ಶೇ.99 ಮಂದಿಯಿಂದ ಸಾಧ್ಯವಾಗಿಲ್ಲ: ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ 3 ಪಕ್ಷಿಗಳನ್ನು ಗುರತಿಸಬಲ್ಲರು! Optical Illusion Challenge

Optical Illusion Challenge
Published on

Optical Illusion Challenge : ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದೃಷ್ಟಿ ಭ್ರಮೆ ಎಂದರೇನು?

ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (ಆಪ್ಟಿಕಲ್​ ಇಲ್ಯೂಶನ್​) ಎಂದು ಕರೆಯುತ್ತೇವೆ.

ಮೋಜಿನ ಮಾರ್ಗ

ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

Spot the Bird 1

ಅಭಿಷೇಕ್ (@Casual_birder) ಹೆಸರಿನ ಛಾಯಾಗ್ರಾಹಕರೊಬ್ಬರು 2023ರ ಜುಲೈ 3ರಂದು ತಮ್ಮ ಎಕ್ಸ್​ ಖಾತೆಯಲ್ಲಿ ಎರಡು ಫೋಟೋಗಳನ್ನು ಪೋಸ್ಟ್ ಮಾಡಿದ್ದರು. ಅದರ ಜೊತೆಗೆ ಪಕ್ಷಿಯನ್ನು ಹುಡುಕುವ ಸವಾಲು ಎಂದು ಶೀರ್ಷಿಕೆ ನೀಡಿದ್ದರು. ಸದ್ಯ ಆ ಫೋಟೋಗಳು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದ್ದು, ಮತ್ತೆ ಕಣ್ಣಿಗೊಂದು ಸವಾಲು ಹಾಕಿವೆ. ನೀವು ಮೇಲೆ ನೋಡುತ್ತಿರುವ ಚಿತ್ರದಲ್ಲಿ ಒಟ್ಟು ಮೂರು ಪಕ್ಷಿಗಳಿವೆ. ಅವುಗಳನ್ನು ಹುಡುಕುವುದು ಹುಲ್ಲಿನ ಬಣವೆಯಲ್ಲಿ ಸೂಜಿಯನ್ನು ಹುಡುಕುವುದಷ್ಟೇ ಕಠಿಣವಾಗಿದೆ. ಹೌದು, ಪಕ್ಷಿಗಳನ್ನು ಹುಡುಕಲು ನೀವು ಬಹಳಷ್ಟು ಯೋಚಿಸಬೇಕಾಗುತ್ತದೆ. ಈಗಾಗಲೇ ಅನೇಕ ಜನರು ಪ್ರಯತ್ನಿಸಿದ್ದಾರೆ. ಆದರೆ, ಅವರಿಗೆ ಒಂದೇ ಒಂದು ಪಕ್ಷಿಯನ್ನು ಗುರುತಿಸಲು ಸಾಧ್ಯವಾಗಿಲ್ಲ. ಮೂರು ಪಕ್ಷಿಗಳಿರಲಿ ಕನಿಷ್ಠ ಒಂದು ಪಕ್ಷಿಯನ್ನಾದರೂ ಹುಡುಕಲು ಬಯಸಿದರೆ, ನೀವು ಚಿತ್ರದ ಪ್ರತಿಯೊಂದು ಮೂಲೆಯನ್ನೂ ಎಚ್ಚರಿಕೆಯಿಂದ ನೋಡಬೇಕಾಗುತ್ತದೆ.

10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಪಕ್ಷಿಗಳು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಿದ್ದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ನಿಜಕ್ಕೂ ನೀವು ಜೀನಿಯಸ್​. ಒಂದು ವೇಳೆ ನಿಮಗೆ ಪಕ್ಷಿಗಳು ಕಾಣಿಸದಿದ್ದರೆ, ನೀವು ನೆಲವನ್ನು ಎಚ್ಚರಿಕೆಯಿಂದ ನೋಡಿ, ಆಗ ನಿಮಗೆ ಪಕ್ಷಿಗಳ ಕಣ್ಣುಗಳನ್ನು ಕಾಣುತ್ತವೆ. ಅದು ಕೂಡ ಕಾಣಿಸದಿದ್ದರೆ, ಫೋಟೋವನ್ನು ಜೂಮ್ ಮಾಡಿ. ಆಗಲೂ ನಿಮಗೆ ಏನು ಕಾಣಲಿಲ್ಲ ಅಂದರೆ, ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)

Spot the Bird 2
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net