Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

ಮಸೀದಿ ಒಡೆಯದಂತೆ ಚೀನಾದಲ್ಲಿ ಪ್ರತಿಭಟನೆ

Saturday, 11.08.2018, 3:02 AM       No Comments

ಬೀಜಿಂಗ್: ವಾಯವ್ಯ ಚೀನಾದ ನಿಂಗ್ಸಿಯಾ ಪ್ರಾಂತ್ಯದಲ್ಲಿ ಅನುಮತಿಯಿಲ್ಲದೇ ನಿರ್ವಿುಸಲಾಗಿದ್ದ ಮಸೀದಿ ತೆರವಿಗೆ ಮುಂದಾಗಿದ್ದ ಸ್ಥಳೀಯ ಆಡಳಿತ ವಿರುದ್ಧ ಮುಸ್ಲಿಮ್ ಸಮುದಾಯದ ಸಾವಿರಾರು ಜನರು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಚೀನಾದಲ್ಲಿ ಈ ರೀತಿಯ ಪ್ರತಿಭಟನೆ ತೀರಾ ವಿರಳ. ನಿರ್ವಣಕ್ಕೂ ಮುನ್ನ ಮಸೀದಿಯ ಆಡಳಿತ ಮಂಡಳಿ ಸ್ಥಳೀಯ ಅಧಿಕಾರಿಗಳಿಂದ ಅಗತ್ಯ ಅನುಮತಿ ಪಡೆದಿರಲಿಲ್ಲ. ಹೀಗಾಗಿ ಮಸೀದಿ ಕೆಡವಲಾಗುವುದು ಎಂದು ಅಧಿಕಾರಿಗಳು ನೋಟಿಸ್ ನೀಡಿದ್ದರು.ಮಸೀದಿಯ ನಿರ್ಮಾಣ ಹಂತದಲ್ಲಿಯೇ ಅಧಿಕಾರಿಗಳು ತಡೆಯಬೇಕಿತ್ತು ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಸದ್ಯಕ್ಕೆ ಅಧಿಕಾರಿಗಳು ಮತ್ತು ಪ್ರತಿಭಟನಾಕಾರರ ನಡುವೆ ಸಂಧಾನ ಏರ್ಪಟ್ಟಿದ್ದು, ಮಸೀದಿ ಪುನರ್ ನಿರ್ಮಾಣ ಯೋಜನೆ ಸಿದ್ಧಗೊಳ್ಳುವ ತನಕ ಕಟ್ಟಡವನ್ನು ಒಡೆಯದಿರಲು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ.

Leave a Reply

Your email address will not be published. Required fields are marked *

Back To Top