More

    ಅಹಮದಾಬಾದಿನಲ್ಲಿ ನಾಲ್ವರು ಶಂಕಿತ ಉಗ್ರರು ಅರೆಸ್ಟ್​; ಅಭ್ಯಾಸ ರದ್ದುಗೊಳಿಸಿದ ಆರ್​ಸಿಬಿ

    ಅಹಮದಾಬಾದ್: ಇಲ್ಲಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್​ ಚಾಲೆಂರ್ಸ್​​​ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್​ ನಡುವಿನ ಎಲಿಮಿನೇಟರ್​ ಪಂದ್ಯ ನಡೆಯಲಿದ್ದು, ಉಭಯ ತಂಡಗಳ ನಡುವಿನ ಕಾದಾಟವನ್ನು ವೀಕ್ಷಿಸಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ, ಪಂದ್ಯ ಶುರುವಾಗುವುದಕ್ಕೂ ಮುನ್ನ ಆತಂಕಕಾರಿ ವಿಚಾರ ಒಂದು ಬೆಳಕಿಗೆ ಬಂದಿದ್ದು, ಇದರ ಬೆನ್ನಲ್ಲೇ ಆರ್​ಸಿಬಿ ಅಭ್ಯಾಸ ಹಾಗೂ ಸುದ್ದಿಗೋಷ್ಠಿಯನ್ನು ರದ್ದುಪಡಿಸಲಾಗಿದೆ.

    ಆರ್‌ಸಿಬಿ ಮತ್ತು ರಾಜಸ್ಥಾನ್ ನಡುವಿನ ಪಂದ್ಯಕ್ಕಾಗಿ ಉಭಯ ತಂಡಗಳು ಸೋಮವಾರವೇ ಅಹಮದಾಬಾದ್‌ಗೆ ತಲುಪಿದ್ದವು. ಆರ್​ಸಿಬಿ ಕಳೆದ ಶನಿವಾರ ಚೆನ್ನೈ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಿತ್ತು. ಆ ನಂತರ ತಂಡದ ಆಟಗಾರರು ಭಾನುವಾರ ಮತ್ತು ಸೋಮವಾರ ವಿಶ್ರಾಂತಿ ಪಡೆದಿದ್ದರು. ಇದರ ಹೊರತಾಗಿಯೂ, ಅಹಮದಾಬಾದ್ ತಲುಪಿದ ನಂತರ ಆರ್​ಸಿಬಿ, ಎಲಿಮಿನೇಟರ್ ಪಂದ್ಯದ ಮೊದಲು ಅಭ್ಯಾಸದ ಅವಧಿಯನ್ನು ರದ್ದುಗೊಳಿಸಿತು. ವಿರಾಟ್ ಕೊಹ್ಲಿಯ ಸುರಕ್ಷತೆಯ ದೃಷ್ಟಿಯಿಂದ ಆರ್‌ಸಿಬಿ ತನ್ನ ಅಭ್ಯಾಸವನ್ನು ರದ್ದುಗೊಳಿಸಿದ್ದು, ಎರಡೂ ತಂಡಗಳ ಸುದ್ದಿಗೋಷ್ಠಿಯನ್ನು ಸಹ ರದ್ದುಪಡಿಸಲಾಗಿದೆ.

    ಇದನ್ನೂ ಓದಿ: ಮೇ 26ರಂದು ನಾವು ಫೈನಲ್​ ಆಡಬೇಕಷ್ಟೇ; ಐಪಿಎಲ್​ ಆರಂಭಕ್ಕೂ ಮುನ್ನ ಗೌತಮ್​ ಗಂಭೀರ್​ ಆಡಿದ ಮಾತುಗಳು ವೈರಲ್​

    ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಭಯೋತ್ಪಾದಕ ಚಟುವಟಿಕೆಗಳ ಶಂಕೆ ಮೇರೆಗೆ ಗುಜರಾತ್ ಪೊಲೀಸರು ನಾಲ್ವರು ಶಸ್ತ್ರಾಸ್ತ್ರಧಾರಿಗಳನ್ನು ಸೋಮವಾರ ರಾತ್ರಿ ಬಂಧಿಸಿದ್ದಾರೆ. ನಾಲ್ವರು ಆರೋಪಿಗಳ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಅವರಿಂದ ಶಸ್ತ್ರಾಸ್ತ್ರಗಳು, ಅನುಮಾನಾಸ್ಪದ ವೀಡಿಯೊಗಳು ಮತ್ತು ಪಠ್ಯ ಸಂದೇಶಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ನಾಲ್ವರು ಶಂಕಿತರ ಬಂಧನದಿಂದಾಗಿ ಆರ್‌ಸಿಬಿ ಟೆನ್ಷನ್‌ಗೆ ಒಳಗಾಗಿದ್ದು, ಈ ಕಾರಣಕ್ಕಾಗಿ ವಿರಾಟ್ ಕೊಹ್ಲಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆರ್‌ಸಿಬಿ ಅಭ್ಯಾಸವನ್ನು ರದ್ದುಗೊಳಿಸಿದೆ. ಆದರೆ, ಈ ಘಟನೆಯ ನಂತರವೂ ರಾಜಸ್ಥಾನ ತಂಡ ಮೈದಾನದಲ್ಲಿ ಅಭ್ಯಾಸ ನಡೆಸಿದೆ. ಮತ್ತೊಂದೆಡೆ, ಎರಡೂ ತಂಡಗಳು ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಿವೆ. ಅಭ್ಯಾಸದ ಅವಧಿಯನ್ನು ಏಕೆ ರದ್ದುಗೊಳಿಸಲಾಯಿತು ಎಂಬುದರ ಬ್ಗಗೆ ಆರ್​ಸಿಬಿ ಫ್ರಾಂಚೈಸಿ ಯಾವುದೇ ಅಧಿಕೃತ ಹೇಳಿಕೆಯಲ್ಲಿ ತಿಳಿಸದಿದ್ದರೂ, ವಿರಾಟ್ ಅವರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಭ್ಯಾಸವನ್ನು ರದ್ದುಗೊಳಿಸಲಾಗಿದೆ ಎಂದು ಹಲವು ಸುದ್ದಿ ಮಾಧ್ಯಮಗಳು ವರದಿ ಪ್ರಕಟಿಸಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts