ಮಂಗಳೂರು ಪಿಕಪ್ ಪಲ್ಟಿ ಮೂವರಿಗೆ ಗಾಯ

accident-15
Published on

ಮಂಗಳೂರು: ಜಪ್ಪಿನಮೊಗರು ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ, ಮಗುಚಿ ಬಿದ್ದ ಪರಿಣಾಮ ವಾಹನದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.

ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ವಾಹನದ ಚಾಲಕ ರತೀಶ್ (38), ವಾಹನದಲ್ಲಿದ್ದ ಶೈಲಜಾ (57) ಮತ್ತು ಶಾರದಾ(60) ಎಂಬವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೇರಳ ನೋಂದಣಿಯ ವಾಹನವಾಗಿದ್ದು, ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ವಾಹನದಲ್ಲಿ ಮೀನು ಹೇರಿಕೊಂಡು ಹೋಗಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಗಾಯಗೊಂಡವರ ಕಡೆಯಿಂದ ಸಂಜೆ ವರೆಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ದಕ್ಷಿಣ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net