ಶೃಂಗೇರಿ: ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಮಂಡಲ ಕಾರ್ಯಕರ್ತರು ತಹಸೀಲ್ದಾರ್ ಗೌರಮ್ಮಗೆ ಮನವಿ ಸಲ್ಲಿಸಿದರು.
ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ನೂತನ್‌ಕುಮಾರ್ ಮಾತನಾಡಿ, ಜಿಲ್ಲಾ ಅಸ್ಪತ್ರೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ.ಬಿ.ಎಸ್.ವೆಂಕಟೇಶ್ ಆರೋಗ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಮೇಲೆ ಆಗಿರುವ ಹಲ್ಲೆ ನಿಜಕ್ಕೂ ಖಂಡನೀಯ.ರಾಜ್ಯದಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಯುವುದು ಸಾಮಾನ್ಯವಾಗಿದೆ. ಹಲ್ಲೆ ನಡೆಸಿದವರ ಮೇಲೆ ಕಾನೂನು ಕ್ರಮ ಕೈಕೊಳ್ಳಬೇಕು. ಇಲ್ಲವಾದರೆ ವೈದ್ಯರ ಆತ್ಮಸ್ಥೆರ್ಯ ಕುಸಿಯುತ್ತದೆ ಎಂದರು.
ಪಪಂ ಅಧ್ಯಕ್ಷ ಎಚ್.ಎಸ್.ವೇಣುಗೋಪಾಲ್ ಮಾತನಾಡಿ, ಈ ಹಿಂದೆ ಹಲವು ವರ್ಷ ಶೃಂಗೇರಿ ಸರ್ಕಾರಿ ಅಸ್ಪತ್ರೆಯಲ್ಲಿ ನಿರ್ವಹಿಸಿದ್ದ, ಡಾ.ವೆಂಕಟೇಶ್ ಕರ್ತವ್ಯ ಜನರ ಜತೆ ಉತ್ತಮ ಭಾಂದವ್ಯ ಹೊಂದಿದ್ದರು. ಜನಮನ್ನಣೆ ಪಡೆದ ವೈದ್ಯರ ಮೇಲೆ ನಡೆದ ಹಲ್ಲೆ ದುರುದ್ದೇಶದಿಂದ ಕೂಡಿದೆ. ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದು. ಹಾಗಾಗಿ ಹಲ್ಲೆ ನಡೆಸಿದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಪಪಂ ಉಪಾಧ್ಯಕ್ಷ ಎಂ.ಎಲ್.ಪ್ರಕಾಶ್, ಸದಸ್ಯ ರತ್ನಾಕರ್ ಶೆಟ್ಟಿ, ಬಿಜೆಪಿ ಮುಖಂಡರಾದ ಎಚ್.ಎಸ್.ಸುಬ್ರಹ್ಮಣ್ಯ, ಲಕ್ಷಣನಾಯ್ಕ, ಸಚಿನ್ ಗುಬ್ಬಗೋಡು ಹಾಜರಿದ್ದರು.
