More

    ಎಂಜಿನಿಯರುಗಳು ಉದ್ಯೋಗ ನೀಡುವ ಉದ್ಯಮಿಗಳಾಗಬೇಕು, ಉದ್ಯೋಗಿಗಳಲ್ಲ: ಬಿಎಲ್​ಡಿಇ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

    ವಿಜಯಪುರ, ಮೇ. 25: ಎಂಜಿನಿಯರುಗಳು ಉದ್ಯೋಗ ಸೃಷ್ಠಿಕರ್ತರಾಗಬೇಕೇ ಹೊರತು ಉದ್ಯೋಗ ಹುಡುಕುವಂತಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದ್ದಾರೆ.

    ನಗರದ ಪ್ರತಿಷ್ಠಿತ ಬಿಎಲ್​ಡಿಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೂರು ದಿನಗಳ ಓಪನ್​ ಡೇ, ಇನ್​ವಿಕ್ಟಸ್ ತಾಂತ್ರಿಕ ಉತ್ಸವ ಹಾಗೂ ಸಂಭ್ರಮ ವಾರ್ಷಿಕ ದಿನಾಚರಣೆ ಮೂರು ದಿನಗಳ ಕಾರ್ಯಕ್ರಮ ನಡೆಯುತ್ತಿದೆ. ಆಕಾಶಕ್ಕೆ ಬಲೂನನ್ನು ಹಾರಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಭಾರತ ಆರ್ಥಿಕವಾಗಿ, ತಂತ್ರಜ್ಞಾನ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲು ಎಂಜಿನಿಯರುಗಳ ಪಾತ್ರ ಮಹತ್ವದ್ದಾಗಿದೆ. ಎಂಜಿನಿಯರುಗಳು ಉದ್ಯೋಗ ನೀಡುವ ಉದ್ಯಮಿಗಳಾಗಬೇಕೇ ಹೊರತು ಉದ್ಯೋಗ ಹುಡುಕುವಂತಾಗಬಾರದು. ವಿದ್ಯಾರ್ಥಿಗಳು ಇಂದಿನ ಆಧುನಿಕತೆಗೆ ತಕ್ಕಂತೆ ಸೃಜನಶೀಲರಾಗಬೇಕು. ಹೊಸ ಹೊಸ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರಲು ಕಾರ್ಯೋನ್ಮುಖರಾಗಬೇಕು. ಭಾರತದ ಆರ್ಥಿಕತೆ ಮತ್ತು ಸರ್ವಾಂಗೀಣ ಅಭಿವೃದ್ಧಿಯಲ್ಲಿ ಎಂಜಿನಿಯರುಗಳು ಶೇ. 25 ರಷ್ಟು ಕೊಡುಗೆ ನೀಡುತ್ತಿ್ದ್ದಾರೆ. ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಜಗತ್ತಿನ ಅಗತ್ಯಕ್ಕೆ ಅನುಗುಣವಾಗಿ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು.

    ಎಂಜಿನಿಯರುಗಳು ಉದ್ಯೋಗ ನೀಡುವ ಉದ್ಯಮಿಗಳಾಗಬೇಕು, ಉದ್ಯೋಗಿಗಳಲ್ಲ: ಬಿಎಲ್​ಡಿಇ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ
    ವಿಜಯಪುರ ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭವಾದ ಮೂರು ದಿನಗಳ ಓಪನಡೇ, ಇನವಿಕ್ಟಸ್ ತಾಂತ್ರಿಕ ಉತ್ಸವ ಹಾಗೂ ಸಂಭ್ರಮ ವಾರ್ಷಿಕ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಪ್ರಾತ್ಯಕ್ಷತೆ ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಂಗು ಸಜ್ಜನ, ಡಾ. ವಿ. ಜಿ. ಸಂಗಮ, ಜಿ. ವಿ. ಪಾಟೀಲ, ಪುಷ್ಪಾ ಪಾಟೀಲ ಉಪಸ್ಥಿತರಿದ್ದರು.



    ಇದೇ ವೇಳೆ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳು ತಯಾರಿಸಿದ ಪ್ರಾತ್ಯಕ್ಷತೆ ಪ್ರದರ್ಶನ ವೀಕ್ಷಿಸಿ ವಿದ್ಯಾರ್ಥಿಗಳ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ ಅವರು ಕಾಲೇಜಿನ ಪ್ರಗತಿಯ ಬಗ್ಗೆ ಹಾಗೂ ಮೂರು ದಿನದ ಕಾರ್ಯಕ್ರಮದ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿ. ಎಲ್. ಡಿ. ಇ. ಸಂಸ್ಥೆಯ ನಿರ್ದೇಶಕ ಸಂಗು ಸಜ್ಜನ ಉಪಸ್ಥಿತರಿದ್ದರು.

    ಎಂಜಿನಿಯರುಗಳು ಉದ್ಯೋಗ ನೀಡುವ ಉದ್ಯಮಿಗಳಾಗಬೇಕು, ಉದ್ಯೋಗಿಗಳಲ್ಲ: ಬಿಎಲ್​ಡಿಇ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ
    ಓಪನ್ ಡೆ ಕಾರ್ಯಕ್ರಮ: ವಿಜಯಪುರ ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭವಾದ ಮೂರು ದಿನಗಳ ಓಪನಡೇ, ಇನವಿಕ್ಟಸ್ ತಾಂತ್ರಿಕ ಉತ್ಸವ ಹಾಗೂ ಸಂಭ್ರಮ ವಾರ್ಷಿಕ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಆಕಾಶಕ್ಕೆ ಬಲೂನು ಹಾರಿ ಬಿಡುವ ಮೂಲಕ ಉದ್ಙಾಟಿಸಿದರು. ಈ ಸಂದರ್ಭದಲ್ಲಿ ಸಂಗು ಸಜ್ಜನ, ಡಾ. ವಿ. ಜಿ. ಸಂಗಮ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts