More

    ಗ್ಯಾಸ್​ ಸೊರಿಕೆಯಾಗಿ ಸಿಲಿಂಡರ್ ಸ್ಫೋಟ; ಮೂವರು ಮೃತ್ಯು

    ಲಖನೌ: ಗ್ಯಾಸ್​ ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್​ನ ಲೋನಿ ಪ್ರದೇಶದಲ್ಲಿ ನಡೆದಿದೆ.

    ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಘಾಜಿಯಾಬಾದ್​ ಗ್ರಾಮೀಣ ಡಿಸಿಪಿ ವಿವೇಕ್​ಚಂದ್​ ಯಾದವ್ ಘಟನೆ ಶನಿವಾರ ರಾತ್ರಿ 11:30ರ ಸುಮಾರಿಗೆ ನಡೆದಿದೆ. ಬಿಲ್ಡಿಂಗ್​ನ ಮಾಲೀಕ ಶಕೀಲ್​ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸುತ್ತಿದ್ದ ಶಾರಿಖ್​ ಎಂಬಾತನಿಗೆ ಮನೆಯನ್ನು ಬಾಡಿಗೆ ನೀಡಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಇದನ್ನೂ ಓದಿ: ಸೊಮಾಲಿಯಾದಲ್ಲಿ ಆತ್ಮಾಹುತಿ ಬಾಂಬ್​ ದಾಳಿ; 13 ಮಂದಿ ಮೃತ್ಯು

    ಘಟನೆಯಲ್ಲಿ ಇಮ್ರಾನ್​ (16), ಫರ್ದೀನ್​ (18), ಆಲೀನಾ (12) ಮೃತಪಟ್ಟಿದ್ದಾರೆ. ಮೆವಿಸ್​ (45), ಶೈಸ್ತಾ (40), ಆಲಿಶಾ (10), ನಾರ್ರಿ (18) ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಡುಗೆ ಮಾಡುವ ವೇಳೆ ಸಿಲಿಂಡರ್​ ಸ್ಪೋಟಗೊಂಡ ಪರಿಣಾಮ ದುರಂತ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

    ಮನೆಯಲ್ಲಿ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಈ ಸಂಬಂಧ ಪರಿಶೀಲನೆಗೆಂದು ಫೋರೆನ್ಸಿಕ್​ ಹಾಗೂ ಶ್ವಾನದಳವನ್ನು ಸ್ಥಳಕ್ಕೆ ಕರೆಸಲಾಗಿದ್ದು, ಅವರು ನೀಡುವ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಘಾಜಿಯಾಬಾದ್​ ಗ್ರಾಮೀಣ ಡಿಸಿಪಿ ವಿವೇಕ್​ಚಂದ್​ ಯಾದವ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts