More

    ಅಗ್ನಿ ಅವಘಡದಲ್ಲಿ ಮೂರು ಸಾವು

    ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಕೈಗಾರಿಕೆ ವಸಾಹತು ಪ್ರದೇಶದ ಐ.ಸಿ. ಫ್ಲೇಮ್ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಭಾರಿ ಸದ್ದಿನೊಂದಿಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ತೀವ್ರ ಗಾಯಗೊಂಡು ಕಿಮ್್ಸ ಆಸ್ಪತ್ರೆಗೆ ದಾಖಲಾಗಿದ್ದು ಮೂವರು ಮೃತಪಟ್ಟಿದ್ದಾರೆ.

    ಗದಗ- ಬೆಟಗೇರಿ ಮೂಲದ ಸದ್ಯ ತಾರಿಹಾಳದಲ್ಲಿ ವಾಸವಾಗಿದ್ದ ವಿಜಯಲಕ್ಷ್ಮೀ ಯಚ್ಚಲಗಾರ (34), ತಾರಿಹಾಳದ ಗೌರವ್ವ ಹಿರೇಮಠ (45) ಹಾಗೂ ಕಲಘಟಗಿ ತಾಲೂಕು ಲಿಂಗನಕೊಪ್ಪದ ಮಾಳೇಶ ಹದ್ದನ್ನವರ (27) ಮೃತಪಟ್ಟವರು.

    ಇವರಲ್ಲಿ ವಿಜಯಲಕ್ಷ್ಮೀ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ತಡರಾತ್ರಿ ಮೃತಪಟ್ಟಿದ್ದರು. ಭಾನುವಾರ ಗೌರವ್ವ ಹಾಗೂ ಮಾಳೇಶ ಮೃತಪಟ್ಟಿದ್ದಾರೆ. ಈ ಮೂವರಿಗೂ ಶೇ.80ರಿಂದ 90ರಷ್ಟು ಸುಟ್ಟ ಗಾಯಗಳಾಗಿದ್ದವು. ವೈದ್ಯರ ಸತತ ಪ್ರಯತ್ನದ ನಂತರವೂ ಬದುಕಲಿಲ್ಲ. ಗಾಯಗೊಂಡವರಲ್ಲಿ ಉಳಿದ ಐವರ ಸ್ಥಿತಿಯೂ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಕಿಮ್್ಸ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

    ಐ.ಸಿ. ಫ್ಲೇಮ್ ಹೆಸರಿನ ಕಾರ್ಖಾನೆಯ ಮಾಲೀಕ ಮುಂಬೈ ಮೂಲದ ಅಬ್ದುಲ್ ಖಾದಿರ್ ಶೇಖ್ ಹಾಗೂ ಮ್ಯಾನೇಜರ್ ಮಂಜುನಾಥ ವಿರುದ್ಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕಾರ್ಖಾನೆ ಮ್ಯಾನೇಜರ್ ಸೇರಿ ಕೆಲವರನ್ನು ವಶಕ್ಕೆ ಪಡದಿದ್ದು, ತನಿಖೆ ನಡೆಸುತ್ತಿದ್ದಾರೆ.

    ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮದ ಭರವಸೆ ನೀಡಿದ ಸಚಿವ ಹಾಲಪ್ಪ ಆಚಾರ್

    ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಐ.ಸಿ. ಫ್ಲೇಮ್ ಎಂಬ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬ ವರ್ಗದವರಿಗೆ ಸರ್ಕಾರದಿಂದ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಅವಘಡಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.

    ಘಟನೆ ನಡೆದ ಸ್ಥಳಕ್ಕೆ ಭಾನುವಾರ ಮಧ್ಯಾಹ್ನ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಕಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts