More

    ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ತುಮಕೂರಿನ ಮೂವರು ಅರೆಸ್ಟ್

    ತುಮಕೂರು: ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ತುಮಕೂರಿನ ಮಾರನಾಯಕನಪಾಳ್ಯದಲ್ಲಿ ತುಮಕೂರು ವಲಯ ಅರಣ್ಯಾಧಿಕಾರಿ ಪವಿತ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

    ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತರು. ಬಂಧಿತರು ಓರಿಸ್ಸಾ ಮೂಲದವರು. ಮಾರನಾಯಕನಪಾಳ್ಯದ ಇಟ್ಟಿಗೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು, ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಪ್ರಕರಣದಲ್ಲಿ ಮುಂದಾಗಿದ್ದ ಮೂವರುನ್ನು ಬಂಧಿಸಲಾಗಿದೆ.

    ನಡೆದಿದ್ದೇನು?: ಕಳೆದ ಹಲವು ದಿನಗಳಿಂದ ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಈ ವೇಳೆ 1.5 ಕೆಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು, ಮಾಂಸ ಬೇಯಿಸಿದ್ದ ಪಾತ್ರೆಗಳನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನ ಎಫ್ಎಸ್ಎಲ್ ಗೆ ಕಳುಹಿಸಲಾಗುತ್ತೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

    ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಪ್ರಕರಣ ಹಿನ್ನೆಲೆ, ಅರಣ್ಯಾಧಿಕಾರಿಗಳು ಫುಲ್ ಅಲರ್ಟ್ ಆಗಿದ್ದು, ಹುಲಿ ಉಗುರಿನ ಪೆಂಡೆಂಟ್​ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಹಾಗೂ ಹಲವೆಡೆ ದಾಳಿ ನಡೆಸಿ ಅರಣ್ಯ ಪಕ್ಷಗಳ ಭಕ್ಷಕರ ಎಡೆ ಮುರಿ ಕಟ್ಟುತಿದ್ದಾರೆ.

    ಏನಿದು ಪ್ರಕರಣ?: ಜಗ್ಗೇಶ್ ಅವರು 20ನೇ ವಯಸ್ಸಿನಲ್ಲಿದ್ದಾಗ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್​ನ ಗಿಫ್ಟ್ ಆಗಿ ನೀಡಿದ್ದರು. ಇದು ಜಗ್ಗೇಶ್ ಕೊರಳಲ್ಲೇ ಇತ್ತು. ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬಳಿಕ ಜಗ್ಗೇಶ್ ಬಳಿಯೂ ಹುಲಿ ಉಗುರು ಇದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು.

    VIDEO | ಹಾವಿನ ತುಟಿಗೆ ಬಾಯಿಟ್ಟು ಸಿಪಿಆರ್ ಚಿಕಿತ್ಸೆ ನೀಡಿದ ಪೊಲೀಸ್‌!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts