚೈತನ್ಯನಂದ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ.