More

    ರಾಜ್ಯದಲ್ಲಿ ಮೂರು ದಿನ ಮಳೆ: ಹಲವೆಡೆ ತಾಪಮಾನವೂ ಹೆಚ್ಚಳ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ವಿವಿಧೆಡೆ ಮುಂದಿನ ಮೂರು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ. ಸೋಮವಾರ ಮೈಸೂರಿನ ಹುಣಸೂರು, ಕೊಪ್ಪಳದ ಗಂಗಾವತಿ ಹಾಗೂ ಚಿಕ್ಕಮಗಳೂರಿನ ಮೂಡುಗೆರೆ ಸೇರಿ ಹಲವು ಭಾಗಗಳಲ್ಲಿ ವರ್ಷಧಾರೆಯಾಗಿದೆ.

    ಕೇರಳ, ತಮಿಳುನಾಡು ಭಾಗದಲ್ಲಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕರ್ನಾಟಕ ಜಿಲ್ಲೆಗಳಾದ ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾನಗರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಅ.31ರಿಂದ ನ.4ರವರೆಗೆ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಮುಂದಿನ 24 ಗಂಟೆ ವ್ಯಾಪಕವಾಗಿ ವರ್ಷಧಾರೆಯಾಗಲಿದೆ.

    ಇದನ್ನೂ ಓದಿ: ಸಾಲ ಮನ್ನಾಕ್ಕೆ ಆಗ್ರಹಿಸಿ ರಸ್ತೆಗಿಳಿದ ರೈತರು

    ತಾಪಮಾನ ಮುಂದುವರಿಕೆ: ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸೋಮವಾರವೂ 34-35ರ ಅಸುಪಾಸಿನಲ್ಲಿ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿಯೂ ತಾಪಮಾನ ತುಸು ಏರಿಕೆಯಾಗಿದೆ. ಗೋಕರ್ಣದಲ್ಲಿ ಗರಿಷ್ಠ ತಾಪಮಾನದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts