ಆ್ಯಸಿಡ್ ಸೇವಿಸಿ ಗಂಭೀರಾವಸ್ಥೆಯಲ್ಲಿದ್ದ ಮೂವರು ಸಾವು

New Project (40)
Published on

ಕಾಸರಗೋಡು: ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಕ್ಲಾಯಿಯ ಒಂದೇ ಕುಟುಂಬದ ಮೂರು ಮಂದಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೈದಿದ್ದು, ಇನ್ನೊಬ್ಬರನ್ನು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರಕ್ಲಾಯಿಯ ಒಂಡಂಪುಳಿಕ್ಕಾಲ್ ನಿವಾಸಿಗಳಾದ ಗೋಪಿ(60), ಅವರ ಪತ್ನಿ ಇಂದಿರಾ(57), ಪುತ್ರರಾದ ರಾಜೇಶ್(22) ಮೃತಪಟ್ಟಿದ್ದು, ಇನ್ನೊಬ್ಬ ಪುತ್ರ ರಾಕೇಶ್ ಅವರನ್ನು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ಬೆಳಗ್ಗೆ ಆ್ಯಸಿಡ್ ಸೇವಿಸಿ ಗಂಭೀರಾವಸ್ಥೆಯಲ್ಲಿದ್ದ ನಾಲ್ಕೂ ಮಂದಿಯನ್ನು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೂವರು ಮೃತಪಟ್ಟಿದ್ದರು. ಇದೊಂದು ಸಾಮೂಹಿಕ ಆತ್ಮಹತ್ಯೆಯಾಗಿದ್ದು, ಆರ್ಥಿಕ ಸಂಕಷ್ಟ ಕೃತ್ಯಕ್ಕೆ ಕಾರಣವೆಂದು ಮೇಲ್ನೋಟಕ್ಕೆ ಸಾಬೀತಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ ಮನೆಯಲ್ಲಿ ವಾಂತಿ ಮಾಡುತ್ತಿರುವ ಶಬ್ದ ಕೇಳಿ ಆಸುಪಾಸಿನವರು ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣ ನಾಲ್ಕೂ ಮಂದಿಯನ್ನು ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶವಮಹಜರು ನಡೆಸಲಾಯಿತು. ಅಂಬಲತ್ತರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net