

34 ವಾಹನಗಳಲ್ಲಿ 400 ಕೆಜಿ ಆರ್‌ಡಿಎಕ್ಸ್ ಹೊತ್ತ ಮಾನವ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ್ದಾನೆ. ಸಂಚಾರ ಪೊಲೀಸ್ ಠಾಣೆಗೆ ಬೆದರಿಕೆ ಕರೆ ಬಂದಿದೆ. ಕಾಲ್ ರೀಸಿವ್ ಮಾಡಿದ ಪೊಲೀಸರು ಶುಕ್ರವಾರ ನಗರದ್ಯಾಂತ ಭಾರೀ ಕಟ್ಟೆಚ್ಚರವಹಿಸಿದ್ದಾರೆ ಎಂದು ವರದಿಯಾಗಿದೆ.
ಲಷ್ಕರ್-ಎ-ಜಿಹಾದಿ ಎಂಬ ಸಂಘಟನೆಯಿಂದ ಈ ಬೆದರಿಕೆ ಬಂದಿದ್ದು, ರಾಜ್ಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಾನವ ಬಾಂಬ್‌ಗಳನ್ನು ಹೊತ್ತೊಯ್ಯುವ 34 ಕಾರುಗಳನ್ನು ಬಳಸಿ 400 ಕೆಜಿ ಆರ್‌ಡಿಎಕ್ಸ್ ಸ್ಫೋಟಿಸಿ ಒಂದು ಕೋಟಿ ಜನರನ್ನು ಕೊಲ್ಲಲಾಗುವುದು ಎಂದು ಬೆದರಿಕೆ ಸಂದೇಶದಲ್ಲಿ ಹೇಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ರೈಲು ನಿಲ್ದಾಣವನ್ನು ಸ್ಫೋಟಿಸುವುದಾಗಿ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪದ ಮೇಲೆ 43 ವರ್ಷದ ವ್ಯಕ್ತಿಯನ್ನು ಸೋಮವಾರ ಬಂಧಿಸಲಾಗಿದೆ.
ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ತಿಳಿಸಿರುವ ಪ್ರಕಾರ, ಆರೋಪಿ ರೂಪೇಶ್ ಮಧುಕರ್ ರಾನ್ಪಿಸೆ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಪೊಲೀಸ್ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಕಲ್ವಾ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾರೆ.(ಏಜೆನ್ಸೀಸ್)