More

    ನ.5ಕ್ಕೆ ಮೂರು ಸ್ಪರ್ಧಾತ್ಮಕ ಪರೀಕ್ಷೆ; ಕೊನೆಗೂ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆ ಮುಂದಕ್ಕೆ

    ಬೆಂಗಳೂರು: ಮೂರು ಸ್ಪರ್ಧಾತ್ಮಕ ಪರೀಕ್ಷೆಗಳು ನ.5ರಂದೇ ನಿಗದಿಯಾಗಿದ್ದ ಕಾರಣ ಸಿವಿಲ್ ಕಾನ್‌ಸ್ಟೆಬಲ್ ನೇಮಕಾತಿಗೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ.

    2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪೊಲೀಸ್ ಕಾನ್‌ಸ್ಟೆಬಲ್ (ಸಿವಿಲ್) 454 ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ನ.19ಕ್ಕೆ ನಡೆಸಲು ಸಿದ್ಧತೆ ನಡೆಸುವಂತೆ ಪೊಲೀಸ್ ನೇಮಕಾತಿ ವಿಭಾಗ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸೂಚಿಸಿದ್ದಾರೆ.

    ಈಗಾಗಲೇ ನಿಗದಿಯಾಗಿರುವ ಪರೀಕ್ಷಾ ಕೇಂದ್ರಗಳು ಮತ್ತು ಇನ್ನಿತರ ಹೊಸ ಕೇಂದ್ರಗಳಲ್ಲಿ (ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ) ನ.19ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅನುಕೂಲ ಆಗುವಂತೆ ಪುನಃ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಂದ ಲಿಖಿತ ಒಪ್ಪಿಗೆ ಪತ್ರವನ್ನು ಪಡೆದು ಪ್ರಧಾನ ಕಚೇರಿಗೆ ಕಳುಹಿಸಿಕೊಡುವಂತೆ ಡಿಐಜಿಪಿ ಆದೇಶಿಸಿದ್ದಾರೆ.

    ವರದಿಗೆ ಸ್ಪಂದನೆ: ‘ಒಂದೇ ದಿನ ಮೂರು ಪರೀಕ್ಷೆ ನಿಗದಿ ಜೀತಿ’ ಎಂಬ ತಲೆಬರದಡಿ ‘ವಿಜಯವಾಣಿ’ ಅ.20ರಂದು ವಿಸ್ತೃತ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ಇದಕ್ಕೆ ಸ್ಪಂದಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿದ್ದರು. ಇದಕ್ಕೆ ಪೊಲೀಸ್ ನೇಮಕಾತಿ ವಿಭಾಗ ಸ್ಪಂದಿಸಿದ್ದು, ಸಿವಿಲ್ ಕಾನ್‌ಸ್ಟೆಬಲ್ ನೇಮಕಾತಿ ಲಿಖಿತ ಪರೀಕ್ಷೆ ದಿನಾಂಕ ಬದಲಾಯಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts