More

    ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ ಪ್ರಕರಣ; ಎನ್​ಐಎ ಅಧಿಕಾರಿಗಳಿಂದ ಎಫ್​​ಐಆರ್​​​ ದಾಖಲು

    ಬೆಂಗಳೂರು: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬಂದಿರುವ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

    ಕೊಲೆ ಪ್ರಕರಣವೊಂದರಲ್ಲಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿದ್ದ ಜ್ಞಾನೇಶ್ ಪೂಜಾರಿ ಎಂಬ ಆರೋಪಿ, ಮಾ.21ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿಯವರಿಗೆ ಜೀವ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಈ ಹಿಂದೆ ಜ.14ರಂದು ಸಚಿವರ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಒಡ್ಡುವುದರ ಜತೆಗೆ 10 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದನು.

    ಇದನ್ನೂ ಓದಿ: ಬಜರಂಗದಳ ಬ್ಯಾನ್ ಮಾಡ್ತಾರಾ? ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುತ್ತಾರಾ? ಪರಂ ಹೇಳೋದೇನು?

    ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿದಾಗ ಬೆಳಗಾವಿ ಜೈಲಿನ ಮಾಹಿತಿ ಬಹಿರಂಗ ಆಗಿತ್ತು. ದಾವೂದ್ ಇಬ್ರಾಹಿಂ ಗ್ಯಾಂಗ್​ನ ಸದಸ್ಯ ಎಂದು ಬೆದರಿಕೆ ಹಾಕಿದ್ದನು. ಈ ಹಿನ್ನೆಲೆಯಲ್ಲಿ ಎನ್​​​ಐಎ ಅಧಿಕಾರಿಗಳಿಂದ ಎಫ್​​​ಐಆರ್ ದಾಖಲು ಮಾಡಿಕೊಂಡಿದ್ದಾರೆ. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಎಫ್‌ಐಆರ್ ಮಾಹಿತಿ ರವಾನಿಸಲಾಗಿದೆ.

    ವಿಜಯ್ ಮಲ್ಯ ಬಳಿಯಿದ್ದ ಟಿಪ್ಪು ಸುಲ್ತಾನ್ ಖಡ್ಗ 145 ಕೋಟಿ ರೂ.ಗೆ ಹರಾಜು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts