2018ನೇ ಸಾಲಿನ ಗೌರವ ಪ್ರಶಸ್ತಿಗೆ ಮೂವರು ಆಯ್ಕೆ

ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ 2018ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಮೂವರು ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷ ಪೆಮ್ಮಂಡ ಕೆ.ಪೊನ್ನಪ್ಪ ತಿಳಿಸಿದ್ದಾರೆ.

ಕೊಡವ ಸಾಹಿತ್ಯ ಸಂಶೋಧನಾ ಕ್ಷೇತ್ರ -ಡಾ.ಬೊವ್ವೇರಿಯಂಡ ನಂಜಮ್ಮ ಚಿಣ್ಣಪ್ಪ, ಕೊಡವ ಕಲಾ ಕ್ಷೇತ್ರ- ಕೋಳೆರಸನ್ನು ಕಾವೇರಪ್ಪ ಹಾಗೂ ಕೊಡವ ಜಾನಪದ ಕ್ಷೇತ್ರದಲ್ಲಿ ನಾಳಿಯಮ್ಮಂಡ ಕೆ.ಅಚ್ಚಮ್ಮಯ್ಯರವರು ಆಯ್ಕೆಯಾಗಿದ್ದಾರೆ.

ಗೌರವ ಪ್ರಶಸ್ತಿಯು ರೂ.50,000 ನಗದು, ಶಾಲು, ಹಾರ, ಫಲತಾಂಬೂಲ, ಸ್ಮರಣೆಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ. ಜೂ.09 ರಂದು ಮಧ್ಯಾಹ್ನ 2 ಗಂಟೆಗೆ ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನಲ್ಲಿ ನಡೆಯುವ ಅಕಾಡೆಮಿಯ “ಬೊಳ್ಳಿನಮ್ಮೆ” ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರಾದ ತೋರೇರ ಮುದ್ದಯ್ಯ, ಹಂಚೇಟ್ಟಿರ ಮನು ಮುದ್ದಯ್ಯ ಬೊಳ್ಳಜಿರ ಬಿ.ಅಯ್ಯಪ್ಪ ಇದ್ದರು.

Leave a Reply

Your email address will not be published. Required fields are marked *